ಮಣಿಪಾಲ ಶ್ರೀ ಶಾರದಾ ಟ್ರೈನಿಂಗ್ ಇನ್ ಸ್ಟಿಟ್ಯೂಟ್; ಕಲಿಕಾ ತೊಂದರೆ ಕುರಿತ ಕಾರ್ಯಾಗಾರ

ಮಣಿಪಾಲ: ಶ್ರೀ ಶಾರದಾ ಟ್ರೈನಿಂಗ್ ಇನ್ಸ್ಟಿಟ್ಯೂಟ್, ಮಣಿಪಾಲದಲ್ಲಿ, ಮಾಂಟೆಸ್ಸರಿ/ನರ್ಸರಿ ಟೀಚರ್ ಟ್ರೈನಿಂಗ್‍ನ ವಿದ್ಯಾರ್ಥಿ ಶಿಕ್ಷಕಿಯರಿಗೆ ಕಲಿಕಾ ತೊಂದರೆ (Learning disabilities), ಎಡಿಹೆಚ್‍ಡಿ (ADHD) ಹಾಗೂ ಆಟಿಸಂ (Autism) ನ ಬಗ್ಗೆ ಮಾಹಿತಿ ಕಾರ್ಯಾಗಾರವನ್ನು, ಮಣಿಪಾಲದ ಡಿಪಾರ್ಟಮೆಂಟ್ ಆಫ್ ಕ್ಲಿನಿಕಲ್ ಸೈಕೋಲೊಜಿ, (MCHP) ಅಸಿಸ್ಟೆಂಟ್ ಪ್ರೊಫೆಸರ್,  ಡಾ. ದೀಪಾ ಫ್ರಾಂಕ್‍ರವರು ನಡೆಸಿದರು. ಅವರು ಪೂರ್ವ ಪ್ರಾರ್ಥಮಿಕ ಶಾಲೆಯ ಮಕ್ಕಳಲ್ಲಿ ಈ ಕಲಿಕಾ ತೊಂದರೆಯನ್ನು ಹೇಗೆ ಗುರುತಿಸುವುದು?, ಮಕ್ಕಳೊಂದಿಗೆ ಹೇಗೆ ಹೊಂದಾಣಿಕೆಗಳನ್ನು ಮಾಡಿಕೊಳ್ಳುವುದು?, ಆಟಿಸಂ ಆರಂಭದಲ್ಲೇ ಗುರುತಿಸುವುದು ಹೇಗೆ? ನಂತರದ […]

ನವೆಂಬರ್ 19 ರಂದು ತ್ರಿಶಾ ಕ್ಲಾಸಸ್ ವತಿಯಿಂದ ದ್ವಿತೀಯ ಪಿಯುಸಿ ವಾಣಿಜ್ಯ ವಿದ್ಯಾರ್ಥಿಗಳಿಗೆ ಉಚಿತ ಕಾರ್ಯಾಗಾರ

ಉಡುಪಿ: ವಾಣಿಜ್ಯ ವಿಭಾಗದಲ್ಲಿ ದ್ವಿತೀಯ ಪಿಯುಸಿ ನಂತರ ಮುಂದೇನು ಎನ್ನುವ ಆಲೋಚನೆಯಲ್ಲಿರುವ ವಿದ್ಯಾರ್ಥಿಗಳಿಗೆ ವಿಶೇಷ ಕಾರ್ಯಗಾರವೊಂದನ್ನು ಏರ್ಪಡಿಸಿಲಾಗಿದೆ. ನ.19 ರಂದು ಮಧ್ಯಾಹ್ನ 2:15 ರಿಂದ ಸಂಜೆ 4:30 ರವರೆಗೆ ಉಡುಪಿಯ ಕಿದಿಯೂರು ಹೊಟೇಲಿನ ಅನಂತಶಯನ ಸಭಾಂಗಣದಲ್ಲಿ ಕಾರ್ಯಾಗಾರ ನಡೆಯಲಿದ್ದು, ಈ ಕಾರ್ಯಕ್ರಮವನ್ನು ಉಡುಪಿಯ ತ್ರಿಶಾ ಕ್ಲಾಸ್ಸಸ್ ಸಂಸ್ಥೆಯು ನೆರವೇರಿಸಿ ಕೊಡಲಿದೆ. ವಾಣಿಜ್ಯ ಕ್ಷೇತ್ರದಲ್ಲಿ ಇರುವ ವಿವಿಧ ಕೋರ್ಸ್ ಗಳು ಮತ್ತು ಪದವಿಗಳ ಸರಿಯಾದ ಸಂಯೋಜನೆಯ ಕುರಿತು ಮಾರ್ಗದರ್ಶನ ನೀಡುವ ಉದ್ದೇಶ ಈ ಕಾರ್ಯಗಾರದ್ದಾಗಿದೆ. ಸಿ.ಎ, ಸಿ.ಎಂ.ಎ ಮತ್ತು […]

