ಕಾಶಿ-ತಮಿಳು ಸಂಗಮ ಕಾರ್ಯಕ್ರಮ ದೇಶವನ್ನು ಏಕಸೂತ್ರದಲ್ಲಿ ಬೆಸೆಯುವ ಪ್ರಯತ್ನ: ಪ್ರಧಾನಿ ಮೋದಿ
ವಾರಣಾಸಿ: ಇಲ್ಲಿ ಒಂದು ತಿಂಗಳ ಕಾಲ ನಡೆಯುವ ಕಾಶಿ-ತಮಿಳು ಸಂಗಮವನ್ನು ಶನಿವಾರ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ, ಕಾಶಿ-ತಮಿಳು ಸಂಗಮವು ಗಂಗಾ-ಯಮುನಾ ಸಂಗಮದಷ್ಟು ಪವಿತ್ರವಾಗಿದೆ ಎಂದು ಹೇಳಿದರು. ತಮಿಳಿನ ರೂಪದಲ್ಲಿ ಪ್ರಪಂಚದ ಅತ್ಯಂತ ಹಳೆಯ ಭಾಷೆ ನಮ್ಮಲ್ಲಿದೆ ಎಂಬುದು ಭಾರತೀಯರಿಗೆ ಹೆಮ್ಮೆಯ ವಿಷಯವಾಗಿದೆ. ಈ ಪರಂಪರೆಯನ್ನು ಉಳಿಸುವುದರ ಜೊತೆಗೆ ಶ್ರೀಮಂತಗೊಳಿಸಬೇಕು. ಕಾಶಿ-ತಮಿಳು ಸಂಗಮ ಕಾರ್ಯಕ್ರಮವು ಶತಮಾನಗಳ-ಹಳೆಯ ಜ್ಞಾನದ ಬಂಧ ಮತ್ತು ಉತ್ತರ ಮತ್ತು ದಕ್ಷಿಣದ ನಡುವಿನ ಪ್ರಾಚೀನ ನಾಗರಿಕತೆಯ ಸಂಬಂಧವನ್ನು ಮರುಶೋಧಿಸುವ ಗುರಿಯನ್ನು ಹೊಂದಿದೆ. ಭಾಷೆಯ ಆಧಾರದ […]
ಉನ್ನತಿ ಕೆರಿಯರ್ ಅಕಾಡೆಮಿ: ಬ್ಯಾಂಕಿಂಗ್ ಫೈನಾಶಿಯಲ್ ತರಬೇತಿ ಪ್ರಮಾಣಪತ್ರ ವಿತರಣೆ ಹಾಗೂ ಸಂವಾದ ಕಾರ್ಯಕ್ರಮ
ಉಡುಪಿ: ಕೌಶಲ್ಯ ಶಿಕ್ಷಣಕ್ಕೆ ಪ್ರಸಿದ್ದಿ ಪಡೆದಿರುವ ಹಾಗೂ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ತರಬೇತಿ ಪಾಲುದಾರ ಸಂಸ್ಥೆಯಾದ ಉಡುಪಿಯ ಉನ್ನತಿ ಕೆರಿಯರ್ ಅಕಾಡೆಮಿಯು ಉಡುಪಿ ಜಿಲ್ಲೆಯ ಆಯ್ದ 60 ಅಭ್ಯರ್ಥಿಗಳಿಗೆ ಬ್ಯಾಂಕಿಂಗ್ ಮತ್ತು ಫೈನಾನ್ಶಿಯಲ್ ಕ್ಷೇತ್ರದ ಪ್ರಮುಖ ವಿಷಯಗಳಾದ ಕೆವೈಸಿ-ಎಎಂಎಲ್, ಕಸ್ಟಮರ್ ಸರ್ವೀಸ್, ಡಿಜಿಟಲ್ ಬ್ಯಾಂಕಿಂಗ್ ನಲ್ಲಿ ತರಬೇತಿ ನೀಡಿದ್ದು, ಇಂದು ಅಭ್ಯರ್ಥಿಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಉಡುಪಿ ಇಂಡಸ್ ಇಂಡ್ ಬ್ಯಾಂಕ್ ನ ಅಸಿಸ್ಟೆಂಟ್ ವೈಸ್ ಪ್ರೆಸಿಡೆಂಟ್ ಮತ್ತು ಬ್ರಾಂಚ್ ಮ್ಯಾನೇಜರ್ ನಿತಿನ್ ರವರು […]
