ನಿಮ್ಮ ಆಧಾರ್ ಸಂಖ್ಯೆಯನ್ನು ಲಾಕ್ ಮಾಡುವ ಮೂಲಕ ದುರ್ಬಳಕೆಯನ್ನು ತಪ್ಪಿಸಿಕೊಳ್ಳಿ: ಇಲ್ಲಿದೆ ಲಾಕ್ ಮತ್ತು ಅನ್ ಲಾಕ್ ವಿಧಾನ
ಭಾರತೀಯ ನಿವಾಸಿಗಳಿಗೆ ಭಾರತೀಯ ಸರಕಾರವು ಅನನ್ಯ ಗುರುತಿನ ಸಂಖ್ಯೆಯ ಆಧಾರ್ ಕಾರ್ಡ್ ಅನ್ನು ನೀಡಿದೆ. ಭಾರತದಲ್ಲಿ ವಾಸಿಸುವ ಭಾರತೀಯ ನಾಗರಿಕತ್ವವನ್ನು ಹೊಂದಿರುವ ಪ್ರತಿಯೊಬ್ಬರ ಬಳಿಯೂ ಆಧಾರ್ ಕಾರ್ಡ್ ಇರುವುದು ಕಡ್ಡಾಯ. ಆದಾಗ್ಯೂ, ಆಧಾರ್ ಕಾರ್ಡ್ ಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ಘಟನೆಗಳು ಆಗ್ಗಿಂದಾಗ್ಗೆ ಕೇಳಿಬರುತ್ತಿರುತ್ತವೆ. ತಮ್ಮ ಆಧಾರ್ ಸಂಖ್ಯೆಯನ್ನು ಸಮಾಜಘಾತುಕ ಶಕ್ತಿಗಳ ಕೈಗೆ ಸಿಗದಂತೆ ನೋಡಿಕೊಳ್ಳಲು ಆಧಾರ್ ಲಾಕ್ ಮತ್ತು ಅನ್ ಲಾಕ್ ವ್ಯವಸ್ಥೆಯನ್ನು ನೀಡಲಾಗಿದೆ. ನಿವಾಸಿಗಳ, ವೈಯಕ್ತಿಕ ಡೇಟಾದ ಸುರಕ್ಷತೆ ಮತ್ತು ಗೌಪ್ಯತೆ ಯಾವಾಗಲೂ ಪ್ರಾಥಮಿಕ ಕಾಳಜಿಯಾಗಿದೆ. ನಿವಾಸಿಗಳ […]
ಮಂಗಳೂರು: ನ.26 ರಂದು ಅರೆಹೊಳೆ ಪ್ರತಿಷ್ಠಾನದ ವತಿಯಿಂದ ‘ಸುಖೀಭವ’ ಮಹಿಳಾ ಆರೋಗ್ಯ ಮಾಹಿತಿ ಕಾರ್ಯಕ್ರಮ
ಮಂಗಳೂರು: ಅರೆಹೊಳೆ ಪ್ರತಿಷ್ಠಾನವು ಆಯೋಜಿಸುವ ಸರಣಿ ಮಾಸಿಕ ಕಾರ್ಯಕ್ರಮ “ಬೆಳಕು” ಇದರ ಏಳನೇ ಕಾರ್ಯಕ್ರಮವು ನವೆಂಬರ್ 26 ರಂದು ಶನಿವಾರ ಬೊಂದೆಲ್ ನ ಮುಳಿಯಂಗಣದಲ್ಲಿ ಆಯೋಜಿಸಲಾಗಿದೆ. ಮಹಿಳೆಯರ ಆರೋಗ್ಯದ ಮಾಹಿತಿ ನೀಡುವ ‘ಸುಖೀಭವ’ ಎನ್ನುವ ಕಾರ್ಯಕ್ರಮಕ್ಕೆ ಹರ್ಷ ಡಯಾಗ್ನೋಸ್ಟಿಕ್ ಸರ್ವೀಸಸ್ ನ ನಿರ್ದೇಶಕಿ ಡಾ.ಪ್ರಿಯದರ್ಶಿನಿ ರೈ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾಹಿತಿಯನ್ನ ನೀಡಲಿದ್ದು ಆಸಕ್ತರು ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕೆಂದು ಅರೆಹೊಳೆ ಪ್ರತಿಷ್ಠಾನದ ಗೌರವಾಧ್ಯಕ್ಷ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ: […]
ನ.27 ರಿಂದ 30 ರವರೆಗೆ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಮಹೋತ್ಸವ
