ಉಡುಪಿ: ನಾಳೆ ಪುರಭವನದಲ್ಲಿ ಸಹಕಾರ ಸಪ್ತಾಹ ಆಚರಣೆ
ಉಡುಪಿ: ರಾಜ್ಯ ಸಹಕಾರ ಮಾರಾಟ ಮಹಾಮಂಡಳ, ಜಿಲ್ಲಾ ಸಹಕಾರ ಯೂನಿಯನ್, ಉಡುಪಿ ತಾಲೂಕು ವ್ಯವಸಾಯ ಉತ್ಪನ್ನ ಸಹಕಾರ ಮಾರಾಟ ಸಂಘ, ಸಹಕಾರ ಇಲಾಖೆ ಆಶ್ರಯದಲ್ಲಿ 69ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಅಜ್ಜರಕಾಡಿನ ಪುರಭವನದ ಮಿನಿ ಸಭಾಂಗಣದಲ್ಲಿ ನಾಳೆ ಅಪರಾಹ್ನ 3 ಗಂಟೆಗೆ ‘ಯುವಜನ, ಮಹಿಳೆ, ಅಬಲ ವರ್ಗ ಮತ್ತು ಆರೋಗ್ಯಕ್ಕಾಗಿ ಸಹಕಾರ ಸಂಸ್ಥೆ’ ದಿನದ ಆಚರಣೆ ನಡೆಯಲಿದೆ. ಅಪರ ಜಿಲ್ಲಾಧಿಕಾರಿ ವೀಣಾ ಬಿ. ಎನ್. ಕಾರ್ಯಕ್ರಮ ಉದ್ಘಾಟಿಸಲಿದ್ದು, ಟಿಎಪಿಸಿಎಂಎಸ್ ಅಧ್ಯಕ್ಷ ಬಿ. ಅಶೋಕ್ ಕುಮಾರ್ […]
ಜಿಲ್ಲಾ ಮಟ್ಟದ ಯುವಜನೋತ್ಸವ
ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಪ್ರಸಕ್ತ ಸಾಲಿನ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವು ನವೆಂಬರ್ 19 ರಂದು ಬೆಳಗ್ಗೆ 9.30 ಕ್ಕೆ ನಗರದ ಪುರಭವನದಲ್ಲಿ ನಡೆಯಲಿದೆ. ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಾಸಕ ಕೆ. ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಮತ್ತು ರೈತ […]
ದೇಶದ ಮೊದಲ ಖಾಸಗಿ ರಾಕೆಟ್ ಉಡಾಯಿಸಿದ ಇಸ್ರೋ: ಯಶಸ್ಸನ್ನು ಪ್ರಧಾನಿ ಮೋದಿಗೆ ಅರ್ಪಿಸಿದ ಸ್ಕೈರೂಟ್ ಸಂಸ್ಥೆ
ನವದೆಹಲಿ: ದೇಶದ ಮೊದಲ ಖಾಸಗಿ ರಾಕೆಟ್ ಅನ್ನು ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಯಶಸ್ವಿಯಾಗಿ ಉಡಾಯಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ವಿಕ್ರಮ್-ಎಸ್ ಹೆಸರಿನ ಖಾಸಗಿ ರಾಕೆಟ್ ಅನ್ನು ಉಡಾವಣೆ ಮಾಡಲಾಗಿದೆ. ಇಸ್ರೋದ ಈ ಸಾಧನೆಗಾಗಿ ಪ್ರಧಾನಿ ಮೋದಿ ಅಭಿನಂದಿಸಿದ್ದು, “ಸ್ಕೈರೂಟ್ ಏರೋಸ್ಪೇಸ್ ಅಭಿವೃದ್ಧಿಪಡಿಸಿದ ರಾಕೆಟ್ ವಿಕ್ರಮ್-ಎಸ್ ಇಂದು ಶ್ರೀಹರಿಕೋಟಾದಿಂದ ಉಡಾವಣೆಗೊಂಡಿರುವುದು ಭಾರತಕ್ಕೆ ಐತಿಹಾಸಿಕ ಕ್ಷಣ! ಇದು ಭಾರತದ ಖಾಸಗಿ ಬಾಹ್ಯಾಕಾಶ ಉದ್ಯಮದ ಪಯಣದಲ್ಲಿ ಪ್ರಮುಖ ಮೈಲಿಗಲ್ಲು. ಇಸ್ರೋ ಮತ್ತು ಇನ್ ಸ್ಪೇಸ್ ಇಂಡಿಯಾಗೆ ಅಭಿನಂದನೆಗಳು” […]
