ವ್ಯಕ್ತಿ ನಾಪತ್ತೆ

ಉಡುಪಿ: ಮಗುವಿನ ಚಿಕಿತ್ಸೆಗಾಗಿ ಕೊಡವೂರು ಮಧ್ವನಗರದ ಮೂಡುಬೆಟ್ಟುವಿಗೆ ಬಂದಿದ್ದ ಮಂಗಳೂರಿನ ಮೇರ್ಲಪದವಿನ ನಿವಾಸಿ ವಿಜಯ ಶೆಟ್ಟಿ (47) ಎಂಬ ವ್ಯಕ್ತಿಯು ನವೆಂಬರ್ 6 ರಿಂದ ನಾಪತ್ತೆಯಾಗಿರುತ್ತಾರೆ. 5 ಅಡಿ 7 ಇಂಚು ಎತ್ತರ, ಬಿಳಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ಇಂಗ್ಲೀಷ್ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಲ್ಪೆ ಠಾಣೆ ದೂ.ಸಂಖ್ಯೆ: 0820-2537999, ಮೊ.ನಂ.: 9480805447, ಉಡುಪಿ ವೃತ್ತ ನಿರೀಕ್ಷಕರ ಕಚೇರಿ ಮೊ.ನಂ: 9480805430 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಲ್ಪೆ […]

ಉಡುಪಿ: ಮಹಿಳೆ ನಾಪತ್ತೆ

ಉಡುಪಿ: ಉಡುಪಿ ತಾಲೂಕು ತೆಂಕನಿಡಿಯೂರು ಗ್ರಾಮದ ತೊಟ್ಟಂ ನಿವಾಸಿ ರೂಪಾ (26 ವರ್ಷ) ಎಂಬ ಮಹಿಳೆಯು ನವೆಂಬರ್ 13 ರಂದು ಬೆಳಗ್ಗೆ 6.30 ರ ಸುಮಾರಿಗೆ ಕೆಲಸಕ್ಕೆಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 1 ಇಂಚು ಎತ್ತರ, ಗೋಧಿ ಮೈ ಬಣ್ಣ, ಸಾಧಾರಣ ಮೈ ಕಟ್ಟು ಹೊಂದಿದ್ದು, ಕನ್ನಡ, ಹಿಂದಿ, ನೇಪಾಳಿ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಲ್ಪೆ ಠಾಣೆ ದೂ.ಸಂಖ್ಯೆ: 0820-2537999, ಮೊ.ನಂ.: 9480805447, […]

ನ.22 ರಂದು ಬಿಜೆಪಿ ಜಿಲ್ಲಾ ಯುವ ಮೋರ್ಚಾ ಆತಿಥ್ಯದಲ್ಲಿ ರಾಜ್ಯ ಯುವ ಮೋರ್ಚಾ ವಿಶೇಷ ಕಾರ್ಯಕಾರಿಣಿ ಸಭೆ

ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಆತಿಥ್ಯದಲ್ಲಿ ಯುವ ಮೋರ್ಚಾ ರಾಜ್ಯ ವಿಶೇಷ ಕಾರ್ಯಕಾರಿಣಿ ಸಭೆಯು ನ.22ರಂದು ಬೆಳಿಗ್ಗೆ ಗಂಟೆ 10.00ಕ್ಕೆ ಮಣಿಪಾಲದ ಹೋಟೆಲ್ ಕಂಟ್ರಿ ಇನ್ ಸಭಾಂಗಣದಲ್ಲಿ ನಡೆಯಲಿದೆ. ನ.21ರಂದು ಸಂಜೆ 6.00 ಗಂಟೆಗೆ ಬಿಜೆಪಿ ಯುವ ಮೋರ್ಚಾ ರಾಜ್ಯ ಪದಾಧಿಕಾರಿಗಳ ಸಭೆ ನಡೆಯಲಿದೆ ಎಂದು ಬಿಜೆಪಿ ಯುವ ಮೋರ್ಚಾ ಉಡುಪಿ ಜಿಲ್ಲಾಧ್ಯಕ್ಷ ವಿಖ್ಯಾತ್ ಶೆಟ್ಟಿ ಹೇಳಿದರು. ಅವರು ನ.19ರಂದು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಈ ವಿಶೇಷ ಕಾರ್ಯಕಾರಿಣಿ ಸಭೆಗೆ […]

ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

ಕುಂದಾಪುರ: ವೃತ್ತಿ – ಪ್ರವೃತ್ತಿಗಳಲ್ಲಿ ಸೋಲು ಸ್ವೀಕರಿಸಬಲ್ಲ ಮನೋಭಾವದ ಬೆಳವಣಿಗೆಯೇ ಬದುಕಿನಲ್ಲಿ ಗೆಲ್ಲಬಲ್ಲ ಸಾಮರ್ಥ್ಯ ಸೃಷ್ಟಿಸುತ್ತದೆ ಎಂದು ಕೊಲ್ಲೂರು ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಸುಕೇಶ್ ಕುಮಾರ್ ಶೆಟ್ಟಿ ಹೇಳಿದರು. ಅವರು ಸೋಮವಾರದಂದು ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಕ್ರೀಡೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಸಂಸ್ಥೆಯ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ ಇವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ರಾಗಿಣಿ, ಸಂಸ್ಥೆಯ ಆಡಳಿತಾಧಿಕಾರಿ ಪ್ರಭಾಕರ್ ಶ್ಯಾನುಭೋಗ್, ಶ್ರೀ ವೆಂಕಟರಮಣ ಪ್ರೌಢಶಾಲೆಯ […]

ನಾಡದೇವಿಯ ಅಧಿಕೃತ ಚಿತ್ರ ರಚನೆಗೆ ತಜ್ಞರ ಸಮಿತಿ ರಚನೆ: ವಿ. ಸುನಿಲ್ ಕುಮಾರ್

ಬೆಂಗಳೂರು: ರಾಜ್ಯದ ನಾಡದೇವತೆಯ ಚಿತ್ರವನ್ನು ವಿವಿಧ ಚಿತ್ರಪಟಗಳಲ್ಲಿ ವಿವಿಧ ರೀತಿಯಾಗಿ ಚಿತ್ರಿಸಿರಿವುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ನಾಡದೇವತೆಯ ಪ್ರಮಾಣಿತ ಹಾಗೂ ಅಧಿಕೃತ ಚಿತ್ರ ಅವಶ್ಯಕವಾಗಿತ್ತು.ಈ ಹಿನ್ನಲೆಯಲ್ಲಿ ನಾಡದೇವತೆಯ ಪ್ರಮಾಣಿತ ಮತ್ತು ಅಧಿಕೃತ ಚಿತ್ರ ಆಯ್ಕೆ ಮಾಡಿ ಶಿಫಾರಸ್ಸು ಮಾಡಲು ಲಲಿತಕಲಾ ಅಕಾಡೆಮಿ ಅಧ್ಯಕ್ಷ ಡಿ.ಮಹೇಂದ್ರರವರ ನೇತೃತ್ವದಲ್ಲಿ ಐವರು ತಜ್ಞರ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿ ಆಯ್ಕೆ ಮಾಡಿ ಶಿಫಾರಸ್ಸು ಮಾಡುವ ಚಿತ್ರವನ್ನು ಅಂತಿಮಗೊಳಿಸಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಉಪಯೋಗಿಸಲು ಹಾಗೂ ಶಾಲಾ-ಕಾಲೇಜುಗಳ ಗೋಡೆಯ ಮೇಲೆ ಅಳವಡಿಸಲು ಕ್ರಮ ಕೈಗೊಳ್ಳಲಾಗುತ್ತದೆ […]