ಕೊಡವೂರು: ಕೃಷಿ ಹಾಗೂ ಮಹಿಳಾ ಸಮಿತಿ ಸಹಯೋಗದಲ್ಲಿ ಮಲ್ಲಿಗೆ ಕೃಷಿ ತರಬೇತಿ ಕಾರ್ಯಾಗಾರ
ಉಡುಪಿ: ಕೊಡವೂರು ನಗರಸಭಾ ಸದಸ್ಯ ವಿಜಯ ಕೊಡವೂರು, ಗ್ರಾಮೀಣ ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಹಾಗೂ ಸ್ವಉದ್ಯೋಗಕ್ಕೆ ಅನುಕೂಲವಾಗುವಂತೆ ನ.26ರಂದು ಕೊಡವೂರಿನ ಅಣ್ಣಪ್ಪ ಶೆಟ್ಟಿ ಜುಮಾದಿನಗರ ಇವರ ಮನೆಯಲ್ಲಿ ಮಲ್ಲಿಗೆ ಕೃಷಿ ತರಬೇತಿ ಕಾರ್ಯಾಗಾರವನ್ನು ಏರ್ಪಡಿಸಿದ್ದರು ಕಾರ್ಯಕ್ರಮದಲ್ಲಿ ಉಡುಪಿ ಕೃಷಿಕ ಸಂಘದ ಅಧ್ಯಕ್ಷ ರಾಮಕೃಷ್ಣ ಶರ್ಮ ಹಾಗೂ ಹಿರಿಯಡ್ಕ ಕಾಮಧೇನು ನರ್ಸರಿಯ ದಯಾನಂದ್ ಗಾಣಿಗ ಇವರು ಮಲ್ಲಿಗೆ ಬೆಳೆಯುವ ವಿಧಾನ , ಮಾರುಕಟ್ಟೆಯ ಅವಕಾಶಗಳು, ಆರ್ಥಿಕ ಸಹಾಯ ಮುಂತಾದ ವಿಚಾರಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ 23 ಜನ […]
ಹೆಮ್ಮಾಡಿ: ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಜನತಾ ಗೀತೋತ್ಸವ
ಹೆಮ್ಮಾಡಿ: ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಜನತಾ ಗೀತೋತ್ಸವ 2022 ಕನ್ನಡ ಗೀತ ಗಾಯನ ಕಾರ್ಯಕ್ರಮ ನಡೆಯಿತು.ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಗಣೇಶ ಮೊಗವೀರ್ ಇವರು ವಹಿಸಿದ್ದರು. ಸಮಾರಂಭದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಉಪ ಪ್ರಾಂಶುಪಾಲ ರಾಮ ದೇವಾಡಿಗ ಮಾತನಾಡಿ, ಕನ್ನಡ ನಾಡು- ನುಡಿ-ಸಂಸ್ಕೃತಿಗೆ ಸಂಬಂಧಿಸಿದ ಗೀತ ಗಾಯನದಂತಹ ಕಾರ್ಯಕ್ರಮಗಳು ಅರ್ಥಪೂರ್ಣವಾದದ್ದು ಎನ್ನುತ್ತಾ ಕಾಲೇಜಿನ ವಿದ್ಯಾರ್ಥಿ ಪ್ರತಿಭೆಗಳನ್ನು ಅಭಿನಂದಿಸಿದರು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ನಾಗರಾಜ ಪಾಣರರವರು ಜಾನಪದ ಸಂಸ್ಕೃತಿಯ […]