ಉಡುಪಿ: ಯುವಕ ನಾಪತ್ತೆ
ಉಡುಪಿ: ಉಡುಪಿ ತಾಲೂಕು ಪುತ್ತೂರು ಗ್ರಾಮದ ನಿಟ್ಟೂರು ನಿವಾಸಿ ದ್ಯಾಮಣ್ಣ ಜಿಗರೆ (28) ಎಂಬ ಯುವಕನು ಅಕ್ಟೋಬರ್ 30 ರಂದು ಸಂಜೆ 4 ಗಂಟೆಯ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 170 ಸೆಂ.ಮೀ ಎತ್ತರ, ಸಾಧಾರಣ ಮೈಕಟ್ಟು, ಬಿಳಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಕರಾಟೆ ಸ್ಪರ್ಧೆಯಲ್ಲಿ ಆರೂರು ಮೊರಾರ್ಜಿ ದೇಸಾಯಿ ವಸತಿ ಶಾಲಾ ವಿದ್ಯಾರ್ಥಿಗಳ ಸಾಧನೆ
ಉಡುಪಿ: ಕಟಪಾಡಿಯಲ್ಲಿ ಇತ್ತೀಚೆಗೆ ನಡೆದ ನ್ಯಾಷನಲ್ ಲೆವೆಲ್ ಕರಾಟೆ ಚಾಂಪಿಯನ್‌ಶಿಪ್ ಸ್ಪರ್ಧೆಯಲ್ಲಿ ಆರೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳಾದ ಅಕಿಲೇಶ್ ದೇವಾಡಿಗ ಕುಮಿಟಿಯಲ್ಲಿ ಪ್ರಥಮ ಕಟದಲ್ಲಿ ತೃತೀಯ, ಪೃಥ್ವಿರಾಜ್ ಕುಮಿಟಿಯಲ್ಲಿ ಪ್ರಥಮ, ಸಂದೇಶ್ ಕುಮಿಟಿಯಲ್ಲಿ ದ್ವಿತೀಯ ಕಟದಲ್ಲಿ ತೃತೀಯ, ಶ್ರೀಕಾಂತ್ ಕುಮಿಟಿಯಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದು ಶಾಲೆಯ ಪ್ರಾಂಶುಪಾಲರು ಹಾಗೂ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿರುತ್ತಾರೆ. ಇವರು ಕರಾಟೆ ಶಿಕ್ಷಕ ಅಶೋಕ್ ಕುಮಾರ್ ನಡೂರು ಮಾರ್ಗದರ್ಶನದಲ್ಲಿ ಹಲವು ಪ್ರಶಸ್ತಿಗಳನ್ನು ಪಡೆದಿರುತ್ತಾರೆ.
ಗಂಗಾ ಕಲ್ಯಾಣ ಯೋಜನೆಯಡಿ ಪ.ಜಾತಿ/ ಪ.ಪಂಗಡದ ಕೊಳವೆ ಬಾವಿ ನಿರ್ಮಾಣಕ್ಕೆ ನೇರ ಹಣ ಪಾವತಿ: ಕೋಟ
ಉಡುಪಿ: ಸಮಾಜ ಕಲ್ಯಾಣ ಇಲಾಖೆ, ಅಂಬೇಡ್ಕರ್ ಅಭಿವೃದ್ದಿ ನಿಗಮ ಸೇರಿದಂತೆ 7 ವಿವಿಧ ನಿಗಮಗಳ ಮೂಲಕ ಗಂಗಾ ಕಲ್ಯಾಣ ಯೋಜನೆಯಡಿ ಒಟ್ಟು 17000 ಕೊಳವೆ ಬಾವಿಗಳನ್ನು ಕೊರೆಯಲು ಹಣವನ್ನು ರೈತರ ಖಾತೆಗೆ ನೇರವಾಗಿ ವರ್ಗಾಯಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದರು. ಅವರು ಅನಾರೋಗ್ಯದ ಕಾರಣ ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು ಶುಕ್ರವಾರದಂದು ಅಲ್ಲಿಂದಲೇ ಸಮಾಜ ಕಲ್ಯಾಣ ಇಲಾಖೆಯ ವಿವಿಧ […]
ನ. 21 ರಿಂದ ಭತ್ತ ಖರೀದಿ ನೋಂದಣಿ; ಡಿಸೆಂಬರ್ 1 ರಿಂದ 2023 ಫೆಬ್ರವರಿ 28 ರವರೆಗೆ ಭತ್ತ ಖರೀದಿ ಕಾರ್ಯ
ಉಡುಪಿ: ಪ್ರಸಕ್ತ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಕೇಂದ್ರ ಸರ್ಕಾರವು ಸಾಮಾನ್ಯ ಭತ್ತಕ್ಕೆ ಪ್ರತಿ ಕ್ವಿಂ. ಗೆ 2040 ರೂ. ಮತ್ತು ಗ್ರೇಡ್ ಎ ಭತ್ತಕ್ಕೆ 2060 ರೂ. ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಿರುತ್ತದೆ. ಕರಾವಳಿ ಜಿಲ್ಲೆಗಳಲ್ಲಿ ಸ್ಥಳೀಯವಾಗಿ ಬೆಳೆಯಲಾಗುವ ಕಜೆ, ಜಯ, ಜ್ಯೋತಿ, ಪಂಚಮುಖಿ, ಸಹ್ಯಾದ್ರಿ, ಉಮಾ, ಅಭಿಲಾಷ ಮತ್ತು ಎಂಓ4 ಭತ್ತದ ತಳಿಗಳನ್ನು ಜಿಲ್ಲೆಯ ರೈತರಿಂದ ಖರೀದಿಸಿ, ಅದನ್ನು ಕುಚ್ಚಲಕ್ಕಿಯನ್ನಾಗಿ ಪರಿವರ್ತಿಸಿ, ಸಾರ್ವಜನಿಕ ವಿತರಣಾ ಪದ್ಧತಿಯಡಿ ಪಡಿತರ ಫಲಾನುಭವಿಗಳಿಗೆ ವಿತರಿಸಲು […]
ಮೀನುಗಾರರ ಮಕ್ಕಳ ಉನ್ನತ ಶಿಕ್ಷಣದ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ
ಉಡುಪಿ: ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೀನುಗಾರರ ಮಕ್ಕಳ ಹೆಚ್ಚಿನ ಹಾಗೂ ಉನ್ನತ ಶಿಕ್ಷಣ ಪ್ರೋತ್ಸಾಹಿಸಲು ಹೊಸ ಶಿಷ್ಯ ವೇತನ ಯೋಜನೆಯನ್ನು ಮುಖ್ಯಮಂತ್ರಿಗಳು ಘೋಷಿಸಿದ್ದು, ಈ ಯೋಜನೆಯ ಸೌಲಭ್ಯ ಪಡೆಯಲು ಮೀನುಗಾರರ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ. 8, 9, 10, ಪಿ.ಯು.ಸಿ., ಸ್ನಾತಕ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ಜಿಲ್ಲೆಯ ಮೀನುಗಾರರ ಸಹಕಾರಿ ಸಂಘದ ಸದಸ್ಯರು ಹಾಗೂ ಮೀನು ಕೃಷಿಕರ ಮಕ್ಕಳು ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರು ಅಥವಾ ಸಂಬಂಧಪಟ್ಟ ಮೀನುಗಾರರ ಸಹಕಾರಿ ಸಂಘಗಳಿಂದ […]