ಮಂಗಳೂರು ಎಂಸಿಸಿ ಬ್ಯಾಂಕ್ ಶತಮಾನೋತ್ತರ ದಶಮಾನೋತ್ಸವ: ಅಶಕ್ತ ಕುಟುಂಬಗಳಿಗೆ 15 ಲಕ್ಷ ಮೊತ್ತ ದೇಣಿಗೆ

ಮಂಗಳೂರು:  ಕರಾವಳಿಯ ಮುಂಚೂಣಿ ಸಹಕಾರಿ ಲಿಮಿಟೆಡ್ ಬ್ಯಾಂಕ್ ಗಳಲ್ಲಿ ಒಂದಾದ ಎಂಸಿಸಿ ಬ್ಯಾಂಕ್ ಮಂಗಳೂರು ಇದರ ಶತಮಾನೋತ್ತರ ದಶಮಾನೋತ್ಸವದ ಪ್ರಯುಕ್ತ ಸಮಾಜದ ಅಶಕ್ತ ವರ್ಗದವರ ಚಿಕಿತ್ಸೆ, ಉನ್ನತ ಶಿಕ್ಷಣ, ವಸತಿ ಮತ್ತು ಹೆಣ್ಣು ಮಕ್ಕಳ ಮದುವೆ ವೆಚ್ಚ ಸೇರಿದಂತೆ ಸರಿಸುಮಾರು 90 ಅಶಕ್ತ ಕುಟುಂಬಗಳಿಗೆ 15 ಲಕ್ಷ ಮೊತ್ತದ ದತ್ತಿ ದೇಣಿಗೆ ವಿತರಣಾ ಕಾರ್ಯಕ್ರಮ ಮಂಗಳೂರಿನ ಬಾವುಟಗುಡ್ಡೆಯಲ್ಲಿರುವ ಎಂಸಿಸಿ ಬ್ಯಾಂಕ್ ನ ಪ್ರಧಾನ ಕಚೇರಿಯ ಸಭಾಂಗಣದಲ್ಲಿ ನೆರವೇರಿತು. ಜೆಪ್ಪು ಸೆಮಿನರಿಯ ಆಡಳಿತಾಧಿಕಾರಿ, ಪ್ರೊಫೆಸರ್  ಫಾ‌. ನವೀನ್ ಪಿಂಟೊ ದೀಪಬೆಳಗಿ […]

ಜನರ ಸೇವೆ ಹಾಗೂ ಉತ್ತಮ ಬಾಂಧವ್ಯ ಬೆಳೆಸಲು ಲಯನ್ಸ್ ಕ್ಲಬ್ ಸಹಕಾರಿ: ಲಯನ್ ಎಂ ಕೆ ಭಟ್

ಉಡುಪಿ: ವ್ಯಕ್ತಿತ್ವ ವಿಕಸನ, ಜನರ ಸೇವೆ ಹಾಗೂ ಉತ್ತಮ ಬಾಂಧವ್ಯ ಬೆಳೆಸಲು ಲಯನ್ಸ್ ಕ್ಲಬ್ ಗಳು ಮಾದರಿ ಸಂಸ್ಥೆಯಾಗಿವೆ. ಇದನ್ನು ಎಲ್ಲರೂ ಉಪಯೋಗಿಸಿಕೊಂಡು ಇದರಲ್ಲಿ ತೊಡಗಿಸಿಕೊಳ್ಳಬೇಕು. ಬ್ರಹ್ಮಗಿರಿ ಲಯನ್ಸ್ ಕ್ಲಬ್ ಈ ರೀತಿ ಮಾದರಿ ಕ್ಲಬ್ ಆಗಿ ರೂಪುಗೊಂಡಿದೆ ಎಂದು 317 ಸಿ ಜಿಲ್ಲಾ ಗವರ್ನರ್ ಲಯನ್ ಎಂ ಕೆ ಭಟ್ ಹೇಳಿದರು. ಅವರು ಶನಿವಾರದಂದು ಕ್ಲಬ್ಬಿಗೆ ಅಧಿಕೃತ ಭೇಟಿ ನೀಡಿದ ಬಳಿಕ ಚಿಟ್ಪಾಡಿಯ ಲಕ್ಷ್ಮಿ ಟವರ್ಸ್ ನ ಶ್ರೀ ಲಕ್ಷ್ಮಿ ಸಭಾಭವನದಲ್ಲಿ ನಡೆದ ಸಮಾರಂಭದಲ್ಲಿ ಸದಸ್ಯರನ್ನು […]

