ನೂತನ ಚುನಾವಣಾ ಆಯುಕ್ತರಾಗಿ ಅರುಣ್ ಗೋಯೆಲ್ ನೇಮಕ

ಹೊಸದಿಲ್ಲಿ: ಭಾರತದ ಚುನಾವಣಾ ಆಯೋಗದ ನೂತನ ಚುನಾವಣಾ ಆಯುಕ್ತರಾಗಿ ಅರುಣ್ ಗೋಯೆಲ್ ಸೋಮವಾರ ಅಧಿಕಾರ ಸ್ವೀಕರಿಸಿದ್ದಾರೆ. ಅರುಣ್ ಗೋಯೆಲ್ ಅವರನ್ನು ಶನಿವಾರ ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ. ಅವರು ಪಂಜಾಬ್ ಕೇಡರ್‌ನ ಮಾಜಿ ಐಎಎಸ್ ಅಧಿಕಾರಿಯಾಗಿದ್ದಾರೆ. ಭಾರತೀಯ ಚುನಾವಣಾ ಆಯೋಗವು 3 ಆಯುಕ್ತರನ್ನು ಒಳಗೊಂಡ ಬಹು-ಸದಸ್ಯ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತದೆ. ಅವರು ಚುನಾವಣಾ ಆಯೋಗದಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮತ್ತು ಚುನಾವಣಾ ಆಯುಕ್ತ ಅನುಪ್ ಚಂದ್ರ ಪಾಂಡೆ ಅವರನ್ನು ಸೇರಿಕೊಳ್ಳಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಈ […]

ವಿದ್ಯೆಯನ್ನು ಇತರರ ಏಳಿಗೆಗೋಸ್ಕರ ಬಳಸಿ: ಮೌಲ್ಯ ಸುಧಾ ಕಾರ್ಯಕ್ರಮದಲ್ಲಿ ಸ್ವಾಮಿ ಶ್ರೀ ವೀರೇಶಾನಂದ ಸರಸ್ವತೀ ಅಭಿಮತ

ಕಾರ್ಕಳ: ಮನುಷ್ಯನಿಗೆ ಯೌವ್ವನ, ಅಧಿಕಾರ, ಸಂಪತ್ತು, ಅವಿವೇಕ ಎಂಬ ನಾಲ್ಕು ಅಂಶಗಳಲ್ಲಿ ಒಂದು ಅಂಶ ಹೊಕ್ಕಿದರೂ ಆತ ಪತನಗೊಳ್ಳುತಾನೆ. ಅವಿವೇಕವನ್ನು ಹೊಂದಿದವನ ಬದುಕು ನಿರ್ನಾಮವಾಗುತ್ತದೆ. ವಿವೇಕಿಯಾದ ವ್ಯಕ್ತಿ ತನ್ನ ವಿದ್ಯೆಯನ್ನು ಜ್ಞಾನದಾನಕ್ಕಾಗಿ, ಇತರರ ಏಳಿಗೆಗೋಸ್ಕರ ಬಳಸುತ್ತಾನೆ ಎಂದು ತುಮಕೂರಿನ ರಾಮಕೃಷ್ಣ – ವಿವೇಕಾನಂದ ಆಶ್ರಮದ ಅಧ್ಯಕ್ಷರಾದ ಸ್ವಾಮಿ ಶ್ರೀ ವೀರೇಶಾನಂದ ಸರಸ್ವತೀ ಮಹಾರಾಜ್ ಅಭಿಪ್ರಾಯಪಟ್ಟರು. ಅವರು ಶ್ರೀ ಮಹಾಗಣಪತಿ ದೇವಾಸ್ಥಾನ ಗಣಿತನಗರ ಮತ್ತು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಸಹಯೋಗದೊಂದಿಗೆ ಆಯೋಜಿಸಲಾಗುತ್ತಿರುವ ತಿಂಗಳ ಸರಣಿಯ ಕಾರ್ಯಕ್ರಮ ಮಾಲಿಕೆ […]

