ಡಿ. 5 ರಿಂದ 1ರಿಂದ 15 ವರ್ಷದ ಮಕ್ಕಳಿಗೆ ಜಿ.ಇ ಲಸಿಕಾ ಅಭಿಯಾನ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ 1 ವರ್ಷದಿಂದ 15 ವರ್ಷದ ಮಕ್ಕಳ ಜೆ.ಇ ಲಸಿಕಾ ಅಭಿಯಾನ ಕಾರ್ಯಕ್ರಮದ ಉದ್ಘಾಟನೆಯು ಡಿಸೆಂಬರ್ 5 ರಂದು ಬೆಳಗ್ಗೆ 10 ಗಂಟೆಗೆ ನಗರದ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗ (ಬೋರ್ಡ್ ಹೈಸ್ಕೂಲ್) ಇಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಕುಂದಾಪುರ: ಡಿ. 3 ರಂದು ವಿದ್ಯುತ್ ವ್ಯತ್ಯಯ

ಕುಂದಾಪುರ: ಕೊಲ್ಲೂರು 33 ಕೆ.ವಿ ಮಾರ್ಗದಲ್ಲಿ ನಿರ್ವಹಣೆ ಕಾಮಗಾರಿ ಮತ್ತು 110/33/11 ಕೆ.ವಿ ನಾವುಂದ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಕಂಬದಕೋಣೆ ಹಾಗೂ ಮರವಂತೆ ಮಾರ್ಗದಲ್ಲಿ ವಾಹಕ ಬದಲಾವಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮರವಂತೆ, ನಾವುಂದ, ಯಡೇರಿ, ಕಂಬದಕೋಣೆ, ಹೆರಂಜಾಲು, ಕಾಲ್ತೋಡು ಕಿರಿಮಂಜೇಶ್ವರ, ಬವಳಾಡಿ ಮತ್ತು ಕೆರ್ಗಾಲ್ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಡಿಸೆಂಬರ್ 3 ರಂದು ಬೆಳಗ್ಗೆ 9.30 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ. […]

ಬ್ರಹ್ಮಾವರ: ಕೋಟ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಸಂಪೂರ್ಣ ಹವಾ ನಿಯಂತ್ರಿತ ಹೂಡೆ ಶಾಖೆ ಉದ್ಘಾಟನೆ

ಬ್ರಹ್ಮಾವರ: ಮೂರ್ತೆದಾರರ ಸೇವಾ ಸಹಕಾರಿ ಸಂಘ ಕೋಟ ಇದರ ಸಂಪೂರ್ಣ ಹವಾ ನಿಯಂತ್ರಿತ ಹೂಡೆ ಶಾಖೆಯ ಉದ್ಘಾಟನಾ ಸಮಾರಂಭವು ಡಿ.4 ಭಾನುವಾರದಂದು ಬೆಳಿಗ್ಗೆ 10 ಗಂಟೆಗೆ ಹೂಡೆಯ ಮೀನುಮಾರುಕಟ್ಟೆ ಎದುರಿನ ಸಿಂಧೂರ ಕಾಂಪ್ಲೆಕ್ಸ್ ನಲ್ಲಿ ನಡೆಯಲಿದೆ. ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಶಾಖೆಯನ್ನು ಉದ್ಘಾಟಿಸಲಿದ್ದು, ಇ-ಸ್ಟ್ಯಾಪಿಂಗ್ ಮತ್ತು ಆರ್.ಟಿ.ಸಿ ಸೌಲಭ್ಯವನ್ನು ಶಾಸಕ ರಘುಪತಿ ಭಟ್, ಭದ್ರತಾ ಕೊಠಡಿಯನ್ನು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಸೇಫ್ ಡಿಪಾಸಿಟ್ ಲಾಕರ್ ಅನ್ನು ಮಾಜಿ ಸಚಿವ ಪ್ರಮೋದ್ […]

ಹೆಜಮಾಡಿ ಟೋಲ್ ನಲ್ಲಿ ದುಬಾರಿ ಶುಲ್ಕ ಅವೈಜ್ಞಾನಿಕ: ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿ ಮಾಡಿ ಶಾಸಕ ರಘುಪತಿ ಭಟ್ ಮನವಿ

ಉಡುಪಿ: ಸುರತ್ಕಲ್ ಟೋಲ್ ರದ್ದು ಮಾಡಿ ಅದರ ಶುಲ್ಕವನ್ನು ಹೆಜಮಾಡಿ ಟೋಲ್ ಜತೆ ವಿಲೀನ ಮಾಡಿರುವುದು ಅವೈಜ್ಞಾನಿಕವಾಗಿದ್ದು, ಇದರಿಂದಾಗಿ ಉಂಟಾಗುವ ಪರಿಣಾಮಗಳ ಬಗ್ಗೆ ಡಿ. 01ರಂದು ಶಾಸಕ ರಘುಪತಿ ಭಟ್ ಅವರು ದೆಹಲಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿ ಸಮಸ್ಯೆಗಳ ಬಗ್ಗೆ ಮನವರಿಕೆ ಮಾಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ವಿನಂತಿಸಿದರು. ಮನವಿ ಸ್ವೀಕರಿಸಿದ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ […]

ಹೆಚ್.ಐ.ವಿ ರೋಗದ ಶ್ರೀಘ್ರ ತಪಾಸಣೆಯಿಂದ ಚಿಕಿತ್ಸೆ ಸಾಧ್ಯ: ಜಿಲ್ಲಾಧಿಕಾರಿ ಕೂರ್ಮಾರಾವ್

ಉಡುಪಿ: ಹೆಚ್.ಐ.ವಿ/ಏಡ್ಸ್ ಕುರಿತಂತೆ ಹೆಚ್ಚಿನ ಸಂಖ್ಯೆಯಲ್ಲಿ ಪರೀಕ್ಷೆ ಮಾಡಿಸಿ, ಶೀಘ್ರದಲ್ಲಿ ರೋಗವನ್ನು ಪತ್ತೆಹಚ್ಚಿ ಚಿಕಿತ್ಸೆ ಆರಂಭಿಸುವುದರಿಂದ ರೋಗ ಹರಡುವುದನ್ನು ತಡೆಯಬಹುದಾಗಿದ್ದು, ಈ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮತ್ತು ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಗುರುವಾರ ನಗರದ ಮಿನಿ ಟೌನ್ ಹಾಲ್‌ನಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಿದ್ಯಾರತ್ನ ಸ್ಕೂಲ್ […]