ಮಾ.9 ರಿಂದ 29 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ: ಅಂತಿಮ ವೇಳಾಪಟ್ಟಿ ಹೀಗಿದೆ

ಬೆಂಗಳೂರು: ಈ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಪ್ರಕಟಿಸಿದೆ. ಈ ಬಗ್ಗೆ ಮಾಹಿತಿ ಬಿಡುಗಡೆ ಮಾಡಿರುವ ಮಂಡಳಿಯ ನಿರ್ದೇಶಕರು, ಮಾರ್ಚ್ 2023 ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯು ಮಾ. 09 ರಿಂದ ಮಾ.‌ 29 ರವೆಗೆ ನಡೆಯಲಿದೆ ಎಂದು ತಿಳಿಸಿದ್ದಾರೆ. ಪರೀಕ್ಷಾ ಅಂತಿಮ ವೇಳಾಪಟ್ಟಿಯನ್ನು ಮಂಡಳಿಯ ಜಾಲತಾಣ www.sslc.karnataka.gov.in ನಲ್ಲಿ ಪ್ರಕಟಿಸಲಾಗಿದೆ. ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ […]

ಹೊಟ್ಟೆ ನೋವೆಂದು ಆಸ್ಪತ್ರೆಗೆ ಬಂದಿದ್ದ ವ್ಯಕ್ತಿಯ ಹೊಟ್ಟೆಯಲ್ಲಿತ್ತು 187 ನಾಣ್ಯಗಳು: ತಬ್ಬಿಬ್ಬಾದ ವೈದ್ಯರು

ಬಾಗಲಕೋಟೆ: ಇಲ್ಲಿ ವ್ಯಕ್ತಿಯೊಬ್ಬರು ವಾಂತಿ ಮತ್ತು ಹೊಟ್ಟೆ ನೋವಿನಿಂದ ಬಳಲುತ್ತಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭ ಆತನ ಹೊಟ್ಟೆಯೊಳಗೆ ನಾಣ್ಯಗಳನ್ನು ಕಂಡು ವೈದ್ಯರು ತಬ್ಬಿಬ್ಬಾಗಿದ್ದಾರೆ. ಹಾನಗಲ್ ನ ಶ್ರೀ ಕುಮಾರೇಶ್ವರ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ವೈದ್ಯರು ವ್ಯಕ್ತಿಯ ಹೊಟ್ಟೆ ನೋವು ಮತ್ತು ವಾಂತಿಗೆ ಕಾರಣವಾಗುವ ಸಮಸ್ಯೆ ಏನೆಂಬುದನ್ನು ಹುಡುಕುತ್ತಿದ್ದಾಗ ಆತನ ಹೊಟ್ಟೆಯಲ್ಲಿ ನಾಣ್ಯಗಳಿರುವುದು ಪತ್ತೆಯಾಗಿದೆ. ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಈತ ಕಳೆದ 2-3 ತಿಂಗಳಿಂದ ನಾಣ್ಯಗಳನ್ನು ನುಂಗುತ್ತಿದ್ದ. ವಾಂತಿ, ಹೊಟ್ಟೆ ನೋವು ಕಾಣಿಸಿಕೊಂಡು ಆಸ್ಪತ್ರೆಗೆ […]

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜೀವನಾಧಾರಿತ ಚಲನ ಚಿತ್ರ ತೆರೆಗೆ: ನಿರ್ಮಾಪಕರ ಜೊತೆ ಮಾತುಕತೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಜೀವನಾಧಾರಿತ ಕನ್ನಡ ಚಲನಚಿತ್ರವು ತೆರೆಗೆ ಬರುವ ಸಾಧ್ಯತೆಯಿದೆ ಎನ್ನಲಾಗಿದೆ. ಕರ್ನಾಟಕದಲ್ಲಿ ಏಪ್ರಿಲ್-ಮೇ 2023 ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಈ ಚಿತ್ರ ತೆರೆಕಾಣುವ ನಿರೀಕ್ಷೆ ಇದೆ. ಮಾಜಿ ಶಾಸಕ ಶಿವರಾಜ್ ತಂಗಡಗಿ ಮತ್ತು ಶಾಸಕ ಬಿ ಜೆಡ್ ಜಮೀರ್ ಅಹಮದ್ ಖಾನ್ ಅವರು ಸಿದ್ದರಾಮಯ್ಯ ಅವರ ವೈಯಕ್ತಿಕ ಮತ್ತು ರಾಜಕೀಯ ಪ್ರಯಾಣವನ್ನು ಬಿಂಬಿಸುವ ಚಿತ್ರವನ್ನು ನಿರ್ಮಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ‘ಹೌದು ಹುಲಿಯಾ’ […]

