ಉಡುಪಿ: ನಿಲ್ಲಿಸಿದ್ದ ಲಾರಿಯಿಂದ ಡೀಸೆಲ್ ಕಳ್ಳತನ
ಉಡುಪಿ: ಪೆಟ್ರೋಲ್ ಬಂಕ್ನಲ್ಲಿ ನಿಲ್ಲಿಸಿದ್ದ ಲಾರಿಯಿಂದ ಡೀಸೆಲ್ ಕಳವು ಮಾಡಿರುವ ಘಟನೆ ಡಿ.1ರಂದು ಬೆಳಗಿನ ಜಾವ ಅಂಬಲಪಾಡಿ ಜಂಕ್ಷನ್ ಬಳಿ ನಡೆದಿದೆ. ವಾಹನದಲ್ಲಿ ಬಂದ ಮೂವರು ವ್ಯಕ್ತಿಗಳು ಪೆಟ್ರೋಲ್ ಬಂಕ್ನಲ್ಲಿ ನಿಲ್ಲಿಸಿದ್ದ ಲಾರಿಯಿಂದ 20 ಲೀಟರ್ ಡಿಸೇಲ್ ಕಳವು ಮಾಡಿದ್ದಾರೆ ಎನ್ನಲಾಗಿದೆ. ಕಳವಾದ ಪೆಟ್ರೋಲ್ ನ ಮೌಲ್ಯ 1745ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾಡದೋಣಿ ಮೀನುಗಾರರ ವಿವಿಧ ಬೇಡಿಕೆ ಈಡೇರಿಕೆಗಾಗಿ ಹಕ್ಕೊತ್ತಾಯ ಪಾದಯಾತ್ರೆ
ಉಡುಪಿ: ನಾಡದೋಣಿ ಮೀನುಗಾರರಿಗೆ ಸೀಮೆ ಎಣ್ಣೆ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿ. 3ರಂದು ಬೈಂದೂರು ಹಾಗೂ ಕುಂದಾಪುರ ತಾಲೂಕು ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಒಕ್ಕೂಟದಿಂದ ಹಕ್ಕೊತ್ತಾಯ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಬೈಂದೂರು ನಾಡದೋಣಿ ಸಂಘದ ಅಧ್ಯಕ್ಷ ಆನಂದ ಕಾರ್ವಿ ಉಪ್ಪುಂದ ತಿಳಿಸಿದರು. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉಡುಪಿಯ ಎಂಜಿಎಂ ಕಾಲೇಜಿನಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಹಕ್ಕೊತ್ತಾಯ ಪಾದಯಾತ್ರೆ ನಡೆಸಲಿದ್ದು, ಸುಮಾರು ಐದು ಸಾವಿರಕ್ಕೂ ಹೆಚ್ಚು ಮೀನುಗಾರರು ಜಾಥಾದಲ್ಲಿ ಭಾಗವಹಿಸಲಿದ್ದಾರೆ ಎಂದರು. ರಾಜ್ಯ ಸರ್ಕಾರದ […]
ವೃದ್ಧೆಯ ಮೇಲೆ ಅತ್ಯಾಚಾರವೆಸಗಿ ಹಣ ದೋಚಿದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ
ಉಡುಪಿ: ಗುಜರಿ ಹೆಕ್ಕಿಕೊಂಡು ಬದುಕು ಸಾಗಿಸುತ್ತಿದ್ದ 78 ವರ್ಷ ಪ್ರಾಯದ ವೃದ್ದೆಯ ಮೇಲೆ ಅತ್ಯಾಚಾರವೆಸಗಿ ಆಕೆಯ ಬಳಿಯಿದ್ದ ನಗದನ್ನು ಅಪಹರಿಸಿದ್ದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶ ನೀಡಿದೆ. ಶಿವಮೊಗ್ಗ ಮೂಲದ ಇರ್ಫಾನ್ ಆತ್ಯಾಚಾರ ನಡೆಸಿದ ಆರೋಪಿಯಾಗಿದ್ದು, ಉಡುಪಿಯ ಕೋಳಿ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ. 