ಕಾರ್ಕಳ: ಪರ್ಪಲೆಗಿರಿಯಲ್ಲಿ ದೈವಸ್ಥಾನ ನಿರ್ಮಾಣಕ್ಕಾಗಿ ಭೂ ನಿಧಿ ಸಂಚಯನಕ್ಕೆ ಚಾಲನೆ

ಕಾರ್ಕಳ: ಇಲ್ಲಿನ ಅತ್ತೂರು ಪರ್ಪಲೆಗಿರಿಯಲ್ಲಿ ಶುಕ್ರವಾರದಂದು ಭೂ ನಿಧಿ ಸಂಚಯನದ ಅಂಗವಾಗಿ ಕೇಂಜ ಶ್ರೀಧರ ತಂತ್ರಿಯವರ ಪೌರೋಹಿತ್ಯದಲ್ಲಿ ಧಾರ್ಮಿಕ ವಿಧಿ ವಿಧಾನ ನಡೆಯಿತು. ಪರ್ಪಲೆಗಿರಿಯಲ್ಲಿ ದೈವಸ್ಥಾನ ನಿರ್ಮಾಣ ಕಾರ್ಯಕ್ಕೆ ಶೀಘ್ರದಲ್ಲಿಯೇ ಚಾಲನೆ ದೊರೆಯಲಿದ್ದು, ದೇವಸ್ಥಾನ ಮತ್ತು ದೈವಸ್ಥಾನ ನಿರ್ಮಾಣ ಹಾಗೂ ಇತರ ಧಾರ್ಮಿಕ ಸಾಮಾಜಿಕ ಕಾರ್ಯಗಳಿಗಾಗಿ ಜಮೀನಿನ ಅವಶ್ಯಕತೆ ಇರುವುದರಿಂದ ಭೂ ನಿಧಿ ಸಂಚಯನ ಯೋಜನೆಯನ್ನು ಹಮ್ಮಿಕೊಂಡಿದ್ದು ( 0.25 ಸೆಂಟ್ಸ್(3,000/-), 0.50 ಸೆಂಟ್ಸ್(6,000/-),1 ಸೆಂಟ್ಸ್(12,000/-) 2 ಸೆಂಟ್ಸ್(24,000/-), 5 ಸೆಂಟ್ಸ್(60,000/-),10 ಸೆಂಟ್ಸ್(1,20,000/-), 25 ಸೆಂಟ್ಸ್ (3 […]

ವಿಶ್ವದ ಅತಿದೊಡ್ಡ ಮೂತ್ರಕೋಶದ ಕಲ್ಲಿನ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದ ಕೆ.ಎಂ.ಸಿ ವೈದ್ಯರ ತಂಡ

ಮಣಿಪಾಲ: ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿನ ಮೂತ್ರಶಾಸ್ತ್ರಜ್ಞರ ತಂಡವು ಅತಿದೊಡ್ಡ ಮೂತ್ರಕೋಶದ ಕಲ್ಲನ್ನು ಯಶಸ್ವಿಯಾಗಿ ತೆಗೆದಿದೆ. 60 ವರ್ಷ ವಯಸ್ಸಿನ ಮಹಿಳೆ ಕಳೆದ ಆರು ವರ್ಷಗಳಿಂದ ಉರಿ ಮೂತ್ರದ ಸಮಸ್ಯೆಗಾಗಿ ಸ್ಥಳೀಯ ಆಸ್ಪತ್ರೆಗೆ ಭೇಟಿ ನೀಡುತ್ತಿದ್ದು, ಈ ಪ್ರತಿ ಭೇಟಿಯಲ್ಲಿಯೂ ಅವರಿಗೆ ಮೂತ್ರನಾಳದ ಸೋಂಕಿಗೆ ಪ್ರಾಯೋಗಿಕವಾಗಿ ಚಿಕಿತ್ಸೆ ನೀಡಲಾಗಿತ್ತು. ಮಹಿಳೆಯು ಇತ್ತೀಚೆಗೆ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಭೇಟಿ ನೀಡಿದ್ದರು. ಸಿಟಿ ಸ್ಕ್ಯಾನ್ ಮಾಡಿದಾಗ ಸಂಪೂರ್ಣ ಮೂತ್ರಕೋಶವನ್ನು ಆಕ್ರಮಿಸಿಕೊಂಡಿರುವ ಕಲ್ಲು ಇರುವುದು ಬಹಿರಂಗವಾಯಿತು. ಮೂತ್ರಶಾಸ್ತ್ರ ವಿಭಾಗದ ಪ್ರಾಧ್ಯಾಪಕ […]

