ಮಾಹೆ ಜಿಸಿಪಿಎಎಸ್ ನಲ್ಲಿ ಗಾಂಧಿ ಇಲ್ಲಸ್ಟ್ರೇಟೆಡ್ ಫಾರ್ ಕಿಡ್ಸ್ ಪುಸ್ತಕ ಬಿಡುಗಡೆ
ಮಣಿಪಾಲ: ಜಗತ್ತಿನ ಉಪಭೋಗವಾದದ ಮನೋಭಾವ ಪರಿಸರದ ಜೀವಾಳವನ್ನೇ ಭಕ್ಷಿಸುತ್ತಿರುವ ಮತ್ತು ಹಿಂಸಾಚಾರವು ವಿಪರೀತವಾಗುತ್ತಿರುವ ಈ ಕಾಲಕ್ಕೆ ಮಹಾತ್ಮ ಗಾಂಧಿಯವರು ಹೆಚ್ಚು ಪ್ರಸ್ತುತವಾಗುತ್ತಾರೆ ಎಂದು ಪರಿಸರವಾದಿ ಮಮತಾ ರೈ ಹೇಳಿದರು. ಮಾಹೆಯ ಗಾಂಧಿಯನ್ ಸೆಂಟರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್, ಬಹುರೂಪಿ ಮತ್ತು ವಿವಿಡ್ ಲಿಪಿ ಜಂಟಿ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಕಲಾವಿದ ಗುಜ್ಜಾರ್ ಅವರ ಮಕ್ಕಳಿಗಾಗಿ ಗಾಂಧಿ ಮತ್ತು ಗಾಂಧಿ ಇಲ್ಲಸ್ಟ್ರೇಟೆಡ್ ಫಾರ್ ಕಿಡ್ಸ್ ಪುಸ್ತಕಗಳನ್ನು ಬಿಡುಗಡೆ ಮಾಡಿ ಮಾತನಾಡಿದರು. ಇಂದು ಬಿಡುಗಡೆಯಾಗಿರುವ ಸಚಿತ್ರ ಪುಸ್ತಕಗಳು […]
ಶ್ರೀಕೃಷ್ಣಮಠದಲ್ಲಿ ಸುಬ್ರಹ್ಮಣ್ಯ ಷಷ್ಠಿ ಉತ್ಸವ
ಉಡುಪಿ: ಶ್ರೀಕೃಷ್ಣಮಠದಲ್ಲಿ ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರ ಉಪಸ್ಥಿತಿಯೊಂದಿಗೆ ಸುಬ್ರಹ್ಮಣ್ಯ ಷಷ್ಠಿ ಪ್ರಯುಕ್ತ ವೈಭವದಿಂದ ವಾರ್ಷಿಕ ಉತ್ಸವ ನಡೆಯಿತು.
ಬಿಹಾರ ಬಿಜೆಪಿ ರಾಜ್ಯಾಧ್ಯಕ್ಷ ಡಾ. ಸಂಜಯ್ ಜೈಸ್ವಾಲ್ ಉಡುಪಿ ಭೇಟಿ
ಉಡುಪಿ: ಬಿಹಾರ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ಡಾ. ಸಂಜಯ್ ಜೈಸ್ವಾಲ್ ಉಡುಪಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅವರನ್ನು ಜಿಲ್ಲಾ ಬಿಜೆಪಿ ವತಿಯಿಂದ ಮಣಿಪಾಲದ ಹೋಟೆಲ್ ವ್ಯಾಲಿವ್ಯೂನಲ್ಲಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ಆತ್ರಾಡಿ, ಮಾಧ್ಯಮ ಪ್ರಕೋಷ್ಠದ ಜಿಲ್ಲಾ ಸಂಚಾಲಕ ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು ಹಾಗೂ ವಿಹಿಂಪ ಮಹಿಳಾ ಪ್ರಮುಖ್ ಪೂರ್ಣಿಮಾ ಸುರೇಶ್ ನಾಯಕ್ ಉಪಸ್ಥಿತರಿದ್ದರು.