21 ಡಿಸಿಸಿ ಬ್ಯಾಂಕ್ ಗಳಲ್ಲಿ ಮಂಗಳೂರು ಡಿಸಿಸಿ ಬ್ಯಾಂಕ್ ಒಂದನೇ ಸ್ಥಾನದಲ್ಲಿದೆ: ಎಸ್.ಟಿ ಸೋಮಶೇಖರ್
ಮಂಗಳೂರು: ಎಲ್ಲಾ ಕ್ಷೇತ್ರದಲ್ಲಿ ಸಹಕಾರ ಕ್ಷೇತ್ರ ಮುಂಚೂಣಿಯಲ್ಲಿದ್ದು, ಸಹಕಾರ ಕ್ಷೇತ್ರದಲ್ಲಿ ಭಾರತದಲ್ಲಿಯೆ ಕರ್ನಾಟಕ ಎರಡನೇ ಮುಂಚೂಣಿ ರಾಜ್ಯವಾಗಿರುವುದು ನಮ್ಮೆಲ್ಲರ ಹೆಮ್ಮೆ. ಇಲ್ಲಿ ಠೇವಣಿದಾರರ ವಿಶ್ವಾಸ ಉಳಿಸಿಕೊಂಡು ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸಲಾಗುತ್ತಿದೆ ಎಂದು ರಾಜ್ಯ ಸಹಕಾರ ಸಚಿವ ಎಸ್.ಟಿ ಸೋಮಶೇಖರ್ ಹೇಳಿದರು. ಮಂಗಳೂರಿನಲ್ಲಿ ಹಮ್ಮಿಕೊಂಡಿದ್ದ 69ನೇ ಅಖಿಲ ಭಾರತ ಸಹಕಾರ ಸಪ್ತಾಹ-2022 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಹಕಾರ ಕ್ಷೇತ್ರ ಜೀವಂತವಾಗಿರುವುದಕ್ಕೆ ಇಲ್ಲಿ ಸೇರಿರುವ ಜನರೇ ಸಾಕ್ಷಿ. ಮಂಗಳೂರು ಭಾಗದಲ್ಲಿ ಸಹಕಾರ ಕ್ಷೇತ್ರ ಗಟ್ಟಿಯಾಗಿದೆ. ಸಹಕಾರ ಕ್ಷೇತ್ರ […]
ನವೆಂಬರ್ 19 ರಂದು ಬ್ಯಾಂಕ್ ಮುಷ್ಕರ: ದೇಶಾದ್ಯಂತ ಬ್ಯಾಂಕಿಂಗ್ ಸೇವೆಗಳ ಮೇಲೆ ಪರಿಣಾಮ ಸಾಧ್ಯತೆ
ನವದೆಹಲಿ: ಅಖಿಲ ಭಾರತ ಬ್ಯಾಂಕ್ ನೌಕರರ ಸಂಘದ ಮುಷ್ಕರದ ಕರೆಯಿಂದಾಗಿ ನವೆಂಬರ್ 19, ಶನಿವಾರದಂದು ದೇಶಾದ್ಯಂತ ಬ್ಯಾಂಕಿಂಗ್ ಸೇವೆಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಮುಷ್ಕರದ ದಿನಗಳಲ್ಲಿ ಬ್ಯಾಂಕಿನ ಶಾಖೆಗಳು ಮತ್ತು ಕಚೇರಿಗಳ ಸುಗಮ ಕಾರ್ಯನಿರ್ವಹಣೆಗೆ ಬ್ಯಾಂಕ್ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದರೂ, ಮುಷ್ಕರವು ಕಾರ್ಯರೂಪಕ್ಕೆ ಬಂದರೆ, ಶಾಖೆಗಳು ಮತ್ತು ಕಚೇರಿಗಳ ಕಾರ್ಯನಿರ್ವಹಣೆಯ ಮೇಲೆ ಪರಿಣಾಮ ಬೀರಬಹುದು ಎಂದು ಎಐಬಿಇಎ ತಿಳಿಸಿದೆ. ರಾಷ್ಟ್ರವ್ಯಾಪಿ ಮುಷ್ಕರಕ್ಕೂ ಮುನ್ನ ಎಐಬಿಇಎ ಸದಸ್ಯರು ವಿವಿಧ ರೀತಿಯ ಪ್ರತಿಭಟನೆಗಳನ್ನು ನಡೆಸಲಿದೆ ಎಂದು ವರದಿಯಾಗಿದೆ. ಬ್ಯಾಂಕಿಂಗ್ […]