ನ. 18-20 ರವರೆಗೆ ಮಾಹೆಯ 30 ನೇ ಘಟಿಕೋತ್ಸವ ಕಾರ್ಯಕ್ರಮ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾಗಿ

ಮಣಿಪಾಲ: ಮಾಹೆಯ 30 ನೇ ಘಟಿಕೋತ್ಸವ ಕಾರ್ಯಕ್ರಮವು ನವೆಂಬರ್ 18, 19 ಮತ್ತು 20 ರಂದು ಮೂರು ದಿನಗಳ ಕಾಲ ನಡೆಯಲಿದ್ದು, ಈ ಸಂದರ್ಭದಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಶೈಕ್ಷಣಿಕ ಕ್ಷೇತ್ರದ ಅನೇಕ ಸಾಧ್ಯತೆಗಳ ಕುರಿತು ಚರ್ಚೆಗಳು ನಡೆಯಲಿದ್ದು ಸುಮಾರು ಐದು ಸಾವಿರ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ಮಾಹೆ ಸಹ ಕುಲಪತಿ ಎಚ್.ಎಸ್ ಬಲ್ಲಾಳ್ ಇಂದು ನಡೆದ ರಾಷ್ಟೀಯ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು. ಘಟಿಕೋತ್ಸವದ ಮೊದಲ ದಿನ-ನವೆಂಬರ್ 18 ರಂದು ಭಾರತದ ರಕ್ಷಣಾ ಸಚಿವ ರಾಜನಾಥ್ […]

ಪ.ಜಾ/ಪ.ಪ ಪತ್ರಿಕೋದ್ಯಮ ಪದವೀಧರರಿಗೆ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ತರಬೇತಿ

ಉಡುಪಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ವೃತ್ತಿಯಲ್ಲಿ ತೊಡಗಿಸಿಕೊಳ್ಳಲು ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ 12 ತಿಂಗಳ ಅಪ್ರೆಂಟಿಸ್ ತರಬೇತಿಗೆ ಅರ್ಹ ಪತ್ರಿಕೋದ್ಯಮ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ. ಉಡುಪಿ ಜಿಲ್ಲಾ ಕಚೇರಿಗೆ 2022-23 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿಯ ಇಬ್ಬರು ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು. ಆಯ್ಕೆಯಾದ ಪ್ರತಿ ಅಪ್ರೆಂಟಿಸ್‌ಗೆ ತರಬೇತಿ ಅವಧಿಯಲ್ಲಿ ತಿಂಗಳಿಗೆ 15 […]

ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಆಸ್ಪತ್ರೆಗೆ ದಾಖಲು: ಸಾರ್ವಜನಿಕ ಸಂಪರ್ಕಕ್ಕೆ ಅಲಭ್ಯ

ಉಡುಪಿ: ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ತುರ್ತು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಅವರು, “ತುರ್ತು ಚಿಕಿತ್ಸೆಗಾಗಿ ನಾನು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ವೈದ್ಯರ ಸಲಹೆಯಂತೆ 4-5 ದಿನಗಳ ಕಾಲ ಸಾರ್ವಜನಿಕ ಸಂಪರ್ಕಕ್ಕೆ ಸಿಗುತ್ತಿಲ್ಲ. ಯಾವುದೇ ಕೆಲಸಗಳಿಗಾಗಿ ನನ್ನ ಆಪ್ತ ಸಹಾಯಕರನ್ನು ಮತ್ತು ನನ್ನನ್ನು ದೂರವಾಣಿ ಮೂಲಕ ಸಂಪರ್ಕಿಸಲು ಕೋರುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.