ಪರೀಕ್ಷೆಯಲ್ಲಿ 10 ಅಂಕ ಕಡಿಮೆ ಬಂದ ಕಾರಣ ಆತ್ಯಹತ್ಯೆಗೆ ಶರಣಾದ ಬಾಲಕಿ
ಹೆಬ್ರಿ: ಕಡಿಮೆ ಅಂಕ ಬಂದಿದ್ದಕ್ಕೆ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕು ವ್ಯಾಪ್ತಿಯಲ್ಲಿ ನಡೆದಿದೆ. ಹೆಬ್ರಿಯ ಎಸ್.ಆರ್ ಪಿಯು ಕಾಲೇಜಿನ ವಿದ್ಯಾರ್ಥಿನಿ ಪೆರ್ಡೂರಿನ ತೃಪ್ತಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ದುರದೃಷ್ಟದ ಸಂಗತಿಯೆಂದರೆ, ಕೇವಲ 10 ಅಂಕ ಕಡಿಮೆ ಬಂದ ಕಾರಣಕ್ಕಾಗಿ ಈ ವಿದ್ಯಾರ್ಥಿನಿ ಈ ನಿರ್ಧಾರ ತೆಗೆದುಕೊಂಡಿದ್ದಾಳೆ. ಅಂಕ ಕಡಿಮೆ ಬಂದಿದ್ದಕ್ಕೆ ಕಾಲೇಜಿನ ಪ್ರಾಂಶುಪಾಲರು ಈಕೆಗೆ ಮಾನಸಿಕ ಕಿರುಕುಳ ನೀಡುತ್ತಿದ್ದರು ಎಂಬ ಆರೋಪ ಕೇಳಿ ಬಂದಿದೆ. ತೃಪ್ತಿ ಇಲ್ಲಿ ಉಚಿತ ಸೀಟ್ ಪಡೆದುಕೊಂಡಿದ್ದು […]
ಮುಸ್ಲಿಮ್ ಹೆಣ್ಣು ಮಕ್ಕಳಿಗಾಗಿ ಪ್ರತ್ಯೇಕ 10 ಸರ್ಕಾರಿ ಕಾಲೇಜು ಸ್ಥಾಪನೆ: ರಾಜ್ಯ ಸರ್ಕಾರ ಅನುಮೋದನೆ
ಬೆಂಗಳೂರು: ಕಲಬುರಗಿ, ಯಾದಗರಿ, ರಾಯಚೂರು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಸ್ಲಿಂ ಹೆಣ್ಣುಮಕ್ಕಳಿಗಾಗಿ ಪ್ರತ್ಯೇಕ 10 ಸರ್ಕಾರಿ ಕಾಲೇಜುಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಮೂರು ತಿಂಗಳ ರಾಜ್ಯ ವಕ್ಫ್ ಬೋರ್ಡ್ ಮುಸ್ಲಿಂ ಹೆಣ್ಣುಮಕ್ಕಳಿಗಾಗಿಯೇ ಪ್ರತ್ಯೇಕ 10 ಕಾಲೇಜುಗಳನ್ನು ಸ್ಥಾಪಿಸುವ ನಿರ್ಣಯ ಕೈಗೊಂಡಿದ್ದು ಒಂದೂವರೆ ತಿಂಗಳ ಹಿಂದೆ ಸರ್ಕಾರದಿಂದ ಇದಕ್ಕೆ ಅನುಮೋದನೆಯೂ ಸಿಕ್ಕಿತ್ತು. ಪ್ರತಿ ಕಾಲೇಜಿಗೆ 2.5 ಕೋಟಿ ರೂ. ಅನುದಾನವನ್ನು ಮೀಸಲಿರಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಅಡ್ಯಾರ್ ಕಣ್ಣೂರಿನ 16 ಎಕರೆ […]