ಡಿ.4 ರಂದು ಹೂಡೆಯಲ್ಲಿ ಕೋಟ ಮೂರ್ತೆದಾರರ ಸೇ.ಸ.ಸಂಘ ದ 6ನೇ ಶಾಖೆ ಶುಭಾರಂಭ
ಉಡುಪಿ: ಕೋಟ ಮೂರ್ತೆದಾರರ ಸೇವಾ ಸಹಕಾರಿ ಸಂಘ ತನ್ನ 31ನೇ ವರ್ಷದ ಸಂಭ್ರಮಾಚರಣೆಯಲ್ಲಿದ್ದು, ಈ ಸಂದರ್ಭದಲ್ಲಿ ಸಂಪೂರ್ಣ ಹವಾನಿಯಂತ್ರಿತ 6ನೇ ಶಾಖೆಯು ತೋನ್ಸೆ ಹೂಡೆಯ ಮೀನು ಮಾರ್ಕೆಟ್ ಎದುರಿನ ‘ಸಿಂಧೂರ ಕಾಂಪ್ಲೆಕ್ಸ್’ನಲ್ಲಿ ಡಿಸೆಂಬರ್ 4 ರಂದು ಬೆಳಿಗ್ಗೆ 10 ಗಂಟೆಗೆ ಶುಭಾರಂಭಗೊಳ್ಳಲಿದೆ. ಸಂಘವು ಕೋಟದಲ್ಲಿ ಸ್ವಂತ ಸುಸಜ್ಜಿತ ಕೇಂದ್ರ ಕಚೇರಿ ಹಾಗೂ ವಾಣಿಜ್ಯ ಸಂಕೀರ್ಣ ಮತ್ತು ಸಭಾಭವನ ಹೊಂದಿದ್ದು, ಸಾಸ್ತಾನ ಶಾಖೆ ಸ್ವಂತ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದೆ. ಪಾಲು ಬಂಡವಾಳ 1.26 ಕೋಟಿ ರೂ., ಠೇವಣಿ 62 ಕೋಟಿ […]
ಬಿಜೆಪಿ ಜಿಲ್ಲಾ ಒಬಿಸಿ ಮೋರ್ಚಾ ಕಾರ್ಯಕಾರಿಣಿ ಸಭೆ
ಉಡುಪಿ: ಬಿಜೆಪಿ ಜಿಲ್ಲಾ ಒಬಿಸಿ ಮೋರ್ಚಾದ ಕಾರ್ಯಕಾರಿಣಿ ಸಭೆಯು ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಸುರೇಂದ್ರ ಪಣಿಯೂರು ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಿತು. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರವಿ ಅಮೀನ್ ಕಾರ್ಯಕಾರಿಣಿ ಸಭೆಯನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿ, ಜಿಲ್ಲಾ ಒಬಿಸಿ ಮೋರ್ಚಾದ ಕಾರ್ಯ ಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಹಾಗೂ ಜಿಲ್ಲಾ ಒಬಿಸಿ ಮೋರ್ಚಾ ಉಸ್ತುವಾರಿ ಅಶೋಕ ಮೂರ್ತಿ ಮಾತನಾಡಿ ಸಂಘಟನಾತ್ಮಕ ವಿಚಾರಗಳ ಕುರಿತು ಸಮಗ್ರ ಮಾಹಿತಿ ನೀಡಿದರು. […]
ಸುರತ್ಕಲ್ ಟೋಲ್ ಎತ್ತಂಗಡಿ: ಉದ್ಯೋಗ ಕಳಕೊಂಡ ಕಾರ್ಮಿಕರಿಗೆ ಸಹಾಯ ಹಸ್ತ ಚಾಚಿದ ಪ್ರತಿಭಾ ಕುಳಾಯಿ
