ನಟ ವಿಜಯ್ ದೇವರಕೊಂಡಗೆ ಇಡಿ ಬುಲಾವ್: ಲೈಗರ್ ಹಣದ ಮೂಲದ ಕುರಿತು ವಿಚಾರಣೆ

ಹೈದರಾಬಾದ್: ನಟ ವಿಜಯ್ ದೇವರಕೊಂಡ ಅವರ ಇತ್ತೀಚಿನ ಚಿತ್ರ ಲೈಗರ್ ನ ನಿಧಿಯ ಮೂಲದ ಬಗ್ಗೆ ತನಿಖೆ ನಡೆಯುತ್ತಿದ್ದು, ಜಾರಿ ನಿರ್ದೇಶನಾಲಯವು ನಟನನ್ನು ಕರೆದು ವಿಚಾರಣೆ ನಡೆಸಿದೆ. ಚಿತ್ರ ನಿರ್ಮಾಪಕ ಪುರಿ ಜಗನ್ನಾಥ್ ಮತ್ತು ನಿರ್ಮಾಪಕಿ ಚಾರ್ಮಿ ಕೌರ್ ಅವರನ್ನು ಚಿತ್ರ ನಿರ್ಮಾಣಕ್ಕೆ ಬಳಸಲಾದ ಹಣದ ಮೂಲದ ಕುರಿತು ಪ್ರಶ್ನಿಸಿದ ಎರಡು ವಾರಗಳ ನಂತರ ವಿಜಯ್ ಅವರನ್ನು ಕರೆಸಿಕೊಳ್ಳಲಾಗಿದೆ. ವಿದೇಶಿ ಮೂಲದಿಂದ ಚಿತ್ರಕ್ಕೆ ಹಣ ಬಂದಿದೆ ಮತ್ತು ಇದರಲ್ಲಿ 1999 ರ ವಿದೇಶಿ ವಿನಿಮಯ ನಿರ್ವಹಣಾ ಕಾಯಿದೆಯ […]
ನಿಷೇಧಿತ ಪ್ಲಾಸ್ಟಿಕ್ ಮಾರಾಟ: 75 ಕೆ.ಜಿ ವಶ; ದಂಡ ವಸೂಲಿ

ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ದೊಡ್ಡಣಗುಡ್ಡೆ ಬಳಿ ಅಂಗಡಿಗಳಿಗೆ ನಿಷೇಧಿತ ಪ್ಲಾಸ್ಟಿಕ್‌ಗಳನ್ನು ಮಾರಾಟ ಮಾಡುತ್ತಿದ್ದ ಇಕ್ಬಾಲ್ ಎಂಬಾತನ ವಾಹನದ ಮೇಲೆ ಬುಧವಾರದಂದು ನಗರಸಭೆ ಆರೋಗ್ಯ ಶಾಖೆಯ ಅಧಿಕಾರಿಗಳು ದಾಳಿ ನಡೆಸಿ, 75 ಕೆ.ಜಿ ನಿಷೇಧಿತ ಪ್ಲಾಸ್ಟಿಕ್‌ಗಳನ್ನು ವಶಪಡಿಸಿಕೊಂಡು 5000 ರೂ. ದಂಡ ವಿಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ ನಗರಸಭೆಯ ಪರಿಸರ ಅಭಿಯಂತರರು, ಹಿರಿಯ ಆರೋಗ್ಯ ನಿರೀಕ್ಷಕರು, ಸ್ಯಾನಿಟರಿ ಸೂಪರ್‌ವೈಸರ್ ಹಾಗೂ ಪೌರಕಾರ್ಮಿಕರು ಭಾಗವಹಿಸಿದ್ದರು. ಉದ್ದಿಮೆದಾರರು ಹಾಗೂ ವ್ಯಾಪಾರಿಗಳು ನಿಷೇಧಿತ ಪ್ಲಾಸ್ಟಿಕ್‌ಗಳನ್ನು ಉಪಯೋಗಿಸುವುದು ಕಂಡು ಬಂದಲ್ಲಿ ಉದ್ದಿಮೆ ಪರವಾನಿಗೆಯನ್ನು ರದ್ದುಪಡಿಸಲಾಗುವುದು. ಪ್ಲಾಸ್ಟಿಕ್ […]
ಡಿ. 3 ಮತ್ತು 4 ರಂದು ಸುವರ್ಣ ಉಡುಪಿಗೆ ರಜತ ಉಡುಪಿಯ ಪರಿಕಲ್ಪನೆ ಕುರಿತು ವಿಚಾರ ಸಂಕಿರಣ

