ಬ್ರಹ್ಮಾವರ: ಎಸ್.ಎಮ್.ಎಸ್ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ
ಬ್ರಹ್ಮಾವರ: ಎಸ್ ಎಮ್.ಎಸ್. ಕಾಲೇಜಿನ 2022-23ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭವು ಬುಧವಾರದಂದು ಕಾಲೇಜಿನ ಡಾ. ಬಿ.ವಿ.ಶೆಟ್ಟಿ ಸಭಾಂಗಣದಲ್ಲಿ ನೆರವೇರಿತು. ಕಾಲೇಜಿನ ಸಂಚಾಲಕ ರೆ.ಫಾ. ಎಮ್.ಸಿ. ಮಥೈ ಇವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಉದ್ಘಾಟಕರಾಗಿ ಆಗಮಿಸಿದ ಎಸ್.ಡಿ.ಪಿ.ಟಿ ಕಾಲೇಜು ಮಂದಾರ್ತಿಯ ಹಿಂದಿ ಉಪನ್ಯಾಸಕಿ ಶ್ರೀಮತಿ ರೇಷ್ಮಾ ಶೆಟ್ಟಿ ಇವರು ದೀಪ ಬೆಳಗಿಸಿ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ, ತಮ್ಮ ವಿದ್ಯಾರ್ಥಿ ಜೀವನದಲ್ಲಿ ವಿದ್ಯಾರ್ಥಿ ಸಂಘದೊಂದಿಗೆ ಕ್ರಿಯಾಶೀಲರಾಗಿ ದುಡಿದ ನೆನಪುಗಳನ್ನು ಹಂಚಿಕೊಳ್ಳುತ್ತಾ ವಿದ್ಯಾರ್ಥಿಗಳಲ್ಲಿ ಆತ್ಮಸ್ಠೈರ್ಯವನ್ನು ಹೆಚ್ಚಿಸುವಲ್ಲಿ ವಿದ್ಯಾರ್ಥಿ ಸಂಘದ […]
ಕಲ್ಸಂಕ ಜಂಕ್ಷನ್ ಬಳಿ ನಿರ್ಮಿಸಿರುವ ಫ್ರೀ ಲೆಫ್ಟ್ ಸಾರ್ವಜನಿಕ ಸಂಚಾರಕ್ಕೆ ಮುಕ್ತ
ಉಡುಪಿ: ಕಲ್ಸಂಕ ಬಳಿ ದಿನೇ ದಿನೇ ವಾಹನ ದಟ್ಟಣೆ ಹೆಚ್ಚುತ್ತಿದ್ದು, ನಗರವಾಸಿಗಳು ಕಿರಿಕಿರಿ ಅನುಭವಿಸುತ್ತಿದ್ದರು. ಈ ಸಮಸ್ಯೆಗೆ ಪರಿಹಾರವಾಗಿ ಮಾಂಡವಿ ಬಿಲ್ಡರ್ಸ್ ಸಹಕಾರದೊಂದಿಗೆ ಕಲ್ಸಂಕ ಜಂಕ್ಷನ್ ಬಳಿ ಫ್ರೀ ಲೆಫ್ಟ್ ನಿರ್ಮಿಸಲಾಗಿದ್ದು, ಬುಧವಾರದಂದು ಇದರ ಉದ್ಘಾಟನಾ ಕಾರ್ಯವು ನೆರವೇರಿತು. ಶಾಸಕ ಕೆ. ರಘುಪತಿ ಭಟ್ ಉದ್ಘಾಟಿಸಿ ಇದರ ನಿರ್ಮಾಣಕ್ಕೆ ಸಹಕರಿಸಿದ ಮಾಂಡವಿ ಬಿಲ್ಡರ್ಸ್ ಗೆ ಅಭಿನಂದನೆ ಸಲ್ಲಿಸಿದರು. ಫ್ರೀ ಲೆಫ್ಟ್ ನಿರ್ಮಾಣದಿಂದ ವಾಹನ ದಟ್ಟಣೆ ಕಡಿಮೆಯಾಗಿ ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆ. ಈ ಸಂದರ್ಭದಲ್ಲಿ ಮಾಂಡವಿ ಬಿಲ್ಡರ್ಸ್ […]
ಕೆ.ಎಂ.ಸಿ ವೈದ್ಯರ ಸಾಧನೆ: ತೆರೆದ ಹೃದಯ ಶಸ್ತ್ರಚಿಕಿತ್ಸೆಯಿಲ್ಲದೆ ಯಶಸ್ವಿ ಹೃದಯ ಕವಾಟ ಬದಲಾವಣೆ
ಮಣಿಪಾಲ: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಹೃದ್ರೋಗ ವಿಭಾಗದ ಪ್ರಾಧ್ಯಾಪಕ ಡಾ.ಟಾಮ್ ದೇವಾಸಿಯಾ, ಸಹಾಯಕ ಪ್ರಾಧ್ಯಾಪಕಿ ಡಾ.ಮೋನಿಕಾ ಜೆ ಮತ್ತು ಹೃದಯ ಶಸ್ತ್ರ ಚಿಕಿತ್ಸಾ ವಿಭಾಗದ ಸಹ ಪ್ರಾಧ್ಯಾಪಕ ಡಾ.ಗುರುಪ್ರಸಾದ್ ರೈ ಅವರ ತಂಡವು ತೆರೆದ ಹೃದಯ ಶಸ್ತ್ರ ಚಿಕಿತ್ಸೆ ಇಲ್ಲದೆ ಮಹಾಪಧಮನಿಯ ಕವಾಟವನ್ನು ಯಶಸ್ವಿಯಾಗಿ ಬದಲಾಯಿಸುವುದರ ಮೂಲಕ ರೋಗಿಗಳಿಗೆ ಮರು ಜನ್ಮ ನೀಡಿದೆ. ಟ್ರಾನ್ಸ್‌ಕ್ಯಾಥೆಟರ್ ಎರೋಟಿಕ್ ವಾಲ್ವ್ ಇಂಪ್ಲಾಂಟೇಷನ್ (TAVI) ನಂತರ ಕೆಲವೇ ದಿನಗಳಲ್ಲಿ ರೋಗಿಗಳನ್ನು ಸ್ಥಿರ ಸ್ಥಿತಿಯಲ್ಲಿಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ಟ್ರಾನ್ಸ್‌ಕ್ಯಾಥೆಟರ್ ಮಹಾಪಧಮನಿಯ […]