ನ. 28 ರಂದು ನಗರಸಭೆಯ ಸಾಮಾನ್ಯ ಸಭೆ

ಉಡುಪಿ: ಉಡುಪಿ ನಗರಸಭೆಯ ಸಾಮಾನ್ಯ ಸಭೆಯು ನವೆಂಬರ್ 28 ರಂದು ಬೆಳಗ್ಗೆ 10.30 ಕ್ಕೆ ಕಚೇರಿಯ ಸತ್ಯಮೂರ್ತಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ. ನವೆಂಬರ್ 25 ರಂದು ಕುಂದಾಪುರ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ  ಬೆಳಗ್ಗೆ 10.30 ಕ್ಕೆ ಜನ ಸಂಪರ್ಕ ಸಭೆ ನಡೆಯಲ್ಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿರುವರು. ಗ್ರಾಹಕರು ದೂರವಾಣಿ ಸಂಖ್ಯೆ: 08254-230490 ಅನ್ನು ಸಂಪರ್ಕಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.  

ನಾಡದೇವಿಯ ಚಿತ್ರ ಅಂತಿಮಗೊಳಿಸಿದ ಸಮಿತಿ: ಸರ್ಕಾರಕ್ಕೆ ಶಿಫಾರಸು ಸಲ್ಲಿಕೆ

ಬೆಂಗಳೂರು: ರಾಜ್ಯ ಸರ್ಕಾರವು ಎಲ್ಲ ಅಧಿಕೃತ ಉದ್ದೇಶಗಳಿಗೆ ಕನ್ನಡ ಮಾತೆ, ಭುವನೇಶ್ವರಿ ದೇವಿಯ ಚಿತ್ರವನ್ನು ಚಿತಪಡಿಸಲು ಸರ್ಕಾರವು ನೇಮಿಸಿದ ಐದು ಸದಸ್ಯರ ಸಮಿತಿಯು ಚಿತ್ರವನ್ನು ಅಂತಿಮಗೊಳಿಸಿದೆ. ನಾಡದೇವಿಯ ನಿರ್ದಿಷ್ಟ ಚಿತ್ರದ ಕೊರತೆಯಿರುವುದನ್ನು ಮನಗಂಡ ಸರ್ಕಾರ ಎಲ್ಲ ಅಧಿಕೃತ ಉದ್ದೇಶಗಳಿಗೆ ಉಪಯೋಗಿಸಲು ಏಕಪ್ರಕಾರದ ಚಿತ್ರವನ್ನು ಆಯ್ಕೆ ಮಾಡಲು ಡಿ.ಮಹೇಂದ್ರ ಅವರ ಅಧ್ಯಕ್ಷತೆಯಲ್ಲಿ ಐವರು ಚಿತ್ರಕಲಾವಿದರ ಸಮಿತಿಯನ್ನು ರಚಿಸಿತ್ತು. ಲಲಿತಾ ಕಲಾ ಅಕಾಡೆಮಿ ನಿಕಟಪೂರ್ವ ಅಧ್ಯಕ್ಷ ಡಿ. ಮಹೇಂದ್ರ ಅವರ ಅಧ್ಯಕ್ಷತೆಯ ಈ ಸಮಿತಿಯು ಕರ್ನಾಟಕ ರಾಜ್ಯದ ನಾಡದೇವತೆಯ ಅಧಿಕೃತ […]

ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ: ಜ್ಞಾನಸುಧಾ ಕಾಲೇಜು ವಿದ್ಯಾರ್ಥಿಗಳು ವಿಭಾಗ ಮಟ್ಟಕ್ಕೆ ಆಯ್ಕೆ

ಕಾರ್ಕಳ: ಪದವಿ ಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ಉಡುಪಿ ಜಿಲ್ಲಾ ಮಟ್ಟದ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಗಣಿತನಗರದ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ 7 ವಿದ್ಯಾರ್ಥಿಗಳು ವಿಭಾಗ ಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ. ಜಾನಪದ ಗೀತೆಯಲ್ಲಿ ಪ್ರಥಮ ವಿಜ್ಞಾನ ವಿಭಾಗದ ಕು.ಸಿಂಚನಾ.ವಿ.ನಾಯಕ್, ಕನ್ನಡ ಚರ್ಚಾ ಸ್ಪರ್ಧೆಯಲ್ಲಿ ಪ್ರಥಮ ವಿಜ್ಞಾನ ವಿಭಾಗದ ಕು.ವೈಷ್ಣವಿ ಶೆಟ್ಟಿ, ರಸಪ್ರಶ್ನೆಯಲ್ಲಿ ಪ್ರಥಮ ವಿಜ್ಞಾನ ವಿಭಾಗದ ಭರತ್ ಗೌಡ ಹಾಗೂ ಪ್ರಥಮ್ ಸ್ವರೂಪ್ ಪ್ರಥಮ ಸ್ಥಾನವನ್ನು ಹಾಗೂ ಇಂಗ್ಲಿಷ್ ಆಶುಭಾಷಣದಲ್ಲಿ ಪ್ರಥಮ ವಿಜ್ಞಾನ […]

ಪ.ಜಾತಿ ಮತ್ತು ಪ.ಪಂಗಡದ ನಿರುದ್ಯೋಗಿ ಯುವಕ-ಯುವತಿಯರಿಗೆ ಸ್ವ-ಉದ್ಯೋಗಕ್ಕಾಗಿ ದ್ವಿಚಕ್ರ ವಾಹನ ವಿತರಣೆ: ಕೋಟಾ ಶ್ರೀನಿವಾಸ್ ಪೂಜಾರಿ

ಉಡುಪಿ: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಸಮುದಾಯದ ಯುವಕ ಯುವತಿಯರಿಗೆ ರಾಜ್ಯಾದ್ಯಂತ 28 ಸಾವಿರ ದ್ವಿಚಕ್ರ ವಾಹನಗಳನ್ನು ವಿತರಿಸಲು ನಿರ್ಧರಿಸಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದರು. ತಮ್ಮ ಇಲಾಖೆಯ ವಿವಿಧ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಮಂಗಳವಾರ ವಿಡಿಯೋ ಸಂವಾದದ ಮೂಲಕ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಪ್ರಸಕ್ತ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆಯ ವಿವಿಧ ನಿಗಮಗಳ ಮೂಲಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ-ಯುವತಿಯರಿಗೆ ಸ್ವ-ಉದ್ಯೋಗಕ್ಕೆ ಅನುಕೂಲವಾಗುವಂತೆ ಸರಕು […]