ಹವಾಮಾನಾಧಾರಿತ ಬೆಳೆ ವಿಮೆ ಪಾವತಿ: ಜಮಾ ಆಗದ ಮೊತ್ತಕ್ಕಾಗಿ ವಿಮಾ ಶಾಖೆ ಸಂಪರ್ಕಿಸಿ
ಉಡುಪಿ: ಮರು ವಿನ್ಯಾಸಗೊಳಿಸಿದ ಹವಾಮಾನಾಧಾರಿತ ಬೆಳೆ ವಿಮೆ ಯೋಜನೆಯಡಿ 2021-22 ನೇ ಸಾಲಿನಲ್ಲಿ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳಿಗೆ ನೊಂದಾವಣೆ ಮಾಡಿಸಿದ ರೈತರ ವಿಮಾ ಪ್ರಕರಣಗಳಲ್ಲಿ 4642 ವಿಮಾ ಪ್ರಕರಣಗಳಿಗೆ ರೂ 6,15,57,981 ಪರಿಹಾರ ಮೊತ್ತವು ಅಕ್ಟೋಬರ್ 31 ರಂದು ದಿನಾಂಕ 31-10-2022 ರಿಂದ ಅಗ್ರಿಕ್ಚರ್ ವಿಮಾ ಕಂಪನಿಯ ವತಿಯಿಂದ ಪಾವತಿಯಾಗುತ್ತಿದೆ. 2021-22 ನೇ ಸಾಲಿನಲ್ಲಿ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳಿಗೆ ಒಟ್ಟು 5734 ಪ್ರಕರಣಗಳು ನೋಂದಣಿಯಾಗಿದ್ದು 1092 ಪ್ರಕರಣಗಳು ಬೆಳೆ ಸಮೀಕ್ಷೆ ಕಾರ್ಯದಲ್ಲಿ ಬೆಳೆ ತಾಳೆಯಾಗದ […]
ಸರಕಾರಿ ಅಧಿಕಾರಿಗಳ ಗ್ರಾಮವಾಸ್ತವ್ಯ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳಿ: ಜಿಲ್ಲಾಧಿಕಾರಿ ಕೂರ್ಮಾ ರಾವ್
ಉಡುಪಿ: ಸರಕಾರವು ಸಾರ್ವಜನಿಕರ ಅಭಿವೃದ್ದಿಗಾಗಿ ಜಾರಿಗೆ ತಂದಿರುವ ವಿವಿಧ ಯೋಜನೆಗಳ ಮಾಹಿತಿಯನ್ನು ಸಾರ್ವಜನಿಕರು ಪಡೆದುಕೊಂಡು ಆ ಯೋಜನೆಗಳ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು. ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಮೂಲಕ ಹಲವು ಯೋಜನೆಗಳ ಸಮಗ್ರ ಮಾಹಿತಿ ಪಡೆಯಲು ಹಾಗೂ ಸ್ಥಳೀಯ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಪಡೆಯಲು ಸಾಧ್ಯ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಶನಿವಾರದಂದು ಕಾಪು ತಾಲೂಕಿನ ಬೆಳ್ಳೆ ಗ್ರಾಮದ ಗೀತಾ ಮಂದಿರದಲ್ಲಿ ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಗ್ರಾಮವಾಸ್ತವ್ಯ ಕಾರ್ಯಕ್ರಮದಲ್ಲಿ ಗ್ರಾಮಸ್ಥರ […]