ಉಡುಪಿ: ಉಡುಪಿ ಜಿಲ್ಲಾ ರಜತ ಮಹೋತ್ಸವದ ಅಂಗವಾಗಿ ಶೈಕ್ಷಣಿಕ, ಸಾಂಸ್ಕೃತಿಕ, ಆರ್ಥಿಕ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ತೋರ್ಪಡಿಸಿರುವ ಜಿಲ್ಲೆಯು ರಚನೆಗೊಂಡು 25 ವರ್ಷಗಳ ಸಾರ್ಥಕತೆಯ ಸಾಧನೆಯನ್ನು ನೆನಪಿಸಿಕೊಂಡು ಮುಂದಿನ 25 ವರ್ಷಗಳಲ್ಲಿ ಸಾಧಿಸಬೇಕಾಗಿರುವ ಹೊಸ ಯೋಜನೆಗಳ ರೂಪುರೇಷೆಯನ್ನು ಕೈಗೊಂಡು ಕಾರ್ಯಗತಗೊಳಿಸಲು ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರ ಅಭಿಪ್ರಾಯದಂತೆ ಡಿಸೆಂಬರ್ 3 ಮತ್ತು 4 ರಂದು ಉಡುಪಿ ಜಿಲ್ಲೆಯಲ್ಲಿ ದಿಕ್ಸೂಚಿಯಾಗಿ ಸುವರ್ಣ ಉಡುಪಿಗೆ ರಜತ ಉಡುಪಿಯ ಪರಿಕಲ್ಪನೆ ಎಂಬ ಎರಡು ದಿನಗಳ ವಿಚಾರ ಸಂಕಿರಣವನ್ನು ಏರ್ಪಡಿಸಲಾಗಿದೆ. ಈ […]
ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕೋತ್ಸವ ಆಚರಣೆ

ಕುಂದಾಪುರ: ಮಂಗಳವಾರದಂದು ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಸಂಭ್ರಮದ ವಾರ್ಷಿಕೋತ್ಸವ ಸಮಾರಂಭ ನೆರವೇರಿತು. ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ, ಶ್ರೀ ಕಾಳಾವರ ವರದರಾಜ ಎಂ.ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಕೋಟೇಶ್ವರ ಇಲ್ಲಿನ ಪ್ರಾಂಶುಪಾಲ ಡಾ.ರಾಜೇಂದ್ರ ಎಸ್.ನಾಯಕ್ ಮಾತನಾಡಿ, ವಿದ್ಯಾರ್ಥಿಯು ತಂದೆ ತಾಯಿಯ ಕನಸನ್ನು ನನಸು ಮಾಡುವ ಶಿಕ್ಷಣ ಪಡೆದು ಜವಾಬ್ದಾರಿಯುತ ಸತ್ಪ್ರಜೆಯಾಗಿ ಭವ್ಯ ಭಾರತದ ನಿರ್ಮಾಣದಲ್ಲಿ ಸಹಕರಿಸಿ ಎಂದರು. ಅತಿಥಿಯಾಗಿದ್ದ ನಟಿ ಶ್ರೀಮತಿ ಪ್ರತಿಮಾ ನಾಯಕ್ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಉತ್ತಮ […]
ಹೆಮ್ಮಾಡಿ: ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಕವಿಗೋಷ್ಠಿ

ಹೆಮ್ಮಾಡಿ: ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ನ.18 ರಂದು ವಿದ್ಯಾರ್ಥಿ ಕವಿಗೋಷ್ಠಿ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಗಣೇಶ ಮೊಗವೀರ್ ಇವರು ವಹಿಸಿದ್ದರು. ರಾಜ್ಯ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಪುಂಡಲೀಕ ನಾಯಕ್ ನಾಯ್ಕನಕಟ್ಟೆ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು ವಿದ್ಯಾರ್ಥಿ ಸ್ವರಚಿಸಿ ವಾಚಿಸಿದ ಕವನಗಳನ್ನು ವಿಮರ್ಶಿಸಿ ವಿದ್ಯಾರ್ಥಿ ಪ್ರತಿಭೆಗಳನ್ನು ಪ್ರೋತ್ಸಾಹಿಸಿ, ಭವಿಷ್ಯದಲ್ಲಿ ನೀವು ಯಾವುದೇ ಉನ್ನತ ಉದ್ಯೋಗ ಪಡೆದರೂ ಈ ನೆಲದ ಭಾಷೆಯ ಅಭಿಮಾನ ನಿಮಗಿರಲಿ ಹಾಗೂ ನಿಮ್ಮ ಬರವಣಿಗೆಯ ಸಾಮರ್ಥ್ಯ ಇನ್ನೂ ಹೆಚ್ಚಿಸಿ ಎಂದು […]