ಆರ್.ಟಿ.ಒಗೆ ವಾಹನ ಅಡಮಾನ ರದ್ಧತಿ ಹಾಗೂ ನಿರಪೇಕ್ಷಣಾ ಪತ್ರ ಸಲ್ಲಿಕೆ ಕಡ್ಡಾಯ
ಉಡುಪಿ: ವಾಹನಕ್ಕೆ ಆರ್ಥಿಕ ನೆರವು ನೀಡುವ ಬ್ಯಾಂಕ್‌ಗಳು, ಸಂಸ್ಥೆಗಳು ಹಾಗೂ ಇತರೆ ಹಣಕಾಸು ಸಂಸ್ಥೆಗಳು ವಾಹನದ ಅಡಮಾನ ರದ್ಧತಿಗಾಗಿ ನಮೂನೆ-35 ಹಾಗೂ ನಿರಪೇಕ್ಷಣಾ ಪತ್ರ ನೀಡಿದ ಕೂಡಲೇ ಅಂತಹ ವಾಹನಗಳ ವಿವರಗಳನ್ನು ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಗೆ ಇ-ಮೇಲ್ [email protected] ಮೂಲಕ ಕಡ್ಡಾಯವಾಗಿ ಮಾಹಿತಿಯನ್ನು ರವಾನಿಸುವಂತೆ ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಡಿ. 14 ರಂದು ಪೂರ್ಣಪ್ರಜ್ಞಾ ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳ
ಉಡುಪಿ: ಜಿಲ್ಲಾ ಕೌಶಲ್ಯ ಮಿಷನ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಪೂರ್ಣಪ್ರಜ್ಞಾ ಕಾಲೇಜು ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಬೃಹತ್ ಉದ್ಯೋಗ ಮೇಳ ಕಾರ್ಯಕ್ರಮವು ಡಿಸೆಂಬರ್ 14 ರಂದು ಬೆಳಗ್ಗೆ 9.30 ಕ್ಕೆ ನಗರದ ಪೂರ್ಣಪ್ರಜ್ಞಾ ಕಾಲೇಜಿನಲ್ಲಿ ನಡೆಯಲಿದೆ. ಉದ್ಯೋಗ ಮೇಳದಲ್ಲಿ ವಿವಿಧ ಕಂಪೆನಿ ಹಾಗೂ ಸಂಸ್ಥೆಗಳು ಭಾಗವಹಿಸಲಿದ್ದು, ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಪದವಿ, ಡಿಪ್ಲೋಮಾ, ಐ.ಟಿ.ಐ, ಸ್ನಾತಕೋತ್ತರ ಹಾಗೂ ವಿವಿಧ ವಲಯಕ್ಕೆ ಸಂಬಂಧಿಸಿದ ವಿದ್ಯಾರ್ಹತೆ ಹೊಂದಿದ ಆಸಕ್ತ ಅಭ್ಯರ್ಥಿಗಳು ಅಂಕಪಟ್ಟಿ, ರೆಸ್ಯೂಂ ಹಾಗೂ ಆಧಾರ್ […]
ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ: ಶ್ರೀ ವೆಂಕಟರಮಣ ಕಾಲೇಜಿನ ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ ಆಯ್ಕೆ
ಕುಂದಾಪುರ: ಪದವಿ ಪೂರ್ವ ಶಿಕ್ಷಣ ಇಲಾಖೆಬೆಂಗಳೂರು, ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ, ಹಾಸನ ಮತ್ತು ಹೆಚ್. ಕೆ. ಎಸ್. ಪದವಿ ಪೂರ್ವ ಕಾಲೇಜು ಹಾಸನ ಇವರ ಸಂಯುಕ್ತ ಆಶ್ರಯದಲ್ಲಿ ಡಿ01 ರಂದು ಜರುಗಿದ ಮೈಸೂರು ವಿಭಾಗ ಮಟ್ಟದ ಇಂಗ್ಲೀಷ್ ಚರ್ಚಾ ಸ್ಪರ್ಧೆಯಲ್ಲಿ ಕುಂದಾಪುರ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಪ್ರಣಮ್ಯ ಹಾಗೂ ಭಾವಗೀತೆ ಸ್ಪರ್ಧೆಯಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ […]
ರನ್ನಿಂಗ್ ರೇಸ್ ನಲ್ಲಿ ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿ ಕಾರ್ತಿಕ್ ವೈ ರಾಜ್ಯಮಟ್ಟಕ್ಕೆ ಆಯ್ಕೆ
ಕಾರ್ಕಳ: ಪದವಿ ಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ಉಡುಪಿ ಜ್ಞಾನಸುಧಾ ಪಿ.ಯು.ಕಾಲೇಜಿನ ಆಶ್ರಯದಲ್ಲಿ ನವೆಂಬರ್ 29 ಹಾಗೂ 29 ರಂದು ನಡೆದ ಜಿಲ್ಲಾ ಮಟ್ಟದ ಕ್ರೀಡಾ ಕೂಟದಲ್ಲಿ, ಕಾರ್ಕಳ ಜ್ಞಾನಸುಧಾದ ಕಾರ್ತಿಕ್ ವೈ 1500 ಮೀಟರ್ ರೇಸ್ ನಲ್ಲಿ ದ್ವಿತೀಯ ಸ್ಥಾನ ಗಳಿಸಿ, ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಂಜನ ವಿ ಬೆಸ್ಕೂರ್ ಡಿಸ್ಕಸ್ ತ್ರೋ ನಲ್ಲಿ ತೃತೀಯ ಹಾಗೂ 4*100 ಮೀ ರಿಲೇಯಲ್ಲಿ ಸನ್ನಿಧಿ ಶೆಟ್ಟಿ, ಸನ್ನಿಧಿ, ಸನ್ನಿಧಿ ಪೂಜಾರಿ ಹಾಗೂ ಅದಿತಿ ಶೆಟ್ಟಿ ಇವರು ತೃತೀಯ […]
ಕಾರ್ಕಳ ಎಂ. ಪಿ. ಎಂ. ಕಾಲೇಜಿನಲ್ಲಿ ಮಾನವಿಕ ಸಂಘ ಉದ್ಘಾಟನೆ
ಕಾರ್ಕಳ : ಇಲ್ಲಿನ ಎಂ. ಪಿ. ಎಂ. ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಾನವಿಕ ಸಂಘದ ಉದ್ಘಾಟನಾ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ಡಿ.2 ರಂದು ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದ ಉಡುಪಿ ಜಿಲ್ಲಾ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಸನ್ನ ಎಚ್ ಮಾತನಾಡಿ, ಸ್ಪರ್ಧಾತ್ಮಕ ಯುಗದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳೊಂದಿಗೆ ಉದ್ಯೋಗ ಜೀವನವನ್ನು ರೂಪಿಸಲು ಅನೇಕ ಅವಕಾಶಗಳಿವೆ. ಮೂರು ವರ್ಷದ ಪದವಿಯೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ವಿದ್ಯಾರ್ಥಿಗಳು ತಯಾರಿ ನಡೆಸಬೇಕು, ಸತತ ಪರಿಶ್ರಮ ಮತ್ತು ಓದಿನ […]