ಚಿಕ್ಕಮಗಳೂರು: ದತ್ತಪೀಠಕ್ಕೆ ವ್ಯವಸ್ಥಾಪನಾ ಸಮಿತಿಯನ್ನು ನೇಮಕ ಮಾಡಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ
ಚಿಕ್ಕಮಗಳೂರು: ಬಾಬಾಬುಡನ್ಗಿರಿಯ ಶ್ರೀಗುರು ದತ್ತಾತ್ರೇಯ ಬಾಬಾಬುಡನ್ಸ್ವಾಮಿ ದರ್ಗಾ ಇನಾಂ ದತ್ತಪೀಠಕ್ಕೆ ವ್ಯವಸ್ಥಾಪನಾ ಸಮಿತಿಯನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ವ್ಯವಸ್ಥಾಪನಾ ಸಮಿತಿ ರಚನೆ ಮಾಡುವಂತೆ ಹಲವು ವರ್ಷಗಳ ಹೋರಾಟ ನಡೆಯುತ್ತಿದ್ದು, ಕೊನೆಗೂ ಸರ್ಕಾರ ಎಂಟು ಮಂದಿ ಸದಸ್ಯರ ವ್ಯವಸ್ಥಾಪನಾ ಸಮಿತಿಯನ್ನು ರಚನೆ ಮಾಡಿ ಆದೇಶ ಹೊರಡಿಸಿದೆ. ವ್ಯವಸ್ಥಾಪನಾ ಸಮಿತಿಯಲ್ಲಿ ಒಬ್ಬ ಮುಸ್ಲಿಂ ಸದಸ್ಯ ಇರಲಿದ್ದಾರೆ. ಮೂರು ವರ್ಷಗಳ ಅವಧಿಗೆ ಸಮಿತಿಯನ್ನು ರಚಿಸಲಾಗಿದೆ. ಹೈಕೋರ್ಚ್ ಆದೇಶದಂತೆ ಆಡಳಿತ ಮಂಡಳಿ ನೇಮಕ ಮಾಡಲಾಗಿದೆ ಎಂದು ಶುಕ್ರವಾರದಂದು ಹಿಂದೂ […]
ನ.19-23ರವರೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಹಾಗೂ ಸರ್ವಧರ್ಮ ಮತ್ತು ಸಾಹಿತ್ಯ ಸಮ್ಮೇಳನ
ಬೆಳ್ತಂಗಡಿ: ಭಗವಾನ್ ಮಂಜುನಾಥನ ಸನ್ನಿಧಿಯಲ್ಲಿ ಲಕ್ಷದೀಪೋತ್ಸವ ಹಾಗೂ ಸರ್ವಧರ್ಮ ಮತ್ತು ಸಾಹಿತ್ಯ ಸಮ್ಮೇಳನಗಳು ನ. 19-23ರವರೆಗೆ ಜರುಗಲಿದ್ದು, ನಾಡಿನ ಗಣ್ಯರು, ವಿದ್ವಾಂಸರು ಮತ್ತು ಕಲಾವಿದರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನ.22 ರಂದು ಜರುಗಲಿರುವ ಸರ್ವಧರ್ಮ ಸಮ್ಮೇಳನವನ್ನು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಮಂತ್ರಾಲಯದ ಸಚಿವೆ ಸ್ಮೃತಿ ಇರಾನಿ ಇವರು ಉದ್ಘಾಟಿಸಲಿದ್ದಾರೆ. ಬಹುಶ್ರುತ ವಿದ್ವಾಂಸರಾದ ಎಂ.ಆರ್ ಸತ್ಯನಾರಾಯಣ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಬಸ್ರಿಕಟ್ಟೆ ಧರ್ಮಗುರುಗಳಾದ ಫಾ.ಮಾರ್ಸೆಲ್ ಪಿಂಟೋ, ವಿಜಯಪುರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಸಿಂಪೀರ ಇ […]
ನೀಲಾವರ: ನ. 20ರಂದು ಶ್ರೀ ಮಹಿಷಮರ್ದಿನೀ ದಶಾವತಾರ ಯಕ್ಷಗಾನ ಮಂಡಳಿಯ 13ನೇ ವರ್ಷದ ಪ್ರಥಮ ದೇವರ ಸೇವೆಯಾಟ