ನ. 29 ರಂದು ಜಿಲ್ಲಾ ವ್ಯಾಪ್ತಿಯ ವಿವಿಧೆಡೆಗಳಲ್ಲಿ ವಿದ್ಯುತ್ ವ್ಯತ್ಯಯ

ಉಡುಪಿ:ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ನವೆಂಬರ್ 29 ರಂದು ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ. 33/11ಕೆವಿ ಕುಂಜಿಬೆಟ್ಟು ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಉಡುಪಿ-1, ಸಿಟಿ ಸೆಂಟರ್, ಉಡುಪಿ-2, ಉಡುಪಿ-3 ಮತ್ತು ಚಿಟ್ಪಾಡಿ ಫೀಡರಿನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಉಡುಪಿ ನಗರ ಪ್ರದೇಶಗಳಾದ ಬಡಗುಪೇಟೆ, ಸಿಟಿ ಬಸ್ಸು ನಿಲ್ದಾಣ ಏರಿಯಾ, ಕಡಿಯಾಳಿ, ಎಂ.ಜಿ.ಎಂ ಎದುರು, ಸಿಟಿ ಸೆಂಟರ್ ಮಾಲ್, ಕಿನ್ನಿಮುಲ್ಕಿ, ಮಿಷನ್ ಕಂಪೌಂಡ್, ಅಜ್ಜರಕಾಡು, […]

ಅಂಬಾಗಿಲು-ಗುಂಡಿಬೈಲು-ಕಲ್ಸಂಕ ಮಾರ್ಗದಲ್ಲಿ ಬಸ್ ಸಂಚಾರ ಕಡ್ಡಾಯ: ಪ್ರಾದೇಶಿಕ ಸಾರಿಗೆ ಕಚೇರಿ

ಉಡುಪಿ: ಜಿಲ್ಲಾಧಿಕಾರಿಗಳ ಅಧಿಸೂಚನೆಯಂತೆ ಸಂತೆಕಟ್ಟೆಯಿಂದ ಉಡುಪಿ ಕಡೆಗೆ ತೆರಳುವ ಕೆಲವೊಂದು ಬಸ್ಸಿನ ಪರವಾನಿಗೆಯಲ್ಲಿ ನಿಟ್ಟೂರು-ರಾ.ಹೆ. 17 ಎಂದು ನಮೂದಿಸಿರುವ ಬಸ್ಸುಗಳು ಅಂಬಾಗಿಲು ರಾ.ಹೆ. 66 ಕರಾವಳಿ ಬೈಪಾಸಿನಿಂದ ಅಂಬಲಪಾಡಿ ಬೈಪಾಸ್-ಬ್ರಹ್ಮಗಿರಿ-ಅಜ್ಜರಕಾಡು-ತಾಲೂಕು ಕಚೇರಿ ಮೂಲಕ ಹಾಗೂ ಉಳಿದ ಸಿಟಿ ಬಸ್ಸುಗಳು ಅಂಬಾಗಿಲು ತಾಂಗದಗಡಿ-ಗುಂಡಿಬೈಲು ಮೂಲಕ ಕಲ್ಸಂಕಕ್ಕೆ ಬಂದು ಬೃಂದಾವನ ಹೋಟೆಲ್ ಬಳಿ ಎಡಕ್ಕೆ ತಿರುಗಿ ಖಾಫಿಯ ಹೋಟೆಲ್ ಬಳಿ ಬಲಕ್ಕೆ ತಿರುಗಿ ಸಿಟಿ ಬಸ್ಸು ನಿಲ್ದಾಣಕ್ಕೆ ಹಾಗೂ ಬಾರ್ಕೂರು-ಬ್ರಹ್ಮಾವರ-ಹೊನ್ನಾಳ-ಹೆಬ್ರಿ-ಪೆರ್ಡೂರು-ಕುಕ್ಕೆಹಳ್ಳಿ ಹಾಗೂ ಇತರೆ ಕಡೆಯಿಂದ ಬರುವ ಷಟಲ್ ಸರ್ವೀಸ್ ಬಸ್ಸುಗಳು […]