2017 ಜೂನ್ 5 ರಂದು ಉಡುಪಿ ಪರಿಸರದಲ್ಲಿ ಗುಜರಿ ಮಾರಾಟ ಮಾಡಿಕೊಂಡು ಬದುಕುತ್ತಿದ್ದ ವೃದ್ಧೆಯನ್ನು ತೆಂಕಪೇಟೆ ಪರಿಸರದ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ ನಡೆಸಿ […]
ಮಾರ್ಪಳ್ಳಿ ಯಕ್ಷಗಾನ ಕಲಾಮಂಡಳಿಯ ಕರಾಟೆ ವಿದ್ಯಾರ್ಥಿಗಳಿಂದ ಅಮೋಘ ಸಾಧನೆ
ಉಡುಪಿ: ಕೆನೆ-ಈ- ಮಾಬುನಿ-ಶೀಟೋ-ರಿಯೋ-ಕರಾಟೆ ಸ್ಕೂಲ್ ಆಫ್ ಇಂಡಿಯಾ ಇವರ ವತಿಯಿಂದ ನ.6 ರಂದು ಕಟಪಾಡಿಯ ಥಂಡರ್ಸ್ ಗ್ರ್ಯಾಂಡ್ ಬೇ ಸುಭಾಷ್ ನಗರ ಕುರ್ಕಾಲ್ ನಲ್ಲಿ ನಡೆದ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಉಡುಪಿಯ ಪ್ರತಿಷ್ಠಿತ ಸಂಸ್ಥೆ ಬುಡೋಕಾನ್ ಕರಾಟೆ ಆಂಡ್ ಸೆಲ್ಫ್ ಡಿಫೆನ್ಸ್ ನ ಮಾರ್ಪಳ್ಳಿ ಯಕ್ಷಗಾನ ಕಲಾಮಂಡಳಿಯ ಕರಾಟೆ ತರಗತಿಯ ವಿದ್ಯಾರ್ಥಿಗಳು 36 ಪ್ರಥಮ ಬಹುಮಾನ, 30 ದ್ವಿತೀಯ ಬಹುಮಾನ, 9 ತೃತೀಯ ಬಹುಮಾನ ಹಾಗೂ ಒಂದು ಗ್ರ್ಯಾಂಡ್ ಚಾಂಪಿಯನ್ ಶಿಪ್ ಅನ್ನು […]
ಹೆಜಮಾಡಿ ಟೋಲ್ ಶುಲ್ಕ ಜಾರಿಗೊಳಿಸುವ ದಿನಾಂಕವನ್ನು ನಿರ್ಧರಿಸಲಾಗಿಲ್ಲ: ಜಿಲ್ಲಾಧಿಕಾರಿ ಕೂರ್ಮಾ ರಾವ್
ಉಡುಪಿ: ಹೆಜಮಾಡಿ ಟೋಲ್ ಗೇಟ್ನಲ್ಲಿ ಟೋಲ್ ಶುಲ್ಕ ಪರಿಷ್ಕರಣೆ ಕುರಿತು ಸ್ಪಷ್ಟನೆ ನೀಡಿರುವ ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್, ಕೇಂದ್ರ ಸರ್ಕಾರದ ಗೆಜೆಟ್ ಅಧಿಸೂಚನೆಯಂತೆ ಸುರತ್ಕಲ್ ಟೋಲ್ ಗೇಟ್ ಅನ್ನು ಹೆಜಮಾಡಿ ಟೋಲ್ ಗೇಟ್ನೊಂದಿಗೆ ವಿಲೀನಗೊಳಿಸಲಾಗಿದೆ. ಪರಿಷ್ಕೃತ ಟೋಲ್ ಶುಲ್ಕವನ್ನು ಜಾರಿಗೊಳಿಸುವ ದಿನಾಂಕವನ್ನು ಇನ್ನೂ ನಿರ್ಧರಿಸಲಾಗಿಲ್ಲ. ಎನ್ಎಚ್ಎಐ ಮನವಿ ಮೇರೆಗೆ ಹೆಜಮಾಡಿ ಟೋಲ್ಗೇಟ್ಗೆ ಸೂಕ್ತ ಭದ್ರತೆ ಒದಗಿಸಿದ್ದೇವೆ ಎಂದಿದ್ದಾರೆ. ಟೋಲ್ ಶುಲ್ಕ ಹೆಚ್ಚಳಕ್ಕೆ ಜನಪ್ರತಿನಿಧಿಗಳು ಆಕ್ಷೇಪ ವ್ಯಕ್ತಪಡಿಸಿದ್ದು, ಈ ಸಂಬಂಧ ಶೀಘ್ರದಲ್ಲೇ ಸಭೆ ಕರೆಯಲಾಗುವುದು. ಸಾರ್ವಜನಿಕರಿಂದ ಅಥವಾ […]