ಮಂಗಳೂರು: ನ. 26ರಂದು ಪುರಭವನದಲ್ಲಿ ಉತ್ತರ್-ದಕ್ಷಿಣ್ ಸಂಗೀತ ಕಾರ್ಯಕ್ರಮ

ಮಂಗಳೂರು: ದೇಶದ ನಾನಾ ಪ್ರತಿಷ್ಠಿತ ವೇದಿಕೆಗಳಲ್ಲಿ ಯಶಸ್ವಿಯಾಗಿ ನಡೆದ ಸರಣಿ ಸಂಗೀತಕಾರ್ಯಕ್ರಮ `ಉತ್ತರ್-ದಕ್ಷಿಣ್’ ನ. 26 ಶನಿವಾರದಂದು ಮಂಗಳೂರಿನ ಪುರಭವನದಲ್ಲಿ ಸಂಜೆ 5.30 ರಿಂದ ನಡೆಯಲಿದೆ. ನಗರದ ಪ್ರತಿಷ್ಠಿತ ಸಂಗೀತ ಭಾರತಿ ಪ್ರತಿಷ್ಠಾನದ ಸಹಯೋಗದೊಂದಿಗೆ ನಡೆಯುವ ಈ ಕಾರ್ಯಕ್ರಮವನ್ನು ವಿವಿದ್‌ ಆರ್ಟ್ಸ್ ಆ್ಯಂಡ್‌ ಎಂಟರ್‌ಟೈನ್‌ಮೆಂಟ್ ಹಾಗೂ ದಿ ಪಯೋನೀರ್‌ ಆರ್ಟ್ಸ್ ಎಜ್ಯುಕೇಷನ್ ಸೊಸೈಟಿಯು ಪ್ರಸ್ತುತ ಪಡಿಸುತ್ತಿದ್ದು, ದೇಶದ 11 ವೇದಿಕೆಗಳಲ್ಲಿ ಯಶಸ್ವಿಯಾಗಿ ಆಯೋಜಿಸಿದ ಈ ಸರಣಿಯ 12ನೇ ಕಾರ್ಯಕ್ರಮವು ನ. 26ರಂದು ಮಂಗಳೂರಿನಲ್ಲಿ ನಡೆಯಲಿದೆ. ಪ್ರಖ್ಯಾತ ಗಾಯಕಿ […]

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಶ್ರೀಕೃಷ್ಣ ಮಠ ಭೇಟಿ

ಉಡುಪಿ: ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್ ತಮ್ಮ ಕುಟುಂಬ ಸಮೇತರಾಗಿ ಶ್ರೀಕೃಷ್ಣ ಮಠಕ್ಕೆ ಆಗಮಿಸಿ, ದೇವರ ದರ್ಶನ ಪಡೆದು ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರಿಂದ ಅನುಗ್ರಹ ಪಡೆದುಕೊಂಡರು.ಈ ಸಂದರ್ಭದಲ್ಲಿ ಶಾಸಕ ರಘುಪತಿ ಭಟ್, ಮಠದ ದಿವಾನರಾದ ವರದರಾಜ ಭಟ್ ಹಾಗೂ ಪರ್ಯಾಯ ಸ್ವಾಗತ ಸಮಿತಿಯ ಕಾರ್ಯದರ್ಶಿ ವಿಷ್ಣುಪ್ರಸಾದ್ ಪಾಡಿಗಾರ್ ಉಪಸ್ಥಿತರಿದ್ದರು.

ವಿಶ್ವ ಆಂಟಿಮೈಕ್ರೊಬಿಯಲ್ ಜಾಗೃತಿ ಸಪ್ತಾಹಕ್ಕಾಗಿ ಸೈಕಲ್ ಜಾಥಾ

ಮಣಿಪಾಲ: ವಿಶ್ವ ಆಂಟಿಮೈಕ್ರೊಬಿಯಲ್ ಜಾಗೃತಿ ಸಪ್ತಾಹ 2022 ಅಂಗವಾಗಿ ಸಮುದಾಯದಲ್ಲಿ ಜಾಗೃತಿ ಮೂಡಿಸಲು ಭಾನುವಾರದಂದು ಸೈಕಲ್ ಜಾಥಾ ನಡೆಯಿತು. ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಹೊರರೋಗಿ ವಿಭಾಗದ ಮುಂಭಾಗದಲ್ಲಿ ಮಾಹೆ ಮಣಿಪಾಲದ ಉಪಕುಲಪತಿ, ಲೆಫ್ಟಿನೆಂಟ್ ಜನರಲ್ (ಡಾ) ಎಂ.ಡಿ.ವೆಂಕಟೇಶ್ ಅವರು ಚಾಲನೆ ನೀಡಿದರು. ಮಹಾರಾಷ್ಟ್ರ ದ ನಾಸಿಕ್ ನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಉಪಕುಲಪತಿ ಲೆ. ಜ. (ಡಾ ) ಮಾಧುರಿ ಕಾನಿಟ್ಕರ್, ಕೆ ಎಂ ಸಿ ಡೀನ್ ಡಾ ಶರತ್ ಕುಮಾರ್ ರಾವ್, ಸಹ ಡೀನ್ ಡಾ […]