ಹೀರೋ ಮೋಟರ್ ಕಾರ್ಪ್ ಮತ್ತು ಹಾರ್ಲೇ- ಡೇವಿಡ್ ಸನ್ ಪಾಲುದಾರಿಕೆಯಲ್ಲಿ ಬರಲಿದೆ ಮಧ್ಯಮ ತೂಕದ ಬೈಕ್ ಗಳು

ಹೀರೋ ಮೋಟರ್ ಕಾರ್ಪ್ ಮತ್ತು ಹಾರ್ಲೇ- ಡೇವಿಡ್ ಸನ್ ಎರಡು ವರ್ಷಗಳ ಹಿಂದೆ ಸಹಿ ಮಾಡಿದ ಪರಸ್ಪರ ಲಾಭದಾಯಕ ಪಾಲುದಾರಿಕೆಯ ಲಾಭವನ್ನು ಪಡೆದು ಭಾರತೀಯ ಮಾರುಕಟ್ಟೆಯಲ್ಲಿ ಮಧ್ಯಮ ತೂಕದ ಮೋಟಾರ್‌ಸೈಕಲ್ ವಿಭಾಗಕ್ಕೆ ಪ್ರವೇಶಿಸಲು ಯೋಜಿಸುತ್ತಿವೆ. 350 ಸಿಸಿಯಿಂದ 850 ಸಿಸಿ ದ್ವಿಚಕ್ರವಾಹನಗಳನ್ನು ಗುರಿಯಾಗಿಟ್ಟುಕೊಂಡು, ಮೊದಲ ಮೋಟಾರ್‌ಸೈಕಲ್ ಅನ್ನು 2023-24 ಆರ್ಥಿಕ ವರ್ಷದ ಅಂತ್ಯದ ವೇಳೆಗೆ ಬಿಡುಗಡೆ ಮಾಡಲಾಗುವುದು ಎನ್ನಲಾಗಿದೆ. ಇದನ್ನು ಆಯಾಯ ಬ್ರ್ಯಾಂಡ್‌ನ ಪ್ರತ್ಯೇಕ ಡೀಲರ್‌ಶಿಪ್‌ಗಳ ಮೂಲಕ ಮಾರಾಟ ಮಾಡಲಾಗುತ್ತದೆ ಮತ್ತು ವರದಿಯ ಪ್ರಕಾರ ಹೊಸ ಮಾದರಿಗಳ […]

ರಾಜ್ಯ ಸರ್ಕಾರದ ಶ್ರೀಗಂಧ ನೀತಿ-2022: ರೈತರು ಶ್ರೀಗಂಧ ಬೆಳೆದು ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಅವಕಾಶ

ಬೆಂಗಳೂರು: ಶ್ರೀಗಂಧಕ್ಕೆ ದೇಶೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚುತ್ತಿರುವ ಬೇಡಿಕೆಗಳನ್ನು ಪೂರೈಸಲು ರಾಜ್ಯ ಸರ್ಕಾರವು ಶ್ರೀಗಂಧ ನೀತಿ-2022 ಅನ್ನು ಹೊರತಂದಿದ್ದು, ಇದರಲ್ಲಿ ರೈತರು ತಮ್ಮ ಹೊಲಗಳಲ್ಲಿ ಶ್ರೀಗಂಧವನ್ನು ಬೆಳೆದು ನಂತರ ಅದನ್ನು ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗಿದೆ. ಈ ಹಿಂದೆ, ಮುಕ್ತ ಮಾರುಕಟ್ಟೆಯಲ್ಲಿ ಶ್ರೀಗಂಧ ಮಾರಾಟಕ್ಕೆ ನಿರ್ಬಂಧವಿತ್ತು .ಈ ನೀತಿ ಜಾರಿಗೆ ಬರುವುದರೊಂದಿಗೆ, ಕಳ್ಳತನ ತಡೆಯಲು ಶ್ರೀಗಂಧದ ಮರಕ್ಕೆ ರಕ್ಷಣೆ ನೀಡಲು ಕ್ರಮಕೈಗೊಳ್ಳಲಾಗುವುದು ಎಂದು ಸಚಿವ ಸುಧಾಕರ್ ತಿಳಿಸಿದ್ದು, ತಂತ್ರಜ್ಞಾನದ ಬಳಕೆಯಿಂದ ಶ್ರೀಗಂಧದ ಮರಗಳಿಗೆ […]

ಕಮಾಂಡೋ ಚಿತ್ರದ ಶೂಟಿಂಗ್ ವೇಳೆ ನಟಿ ರಾಗಿಣಿ ಕೈಗೆ ಗಾಯ

ನಟಿ ರಾಗಿಣಿ ದ್ವಿವೇದಿ ‘ನಾನು ಒಬ್ಬ ಭಾರತೀಯ’ ಚಿತ್ರದಲ್ಲಿ ಮುಖ್ಯಪಾತ್ರದಲ್ಲಿ ಕಾಣಿಸಿಕೊಳ್ಳುವ ಮೂಲಕ ಮತ್ತೆ ತೆರೆಯ ಮೇಲೆ ಬರಲು ಸಜ್ಜಾಗಿದ್ದಾರೆ. ಕಮಾಂಡೋ ಚಿತ್ರದ ಚಿತ್ರೀಕರಣ ಚೆನ್ನೈನಲ್ಲಿ ನಡೆಯುತ್ತಿದ್ದು, ಶೂಟಿಂಗ್​ ಸಮಯದಲ್ಲಿ ರಾಗಿಣಿ ಅವರ ಕೈಗೆ ಬಲವಾದ ಪೆಟ್ಟು ಬಿದ್ದಿದೆ. ಹೀಗಾಗಿ ವೈದ್ಯರು 4 ದಿನಗಳ ಕಾಲ ಬೆಡ್ ರೆಸ್ಟ್​ನಲ್ಲಿರಲು ಹೇಳಿದ್ದಾರೆ ಎಂದು ವರದಿಯಾಗಿದೆ.