ಕಡಬ: ದೇಶ-ವಿದೇಶಗಳಲ್ಲಿ ಪ್ರಸಿದ್ದಿ ಪಡೆದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನ.27 ರಿಂದ 30 ರವರೆಗೆ ಸಂಭ್ರಮದ ಚಂಪಾಷಷ್ಠಿ ಮಹೋತ್ಸವ-2022 ಜರುಗಲಿದೆ. ಉತ್ಸವದ ವಿವರಗಳು: ನ.27 ಆದಿತ್ಯವಾರದಂದು ರಾತ್ರಿ ಹೂವಿನ ತೇರಿನ ಉತ್ಸವ, ನ.28 ಸೋಮವಾರದಂದು ರಾತ್ರಿ ಪಂಚಮಿ ರಥೋತ್ಸವ ಮತ್ತು ತೈಲ್ಯಾಭ್ಯಂಜನ, ನ.29 ಮಂಗಳವಾರದಂದು ಚಂಪಾಷಷ್ಠಿ ಮಹಾರಥೋತ್ಸವ, ನ.30 ಬುಧವಾರದಂದು ಅವಭೃತೋತ್ಸವ ಮತ್ತು ನೌಕಾವಿಹಾರ ನಡೆಯಲಿದೆ. ನ. 27 ಮತ್ತು 28 ರಂದು ರಾತ್ರಿ ಹೊತ್ತಿನ ಪ್ರಾರ್ಥನೆ ಸೇವೆ ಹಾಗೂ ನ.29 ರಂದು ಮಧ್ಯಾಹ್ನ […]
ರಿಷಭ್ ಶೆಟ್ಟಿಯವರನ್ನು ಭೇಟಿಯಾದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್: ಚಿತ್ರ ನಿರ್ಮಾಣಕ್ಕೆ ಸರ್ಕಾರದ ಬೆಂಬಲದ ಬಗ್ಗೆ ಚರ್ಚೆ
ಪಣಜಿ: ಭಾರತದ 53ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಭಾಗಿಯಾಗಲು ರಿಷಭ್ ಶೆಟ್ಟಿ ಗೋವಾಕ್ಕೆ ತೆರಳಿದ್ದ ಸಂದರ್ಭದಲ್ಲಿ ಅವರು ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್ ಅವರನ್ನು ಭೇಟಿಯಾಗಿದ್ದಾರೆ. ರಿಷಭ್ ಅವರನ್ನು ಭೇಟಿಯಾದ ಬಳಿಕ ಸಾವಂತ್ ಟ್ವೀಟ್ ಮಾಡಿ, “ನಟ, ಬರಹಗಾರ, ಚಲನಚಿತ್ರ ನಿರ್ಮಾಪಕ ರಿಷಭ್ ಶೆಟ್ಟಿ ಅವರನ್ನು ಮಹಾಲಕ್ಷ್ಮಿ, ಪಣಜಿಯಲ್ಲಿ ಭೇಟಿ ಮಾಡಿ ಸಂವಾದ ನಡೆಸಿದೆ. ಅವರ ಕಾಂತಾರ ಚಿತ್ರ ಜನಮನ್ನಣೆ ಗಳಿಸಿದೆ. ವಿವಿಧ ವಿಷಯಗಳ ಕುರಿತು ಚರ್ಚಿಸಿದೆ ಮತ್ತು ಗೋವಾದಲ್ಲಿ ಚಲನಚಿತ್ರ ನಿರ್ಮಾಣಕ್ಕೆ ಗೋವಾ ಸರ್ಕಾರದ ಬೆಂಬಲವನ್ನು ಪುನರುಚ್ಚರಿಸಿದೆ” […]
ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಎನ್.ಐ.ಎ ತೆಕ್ಕೆಗೆ; ಘಟನೆಯಿಂದ ಪಾಠ ಕಲಿಯಿರಿ ಎಂದ ಆಲೋಕ್ ಕುಮಾರ್
ಮಂಗಳೂರು: ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ (ಎನ್‌ಐಎ) ಹಸ್ತಾಂತರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಅಲ್ಲದೆ, ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ತನಿಖೆ ನಡೆಸಲು ತನಿಖಾ ಸಂಸ್ಥೆಗೆ ಶಿಫಾರಸು ಮಾಡಿದೆ ಎಂದು ವರದಿಯಾಗಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿ, ಕಂಕನಾಡಿ ಪೊಲೀಸ್ ಠಾಣೆಯಲ್ಲಿ ನಡೆದಿರುವ ಘಟನೆಗೆ ಸಂಬಂಧಿಸಿದಂತೆ ಪ್ರಾಥಮಿಕ ತನಿಖೆಯಲ್ಲಿ ಸಂಗ್ರಹಿಸಿದ ಸಾಕ್ಷ್ಯಗಳು ಮತ್ತು ಇತರ ಮಾಹಿತಿಗಳ ಆಧಾರದ ಮೇಲೆ ರಾಜ್ಯ ಸರ್ಕಾರವು ಈ ನಿರ್ಧಾರ ಕೈಗೊಂಡು ಯುಎಪಿಎ ಕಾಯ್ದೆಯಡಿ […]