ಸುರತ್ಕಲ್ ಟೋಲ್ ಗೇಟ್ ರದ್ದಿಗೆ ಕೇಂದ್ರ ಅಸ್ತು: ಟ್ವೀಟ್ ಮಾಡಿ ಮಾಹಿತಿ ನೀಡಿದ ಸಂಸದ
ಸುರತ್ಕಲ್: ಕಳೆದ ಏಳು ವರ್ಷಗಳ ನಿರಂತರ ಬೇಡಿಕೆ ಮತ್ತು ಎಡೆಬಿಡದ ಹೋರಾಟದ ಬಳಿಕ ಕಡೆಗೂ ಸುರತ್ಕಲ್ ಟೋಲ್ ಗೇಟ್ ರದ್ದಾಗಿ ಜನರಿಗೆ ನರಕದಿಂದ ಮುಕ್ತಿ ದೊರೆಯಲಿದೆ. ಟೋಲ್ ಗೇಟ್ ರದ್ದಾಗುವ ಬಗ್ಗೆ ದ.ಕ ಸಂಸದ ನಳಿನ್ ಕುಮಾರ್ ಕಟೀಲ್ ಟ್ವೀಟ್ ಮಾಡಿ ತಿಳಿಸಿದ್ದಾರೆ. ಮಂಗಳೂರಿನ ಸುರತ್ಕಲ್ ಸಮೀಪದ ಟೋಲ್ ಸಂಗ್ರಹ ಕೇಂದ್ರ ರದ್ದಾಗಿದ್ದು, ನಮ್ಮ ಮನವಿಗೆ ಸೂಕ್ತವಾಗಿ ಸ್ಪಂದಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಾಗರಿಕರ ಪರವಾಗಿ ಧನ್ಯವಾದಗಳು ಎಂದು […]
ಬ್ರಹ್ಮಾವರ-ಹೆಬ್ರಿ ರಸ್ತೆ ಅಗಲೀಕರಣ: ಕಲ ಕಂಬುಲವಾದ ರಸ್ತೆ; ವಾಹನ ಸವಾರರ ಪರದಾಟ
ಬ್ರಹ್ಮಾವರ: ಇಲ್ಲಿನ ಬ್ರಹ್ಮಾವರ-ಹೆಬ್ರಿ ರಸ್ತೆ ಅಗಲೀಕರಣ ನಡೆಯುತ್ತಿದ್ದು, ಕಾಮಗಾರಿಯ ಸಂದರ್ಭದಲ್ಲಿ ಧಾರಾಕಾರ ಮಳೆ ಸುರಿದದ್ದರಿಂದ ಕೆಸರು ತುಂಬಿದ ರಸ್ತೆ ಕಂಬಳದ ಕಳದಂತಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಕೆಸರಿನಲ್ಲಿ ಜಾರುವ ರಸ್ತೆಯಿಂದಾಗಿ ಹಲವಾರು ದ್ವಿಚಕ್ರ ವಾಹನ ಸವಾರರು ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟಿದ್ದಾರೆ ಎಂದು ವರದಿಯಾಗಿದೆ.
ಚೇರ್ಕಾಡಿ ಮುಂಡ್ಕಿನಜಡ್ಡು ಶ್ರೀ ಗೋಪಾಲಕೃಷ್ಣ ಮಂದಿರದಲ್ಲಿ ದೀಪೋತ್ಸವ
ಬ್ರಹ್ಮಾವರ: ನ.12 ಶನಿವಾರದಂದು ಚೇರ್ಕಾಡಿ ಮುಂಡ್ಕಿನಜಡ್ಡು ಶ್ರೀ ಗೋಪಾಲಕೃಷ್ಣ ಮಂದಿರದಲ್ಲಿ ದೀಪೋತ್ಸವ ಜರುಗಿತು.
69ನೇ ಅಖಿಲ ಭಾರತ ಸಹಕಾರ ಸಪ್ತಾಹ: ಎಂ.ಎನ್. ರಾಜೇಂದ್ರ ಕುಮಾರ್ ಅವರಿಗೆ ಸನ್ಮಾನ
ಉಚ್ಚಿಲ: 69ನೇ ಅಖಿಲ ಭಾರತ ಸಹಕಾರ ಸಪ್ತಾಹದ ಉದ್ಘಾಟನಾ ಸಮಾರಂಭ ಹಾಗೂ ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರ ಅಭಿನಂದನಾ ಸಮಾರಂಭವು ಸೋಮವಾರದಂದು ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಸಭಾಂಗಣದಲ್ಲಿ ನೆರವೇರಿತು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ನಿ., ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿ., ಉಡುಪಿ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿ., ಮಂಗಳೂರು, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ರಿ., ಮಂಗಳೂರು ದಕ್ಷಿಣ ಕನ್ನಡ ಸಹಕಾರಿ […]
ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ್ ಶೆಟ್ಟಿ ಇಂದ್ರಾಳಿ ಸಹಕಾರ ರತ್ನ ಪ್ರಶಸ್ತಿಗೆ ಆಯ್ಕೆ
ಉಡುಪಿ: ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕ, ಬಡಗುಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ವಿಶೇಷ ಕರ್ತವ್ಯ ನಿರ್ವಹಣಾಧಿಕಾರಿ, ಉಡುಪಿ ತುಳುಕೂಟದ ಅಧ್ಯಕ್ಷ ಬಿ. ಜಯಕರ್ ಶೆಟ್ಟಿ ಇಂದ್ರಾಳಿ ಇವರು ಸಹಕಾರ ಕ್ಷೇತ್ರದ ಅತ್ಯುನ್ನತ ಗೌರವ, 2022ನೇ ಸಾಲಿನ ಸಹಕಾರ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಸಹಕಾರ ಕ್ಷೇತ್ರದ ವಿಶಿಷ್ಟ ಸಾಧನೆಗಾಗಿ ಸಹಕಾರ ರತ್ನ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.