ಹೊಸ ಪಡಿತರ ಚೀಟಿ ಅರ್ಜಿ ವಿಲೇವಾರಿಗೆ ಸರ್ಕಾರದ ಅಂಗೀಕಾರ ಮುದ್ರೆ

ಮಂಗಳೂರು/ಉಡುಪಿ: ಆದ್ಯತಾ ಪಡಿತರ ಚೀಟಿಗೆ ಹೊಸದಾಗಿ ಅರ್ಜಿ ಸಲ್ಲಿಸಿರುವವರಿಗೆ ಸಮಾಧಾನ ತರುವ ವಿಚಾರವೊಂದು ಬಂದಿದೆ. ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದ್ದು, ಬಾಕಿ ಇರುವ ಅರ್ಜಿಗಳ ವಿಲೇವಾರಿಗೆ ಸರ್ಕಾರವು ಅಂಗೀಕಾರ ಮುದ್ರೆಯೊತ್ತಿದೆ. ರಾಜ್ಯದಲ್ಲಿ ಸುಮಾರು 1.55 ಲಕ್ಷ ಅರ್ಹ ಅರ್ಜಿಗಳಿದ್ದು, ಇದರಲ್ಲಿ ದ.ಕ ಜಿಲ್ಲೆಯಲ್ಲಿ 3356 ಮತ್ತು ಉಡುಪಿ ಜಿಲ್ಲೆಯಲ್ಲಿ 4367 ಅರ್ಜಿಗಳು ಅರ್ಹತೆ ಪಡೆದಿವೆ. ಪಡಿತರಕ್ಕಾಗಿ ಅರ್ಜಿ ಗುಜರಾಯಿಸಿದವರಿಗೆ ಶ್ರೀಘ್ರದಲ್ಲೆ ರೇಷನ್ ಕಾರ್ಡ್ ದೊರೆಯಲಿದೆ. ಅವಳಿ ಜಿಲ್ಲೆಗಳಲ್ಲಿ ಅರ್ಜಿ ಹಾಕಿದವರ ವಾಸಸ್ಥಳ ಪರಿಶೀಲನಾ ಕಾರ್ಯ ಪೂರ್ಣಗೊಂಡಿದ್ದು, ಅರ್ಹ […]

ಡಿ.7 ರಂದು  ಪಿಂಚಣಿ ಮತ್ತು ತ್ರೈಮಾಸಿಕ ಅಂಚೆ ಅದಾಲತ್ 

ಉಡುಪಿ: ಅಂಚೆ ಇಲಾಖೆ ವತಿಯಿಂದ ಉಡುಪಿ ವಿಭಾಗದ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ಡಿಸೆಂಬರ್ 7 ರಂದು ಬೆಳಗ್ಗೆ 10 ಗಂಟೆಗೆ ಪಿಂಚಣಿ ಅದಾಲತ್ ಮತ್ತು 11 ಗಂಟೆಗೆ ತ್ರೈಮಾಸಿಕ ಅಂಚೆ ಅದಾಲತ್ ನಡೆಯಲಿದ್ದು, ಅಂಚೆ ಗ್ರಾಹಕರು ತಮ್ಮ ದೂರು ಮತ್ತು ಸಲಹೆಗಳನ್ನು ಡಿ.5 ರ ಒಳಗೆ ಅಂಚೆ ಅಧೀಕ್ಷಕರ ಕಚೇರಿಗೆ ಸಲ್ಲಿಸಬಹುದಾಗಿದೆ. ಅಂಚೆ ಅದಾಲತ್ ನಡೆಯುವ ದಿನದಂದು ಗ್ರಾಹಕರು ಹಾಜರಿದ್ದು, ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವಂತೆ ಉಡುಪಿ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.