ಸಾವಯವ ಕೃಷಿ ವಿಧಾನಗಳ ತರಬೇತಿ ಹಾಗೂ ಪದ್ಧತಿ ಪ್ರಾತ್ಯಕ್ಷಿಕೆ
ಉಡುಪಿ: ಜಿಲ್ಲಾ ಪಂಚಾಯತ್, ಕೃಷಿ ಮತ್ತು ಕೃಷಿ ಸಂಬಂಧಿತ ಇಲಾಖೆಗಳು ಹಾಗೂ ಗೋವರ್ಧನ ಗಿರಿ ಟ್ರಸ್ಟ್ ಪೇಜಾವರ ಮಠ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಸಾವಯವ ಸಿರಿ ಯೋಜನೆಯಡಿ ಸಾವಯವ ಕೃಷಿ ವಿಧಾನಗಳ ತರಬೇತಿ ಹಾಗೂ ಪದ್ಧತಿ ಪ್ರಾತ್ಯಕ್ಷಿಕೆ ಕಾರ್ಯಕ್ರಮವು ನವೆಂಬರ್ 23 ರಂದು ಬೆಳಗ್ಗೆ 10 ಗಂಟೆಗೆ ಬ್ರಹ್ಮಾವರದ ನೀಲಾವರ ಗೋಶಾಲೆಯಲ್ಲಿ ನಡೆಯಲಿದೆ. ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಾಸಕ ಕೆ. […]
ಪುತ್ತೂರು: “ಈ ನಾಟಕ ತೂಲೆ” ತುಳು ನಾಟಕದ ಪ್ರಥಮ ಪ್ರದರ್ಶನ ಕಾರ್ಯಕ್ರಮ
ಕಲ್ಪನಾ ಲೋಕ ಪುತ್ತೂರು ಉಡುಪಿ ಇವರು ಅರ್ಪಿಸುವ ನೂತನ ಶೈಲಿಯ ಕಥಾ ನಿರೂಪಣೆಯ “ಈ ನಾಟಕ ತೂಲೆ” ತುಳು ಸಾಮಾಜಿಕ ನಾಟಕದ ಪ್ರಥಮ ಪ್ರದರ್ಶನ ಕಾರ್ಯಕ್ರಮ ಪುತ್ತೂರಿನ ಭಗವತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು. ಇದೇ ಸಂದರ್ಭದಲ್ಲಿ ಮೋಕ್ಷ ಕ್ರಿಯೇಷನ್ಸ್ ಬ್ಯಾನರ್ ನಡಿಯಲ್ಲಿ ಅದ್ಧೂರಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಮಧು ವೈ.ಜಿ. ಹಳ್ಳಿ ನಿರ್ದೇಶನದ ಕುದ್ರು ಕನ್ನಡ ಚಲನಚಿತ್ರದ ಟೀಸರ್ ಬಿಡುಗಡೆಗೊಳಿಸಲಾಯಿತು. ಅಲ್ಲದೆ, ಚಿತ್ರದ ಒಂದು ಹಾಡನ್ನು ಇದೇ ವೇಳೆ ಬಿಡುಗಡೆ ಮಾಡಲಾಯಿತು. ಉಡುಪಿ ಕೃಷ್ಣ ಆಚಾರ್ಯ […]
ಶಾಲಾ ಕಾಲೇಜುಗಳಲ್ಲಿ ಸರಣಿ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ
ಕೋಟ: ಶಾಲಾ ಕಾಲೇಜುಗಳಲ್ಲಿನ ಕಳವು ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಕೋಟ ಪೊಲೀಸರು ಸೋಮವಾರ ಆವರ್ಸೆ ಗ್ರಾಮದ ಬಳಿಯಿಂದ ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ತಮಿಳುನಾಡು ರಾಜ್ಯದ ಸೇಲಂ ನಿವಾಸಿ ಕುಮಾರಸ್ವಾಮಿ(59) ಹಾಗೂ ಪಡುಬಿದ್ರಿ ಹೆಜಮಾಡಿ ಎಸ್.