ಅರ್ಧ ಶತಕ ಬಾರಿಸಿದ ಕಾಂತಾರ: ಪಂಜುರ್ಲಿ ಮತ್ತು ಗುಳಿಗ ದೈವದ ಆಶೀರ್ವಾದವೆಂದ ರಿಷಬ್ ಶೆಟ್ಟಿ

ಜಗತ್ತಿನಾದ್ಯಂತ ಹಿರಿ-ಕಿರಿ ಎಂಬ ಬೇಧವಿಲ್ಲದೆ ಎಲ್ಲರ ಹೃದಯಗಳನ್ನು ಗೆದ್ದ ಕಾಂತಾರ ಚಿತ್ರವು ಯಶಸ್ವಿ 50 ದಿನಗಳನ್ನು ಪೂರೈಸಿದೆ. ಚಿತ್ರವೊಂದು ಎಷ್ಟು ಕೋಟಿ ಗಳಿಸಿತು ಎನ್ನುವುದನ್ನೇ ಲೆಕ್ಕ ಹಾಕುತ್ತಿದ್ದ ಈ ದಿನಗಳಲ್ಲಿ, ಹಿಂದಿನಂತೆ ಚಿತ್ರ ಎಷ್ಟು ದಿನ ಓಡಿತು ಎಂದು ಕೇಳುವುದನ್ನು ಮರೆತೇ ಬಿಟ್ಟಿದ್ದ ಕಾಲಘಟ್ಟದಲ್ಲಿ ಕಾಂತಾರ ಚಿತ್ರವು 50 ದಿನಗಳನ್ನು ಪೂರೈಸಿರುವುದು ಚಿತ್ರತಂಡದಲ್ಲಿ ಸಂತಸ ಮೂಡಿಸಿದೆ. ಈ ಬಗ್ಗೆ ಟ್ವೀಟ್ ಮಾಡಿ ಸಂತೋಷವನ್ನು ಹಂಚಿಕೊಂಡಿರುವ ನಟ ನಿರ್ದೇಶಕ ರಿಷಬ್ ಶೆಟ್ಟಿ,” ನಮಗೆ ದಿವ್ಯ ಸಂಭ್ರಮದ ಕ್ಷಣ. ಜಗತ್ತಿನಾದ್ಯಂತ […]

ಶೇಕ್ಸ್‌ಪಿಯರ್ ನಾಟಕಗಳಲ್ಲಿ ನೈತಿಕತೆ ಮತ್ತು ರಾಜಕೀಯ ನೈಜ ಜಗತ್ತಿನ ಚಿತ್ರಣವಿದೆ: ಪ್ರೊ.ಎನ್. ಮನು ಚಕ್ರವರ್ತಿ

ಮಣಿಪಾಲ: ಶೇಕ್ಸ್‌ಪಿಯರ್ ತನ್ನ ದುರಂತ ನಾಟಕಗಳಲ್ಲಿ ತನ್ನ ಕಾಲದ ಸಾಮಾಜಿಕ ಜೀವನದಲ್ಲಿ ನೈತಿಕತೆ ಹೇಗೆ ಕ್ರಮೇಣ ಮಾಯವಾಗ ತೊಡಗಿತು ಎಂಬುದನ್ನು ತೋರಿಸಲು ಪ್ರಯತ್ನಿಸಿದ್ದಾನೆ. ನೈತಿಕತೆ ಮತ್ತು ರಾಜಕೀಯ ನೈಜ ಜಗತ್ತಿನಲ್ಲಿ ಎರಡು ಪ್ರತ್ಯೇಕ ಭಾಗಗಳು ಎಂದು ಅವನು ಚಿತ್ರಿಸಿದ್ದಾನೆ ಎಂದು ಖ್ಯಾತ ಸಂಸ್ಕೃತಿ ವಿಮರ್ಶಕ ಪ್ರೊ.ಎನ್. ಮನು ಚಕ್ರವರ್ತಿ ಹೇಳಿದರು. ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್‌ ಆಯೋಜಿಸಿದ್ದ “ಶೇಕ್ಸ್‌ಪಿಯರ್ ಜಗತ್ತು” ವಿಶೇಷ ಉಪನ್ಯಾಸದಲ್ಲಿ ಮಾತನಾಡಿದ ಅವರು, ಶೇಕ್ಸ್‌ಪಿಯರ್ ತನ್ನ ನಾಟಕಗಳಲ್ಲಿ ಒಳಸಂಚುಗಳು, […]