ಸಮವಸರಣ ಪೂಜೆಯೊಂದಿಗೆ ಧರ್ಮಸ್ಥಳ ಲಕ್ಷದೀಪೋತ್ಸವ ಕಾರ್ಯಕ್ರಮಕ್ಕೆ ತೆರೆ

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಗುರುವಾರದಂದು ರಾತ್ರಿ ಬಸದಿಯಲ್ಲಿ ಭಗವಾನ್‌ ಚಂದ್ರನಾಥ ಸ್ವಾಮಿಯ ಸಮವಸರಣ ಪೂಜೆಯೊಂದಿಗೆ ಲಕ್ಷದೀಪೋತ್ಸವ ಕಾರ್ಯಕ್ರಮಗಳು ಮುಕ್ತಾಯವಾದವು. ಪಂಚನಮಸ್ಕಾರ ಮಂತ್ರ ಪಠಣದೊಂದಿಗೆ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ, ಭಗವಾನ್ ಶ್ರೀ ಬಾಹುಬಲಿ ಸ್ವಾಮಿ, ಶ್ರುತದೇವಿ ಹಾಗೂ ಗಣಧರ ಪರಮೇಷ್ಠಿಗಳ ಅಷ್ಟವಿಧಾರ್ಚನೆ ಪೂಜೆ ಸುಶ್ರಾವ್ಯ ಗಾಯನದೊಂದಿಗೆ ಸಂಪನ್ನಗೊಂಡಿತು. ಬಾಹುಬಲಿ ಸೇವಾ ಸಮಿತಿಯ ಶ್ರಾವಕರು, ಶ್ರಾವಕಿಯರಿಂದ ಸುಶ್ರಾವ್ಯವಾಗಿ ಭಕ್ತಿಗೀತೆಗಳ ಗಾಯನ ಪೂಜೆಗೆ ವಿಶೇಷ ಮೆರುಗನ್ನು ನೀಡಿತು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಷಟ್ಕಂಡಾಗಮಾಧಾರಿತ ಸಿದ್ಧಾಂತ ಚಿಂತಾಮಣಿಗ್ರಂಥವನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು. […]

ತೆಂಕುಪೇಟೆ ನೂತನ ಸುಬ್ರಹ್ಮಣ್ಯ ಮಠದ ನಿರ್ಮಾಣಕ್ಕೆ ಶಂಕುಸ್ಥಾಪನೆ

ಉಡುಪಿ: ಇಲ್ಲಿನ ತೆಂಕುಪೇಟೆಯಲ್ಲಿರುವ ಸುಬ್ರಹ್ಮಣ್ಯ ಮಠದ ನಿವೇಶನದಲ್ಲಿ ಸುಬ್ರಹ್ಮಣ್ಯ ಮಠಾಧೀಶರಾದ ಶ್ರೀ ವಿದ್ಯಾಪ್ರಸನ್ನತೀರ್ಥ ಶ್ರೀಪಾದರು ಹಾಗೂ ಸೋದೆ ಮಠಾಧೀಶರಾದ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದರು ನೂತನ ಸುಬ್ರಹ್ಮಣ್ಯ ಮಠದ ನಿರ್ಮಾಣಕ್ಕೆ ಶಂಕುಸ್ಥಾಪನೆಯನ್ನು ನೆರವೇರಿಸಿದರು.ಈ ಸಂದರ್ಭದಲ್ಲಿ ಪ್ರಮುಖರಾದ ರತ್ನಕುಮಾರ್, ಡಾ.ವ್ಯಾಸರಾಜ ತಂತ್ರಿ, ಮಟ್ಟು ಲಕ್ಷ್ಮೀನಾರಾಯಣ ರಾವ್, ವಿಶ್ವನಾಥ ಭಟ್ ಕೊಡವೂರು, ಶ್ರೀಧರ ಭಟ್, ಶಾಂತ ಎಲೆಕ್ಟ್ರಿಕಲ್ಸಿನ ಶ್ರೀಪತಿ ಭಟ್, ಏಸ್ ಕನ್ಸಲ್ಟೆಂಟಿನ ರಾಜೇಂದ್ರ ಮಯ್ಯ, ಶ್ರೀವತ್ಸ ಆಚಾರ್ಯ, ವಿಷ್ಣು ಪಾಡಿಗಾರ್, ಸುಬ್ರಹ್ಮಣ್ಯ ಸಾಮಗ, ಮಧುಕರ ಮುದ್ರಾಡಿ ಮೊದಲಾದವರು ಉಪಸ್ಥಿತರಿದ್ದರು.

ಸಂವಿಧಾನದ ಆಶಯದ ಸಮಾನತೆ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಕ್ರೀಡೆ ಸಹಕಾರಿ: ಡಾ. ಅಶ್ವಥ್ ನಾರಾಯಣ್

ಉಡುಪಿ: ದೈಹಿಕ ಮತ್ತು ಮಾನಸಿಕ ಸಮಸ್ಯೆಗಳ ನಿವಾರಣೆ ಸೇರಿದಂತೆ ಎಲ್ಲಾ ರೀತಿಯ ಸಮಸ್ಯೆಗಳನ್ನು ಎದುರಿಸಲು ಅಗತ್ಯವಿರುವ ಶಕ್ತಿಯನ್ನು ಕ್ರೀಡೆಯಲ್ಲಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಪಡೆಯಬಹುದು. ಇಂತಹ ಚಟುಚಟಿಕೆಯಲ್ಲಿ ಭಾಗವಹಿಸುವ ಮೂಲಕ ಸಂವಿಧಾನದ ಆಶಯದಂತೆ ಪ್ರತಿಯೊಬ್ಬರಿಗೂ ಸ್ವಾತಂತ್ರ್ಯ, ಸಮಾನತೆ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕ್ರೀಡೆಯ ಮೂಲಕ ಸಮರ್ಥವಾಗಿ ನೀಡಬಹುದಾಗಿದ್ದು, ಸಂವಿಧಾನದ ಆಶಯಗಳಿಗೆ ಎಲ್ಲರೂ ಬದ್ದರಾಗಿರಬೇಕು ಎಂದು ರಾಜ್ಯದ ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ವಿದ್ಯುನ್ಮಾನ, ಐಟಿ ಮತ್ತು ಬಿಟಿ ಹಾಗೂ ವಿಜ್ಞಾನ […]