ನೀಲಾವರ: ನ. 20 ಆದಿತ್ಯವಾರದಂದು ಶ್ರೀ ಮಹಿಷಮರ್ದಿನೀ ದಶಾವತಾರ ಯಕ್ಷಗಾನ ಮಂಡಳಿಯ 13ನೇ ವರ್ಷದ ಪ್ರಥಮ ದೇವರ ಸೇವೆಯಾಟ ನಡೆಯಲಿದ್ದು ಶಾಸಕ ಕೆ. ರಘುಪತಿ ಭಟ್ ಉದ್ಗಾಟಿಸಲಿದ್ದಾರೆ. ರಾತ್ರಿ 9:00 ಗಂಟೆಗೆ 13ನೇ ವರ್ಷದ ತಿರುಗಾಟಕ್ಕೆ ವಿದ್ಯುಕ್ತ ಚಾಲನೆ ನೀಡಲಾಗುವುದು. ಅಧ್ಯಕ್ಷತೆ: ಶ್ರೀ ಎನ್. ರಘುರಾಮ ಮದ್ಯಸ್ಥ ಅಧ್ಯಕ್ಷರು, ವ್ಯವಸ್ಥಾಪನಾ ಸಮಿತಿ ಮುಖ್ಯ ಅತಿಥಿ: ಶ್ರೀ ಮಹೇಂದ್ರ ಕುಮಾರ್ ನೀಲಾವರ ಅಧ್ಯಕ್ಷರು, ನೀಲಾವರ ಗ್ರಾಮ ಪಂಚಾಯತ್ ಶ್ರೀ ಉಮೇಶ್ ಎ. ನಾಯ್ಕ್ ಕಾರ್ಯದರ್ಶಿ, ರಾಜ್ಯ ಎಸ್ .ಟಿ. ಮೋರ್ಚಾ […]
ತಿಹಾರ್ ಜೈಲಿನಲ್ಲಿರುವ ಆಪ್ ನಾಯಕ ಸತ್ಯೇಂದ್ರ ಜೈನ್ಗೆ ಫೂಟ್ ಮಸಾಜ್: ಸಿಸಿಟಿವಿ ದೃಶ್ಯಾವಳಿ ವೈರಲ್
ನವದೆಹಲಿ: ದೆಹಲಿಯ ಮಾಜಿ ಸಚಿವ ಮತ್ತು ಆಪ್ ನಾಯಕ ಸತ್ಯೇಂದ್ರ ಜೈನ್ ಅವರ ಸಿಸಿಟಿವಿ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಅಕ್ರಮ ಹಣ ವರ್ಗಾವಣೆ ಪ್ರಕರಣದ ಆರೋಪಿ ತಿಹಾರ್ ಜೈಲಿನಲ್ಲಿ ಕಾಲಿಗೆ ಮಸಾಜ್ ತೆಗೆದುಕೊಳ್ಳುತ್ತಿದ್ದಾರೆ. ವೈರಲ್ ಆಗಿರುವ ಈ ವೀಡಿಯೋದಲ್ಲಿ, ಜೈನ್ ತನ್ನ ಹಾಸಿಗೆಯ ಮೇಲೆ ಮಲಗಿ ಪೇಪರ್ಗಳನ್ನು ಓದುತ್ತಿದ್ದಾರೆ ಮತ್ತು ಅವರ ಪಕ್ಕದಲ್ಲಿ ಒಬ್ಬ ವ್ಯಕ್ತಿ ಅವರಿಗೆ ಫೂಟ್ ಮಸಾಜ್ ನೀಡುತ್ತಿದ್ದಾನೆ. ತಿಹಾರ್ ಜೈಲಿನಲ್ಲಿ ಸತ್ಯೇಂದ್ರ ಜೈನ್ ಕಾಲಿಗೆ ಮಸಾಜ್ ತೆಗೆದುಕೊಳ್ಳುತ್ತಿರುವುದನ್ನು ತೋರಿಸುವ ಸಿಸಿಟಿವಿ […]
ನ.23 ರಂದು ದೊಡ್ಡಣ್ಣಗುಡ್ಡೆ ಶ್ರೀ ದುರ್ಗಾ ಆದಿ ಶಕ್ತಿ ಕ್ಷೇತ್ರದಲ್ಲಿ ಏಕಕಾಲದಲ್ಲಿ ಪಂಚದಶ ದುರ್ಗಾನಮಸ್ಕಾರ ಪೂಜೆ
ಉಡುಪಿ: ದೊಡ್ಡಣ್ಣಗುಡ್ಡೆ ಶ್ರೀಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ನ.23 ರಂದು ಸಂಜೆ ಪಂಚದಶ ದುರ್ಗಾ ನಮಸ್ಕಾರ ಪೂಜೆ ಮತ್ತು ರಂಗಪೂಜೆ ದೀಪೋತ್ಸವವು ಕ್ಷೇತ್ರದ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ವೇ.ಮೂ. ಕೃಷ್ಣಮೂರ್ತಿ ತಂತ್ರಿಗಳ ನೇತೃತ್ವದಲ್ಲಿ ನೆರವೇರಲಿದ್ದು, ರಾತಿ ಅನ್ನಸಂತರ್ಪಣೆ ನಡೆಯಲಿದೆ. 15 ಎಂದರೆ (1+5=6) ಇದು ಲಕ್ಷ್ಮಿಯ ಸಂಕೇತ. ಲೋಕ ಕಲ್ಯಾಣ ಮತ್ತು ಭಕ್ತರಿಗಾಗಿ ಆಯೋಜಿಸಿರುವ ಈ ಪೂಜೆಯಲ್ಲಿ ಆರ್ಥಿಕವಾಗಿ ಸಂಕಷ್ಟದಲ್ಲಿರುವವರು, ಉದ್ಯೋಗಾಂಕ್ಷಿಗಳು ಪಾಲ್ಗೊಂಡು ದೇವಿಯ ಅನುಗ್ರಹ ಪಡೆಯಬಹುದು. ಕಾರ್ತಿಕ ಮಾಸದಲ್ಲಿ ಒಂದು […]