ಮಂಗಳೂರು: ಸುರತ್ಕಲ್ ಟೋಲ್ ಗೇಟ್ ನಲ್ಲಿ ಉದ್ಯೋಗದಲ್ಲಿದ್ದು ಟೋಲ್ ತೆರವುಗೊಂಡ ಹಿನ್ನೆಲೆಯಲ್ಲಿ ಉದ್ಯೋಗ ಕಳೆದುಕೊಂಡಿರುವ 35 ಮಂದಿಗೆ ಕೆಲಸ ನೀಡುವುದಾಗಿ ಹೇಳಿದ್ದ ಕೆಪಿಸಿಸಿ ಸಂಯೋಜಕಿ ಪ್ರತಿಭಾ ಕುಳಾಯಿ ಅವರು ತಮ್ಮನ್ನು ಸಂಪರ್ಕಿಸಿದ 19 ಮಂದಿಯಲ್ಲಿ ಹೆಚ್ಚಿನ ಯುವಕ ಯುವತಿಯರಿಗೆ ಉದ್ಯೋಗ ಕಲ್ಪಿಸುವ ಮೂಲಕ ಶ್ಲಾಘನೆಗೆ ಪಾತ್ರರಾಗಿದ್ದಾರೆ. ಈ ಕುರಿತು ಫೇಸ್ ಬುಕ್ ಪೋಸ್ಟ್ ಹಾಕಿರುವ ಪ್ರತಿಭಾ ಕುಳಾಯಿ ಅವರು, ಸುರತ್ಕಲ್ ಟೋಲ್ ಗೇಟ್ ನಲ್ಲಿ ಉದ್ಯೋಗ ಕಳೆದುಕೊಂಡ 35 ಮಂದಿಯನ್ನು ನಾನು ಭೇಟಿಯಾಗಿ ಅವರಿಗೆ ಅವರ ವಿದ್ಯಾರ್ಹತೆಗೆ […]
ಮಾತಿನ ಮಲ್ಲ, ಯಕ್ಷ ಕಲಾರಂಗದ ದಿಗ್ಗಜ ಕುಂಬ್ಳೆ ಸುಂದರ್ ರಾವ್ ಅವರ ಶ್ರದ್ಧಾಂಜಲಿ ಸಭೆ
ಉಡುಪಿ : ಆರು ದಶಕಗಳ ಕಾಲ ತಮ್ಮ ಮಾತಿನ ಮೋಡಿಯಿಂದ ಯಕ್ಷರಂಗವನ್ನು ಆಳಿದ ಹಿರಿಯ ಯಕ್ಷಗಾನ ಕಲಾವಿದ ಕುಂಬ್ಳೆ ಸುಂದರ ರಾಯರಿಗೆ ಯಕ್ಷಗಾನ ಕಲಾರಂಗದ ನೇತೃತ್ವದಲ್ಲಿ ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಡಿ. 01 ರಂದು ನಾಗರಿಕ ಶ್ರದ್ಧಾಂಜಲಿಯು ನಡೆಯಿತು. ಪ್ರಸಂಗಕರ್ತ ಪಾರ್ತಿಸುಬ್ಬ ಪ್ರಶಸ್ತಿ ಪುರಸ್ಕೃತ ಡಿ.ಎಸ್ ಶ್ರೀಧರ್ ಅವರು ಕುಂಬಳೆಯವರ ಮಾತಿನ ಪ್ರೌಢಿಮೆಯನ್ನು ಯಕ್ಷಗಾನ ಬಯಲಾಟ ಅಕಾಡೆಮಿಯ ಸ್ಥಾಪಕ ಅಧ್ಯಕ್ಷರಾಗಿ ಪಾರ್ತಿಸುಬ್ಬ ಪ್ರಶಸ್ತಿಯ ಸ್ಥಾಪನೆ, ಹಿಂದೆ ಇದ್ದ ಪ್ರಶಸ್ತಿಯ ಸಂಖ್ಯೆ ಮತ್ತು ಮೊತ್ತವನ್ನು ವೃದ್ಧಿಸುವಲ್ಲಿ ಅವರು […]
ಪರ್ಯಾಯ ಪುತ್ತಿಗೆ ಮಠದ ಬಾಳೆ ಮುಹೂರ್ತ ಕಾರ್ಯಕ್ರಮ ಸಂಪನ್ನ
ಉಡುಪಿ: ಭಾವಿ ಪರ್ಯಾಯ ಪುತ್ತಿಗೆ ಮಠದ ಪರ್ಯಾಯ ಪೂರ್ವ ಮುಹೂರ್ತಗಳಲ್ಲಿ ಮೊದಲನೆಯ ಕಾರ್ಯಕ್ರಮ ಬಾಳೆ ಮುಹೂರ್ತ ಶುಕ್ರವಾರ ಬೆಳಿಗ್ಗೆ 8.20ರ ಧನುರ್ನಗ್ನದಲ್ಲಿ ನಡೆಯಿತು. 2024ರ ಜ. 18ರಂದು ಸರ್ವಜ್ಞ ಪೀಠವೇರಿ ಚತುರ್ಥ ಬಾರಿಗೆ ದ್ವೈವಾರ್ಷಿಕ ಶ್ರೀಕೃಷ್ಣ ಪೂಜಾ ಕೈಂಕರ್ಯ ಸ್ವೀಕರಿಸಲಿರುವ ಭಾವಿ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಪುತ್ತಿಗೆ ಮಠದ ನಿಗದಿತ ಸ್ಥಳದಲ್ಲಿ ಬಾಳೆ ಮತ್ತು ತುಳಸಿ ಸಸಿಗಳನ್ನು ನೆಡುವ ಮೂಲಕ ಸಾಂಪ್ರದಾಯಿಕ ಬಾಳೆ ಮುಹೂರ್ತಕ್ಕೆ ಚಾಲನೆ ನೀಡಲಾಯಿತು. ಹೆರ್ಗ ವೇದವ್ಯಾಸ ಭಟ್, ಕೇಂಜ […]