ಎಸ್ ರಸ್ತೆಯ ಜಾಹೀದ್ ಸಿನಾನ್(32) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಬೈಕ್, ಮೊಬೈಲ್ ಹಾಗೂ10,000ರೂ. ನಗದು ವಶಪಡಿಸಿಕೊಳ್ಳಲಾಗಿದೆ. ಕಳೆದ 5-6 ತಿಂಗಳಿನಿಂದ ಶಾಲಾ ಕಾಲೇಜುಗಳಿಗೆ ನುಗ್ಗಿ ಹಣ ಹಾಗೂ ಸೊತ್ತುಗಳನ್ನು ಕಳ್ಳತನ ಮಾಡುತ್ತಿರುವ ಬಗ್ಗೆ ಉಡುಪಿ ಜಿಲ್ಲೆಯ ಪ್ರತ್ಯೇಕ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದವು. […]
ರಾಷ್ಟ್ರಮಟ್ಟದ ಬಯೋಕ್ವಿಜ್ ರಸಪ್ರಶ್ನೆಯಲ್ಲಿ ಮಾಹೆ ವಿದ್ಯಾರ್ಥಿನಿ ಮೈಥಿಲಿ ಪದವು ಪ್ರಥಮ
ಮಣಿಪಾಲ: ಮಾಹೆಯ ಮಣಿಪಾಲ್ ಸ್ಕೂಲ್ ಆಫ್ ಸೈನ್ಸಸ್ ನ ಬಿ.ಎಸ್ಸಿ ಬಯೋಟೆಕ್ನಾಲಜಿಯ 5ನೇ ಸೆಮೆಸ್ಟರ್ ನಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿನಿ ಮೈಥಿಲಿ ಪದವು ರಾಷ್ಟ್ರ ಮಟ್ಟದ ರಸಪ್ರಶ್ನೆ ಸ್ಪರ್ಧೆ ‘ಬಯೋಕ್ವಿಜ್-2022’ ರ ಅಂತಿಮ ಸುತ್ತಿನಲ್ಲಿ ವಿಜೇತರಾಗಿ ಪ್ರಥಮ ಸ್ಥಾನ ಪಡೆದಿದ್ದಾರೆ. ರಾಜ್ಯ ಸರ್ಕಾರದ ಎಲೆಕ್ಟ್ರಾನಿಕ್ಸ್, ಐಟಿ, ಬಿಟಿ ಮತ್ತು ಎಸ್ & ಟಿ ಇಲಾಖೆಯಿಂದ ಆಯೋಜಿಸಲಾಗಿದದ್ದ ರಾಷ್ಟ್ರ ಮಟ್ಟದ ರಸಪ್ರಶ್ನೆ ಕಾರ್ಯಕ್ರಮವು ಏಷ್ಯಾದ ಅತ್ಯಂತ ಪ್ರತಿಷ್ಠಿತ ಬೆಂಗಳೂರು ಟೆಕ್ ಶೃಂಗಸಭೆಯ ಭಾಗವಾಗಿತ್ತು. ಶೃಂಗಸಭೆಯನ್ನು ಪ್ರಧಾನಿ ನರೇಂದ್ರ ಮೋದಿ […]
ಜೋಡುಕಟ್ಟೆ ಬಳಿ ಬಿಜೆಪಿ ಬೈಕ್ ರ್ಯಾಲಿಗೆ ಚಾಲನೆ
ರಾಜ್ಯ ಬಿಜೆಪಿ ಯುವಮೋರ್ಚಾ ಕಾರ್ಯಕಾರಣಿ ಪ್ರಯುಕ್ತ ಬಿಜೆಪಿ ಜಿಲ್ಲಾ ಯುವ ಮೋರ್ಚಾದ ನೇತೃತ್ವದಲ್ಲಿ ಉಡುಪಿ ಜೋಡುಕಟ್ಟೆಯಿಂದ ಮಣಿಪಾಲದ ರಜತಾದ್ರಿವರೆಗೆ ಮಂಗಳವಾರ ಬೈಕ್ ರ್ಯಾಲಿ ಹಮ್ಮಿಕೊಳ್ಳಲಾಯಿತು. ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಅವರು ರ್ಯಾಲಿಗೆ ಚಾಲನೆ ನೀಡಿದರು. ಬಳಿಕ ಜೋಡುಕಟ್ಟೆಯಿಂದ ಆರಂಭಗೊಂಡ ಬೈಕ್ ರ್ಯಾಲಿ ಕೋರ್ಟ್ ರಸ್ತೆ, ಕೆಎಂ ಮಾರ್ಗ, ಸರ್ವಿಸ್ ಬಸ್ ನಿಲ್ದಾಣ, ಸಿಟಿ ಬಸ್ ನಿಲ್ದಾಣದ ಮಾರ್ಗವಾಗಿ ಕಲ್ಸಂಕ, ಎಂಜಿಎಂ ರಸ್ತೆಯ ಮೂಲಕ ಸಿಂಡಿಕೇಟ್ ಸರ್ಕಲ್ ಮೂಲಕ ಸಾಗಿ ಮಣಿಪಾಲ ಕಂಟ್ರಿ […]