ಡಾ.ತಲ್ಲೂರು ಶಿವರಾಮ ಶೆಟ್ಟಿ ಇವರಿಗೆ ಕರ್ನಾಟಕ ಜಾನಪದ ವಿವಿ ಗೌರವ ಡಾಕ್ಟರೇಟ್ ಪ್ರದಾನ
ಉಡುಪಿ: ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಕೊಡ ಮಾಡುವ 2022 ನೇ ಸಾಲಿನ ಗೌರವ ಡಾಕ್ಟರೇಟ್ ಪದವಿಯನ್ನು ಉಡುಪಿಯ ಪ್ರಸಿದ್ಧ ಸಾಂಸ್ಕೃತಿಕ ಮುಂದಾಳು, ಉದ್ಯಮಿ ಡಾ.ತಲ್ಲೂರು ಶಿವರಾಮ ಶೆಟ್ಟಿ ಇವರಿಗೆ ಗುರುವಾರದಂದು ಪ್ರದಾನ ಮಾಡಲಾಯಿತು. ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿರುವ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆದ ವಿಶ್ವವಿದ್ಯಾಲಯದ 6 ಮತ್ತು 7ನೇ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಪದವಿಯನ್ನು ಪ್ರದಾನ ಮಾಡಿದರು. ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ.ಟಿ.ಎಂ.ಭಾಸ್ಕರ್ ಅವರು ಈ ಪ್ರತಿಷ್ಠಿತ ಗೌರವವನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮೂಡಬಿದ್ರೆ […]
ಗುಂಡೆಸೆತ ಸ್ಪರ್ಧೆ: ಜನತಾ ಸ್ವತಂತ್ರ ಪ.ಪೂ ಕಾಲೇಜಿನ ಆರ್ಯ ಮೊಗವೀರ ರಾಜ್ಯ ಮಟ್ಟಕ್ಕೆ ಆಯ್ಕೆ
ಕುಂದಾಪುರ: ಪದವಿಪೂರ್ವ ಶಿಕ್ಷಣ ಇಲಾಖೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ. ವಾಣಿಜ್ಯ ವಿಭಾಗದ ವಿದ್ಯಾರ್ಥಿ ಆರ್ಯ ಮೊಗವೀರ ‘ಗುಂಡು ಎಸೆತ’ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ ಆಗಿರುತ್ತಾರೆ. ವಿದ್ಯಾರ್ಥಿಯ ಕ್ರೀಡಾ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಉಪ ಪ್ರಾಂಶುಪಾಲರು, ಬೋಧಕ, ಬೋದಕೇತರ ವೃಂದದವರು ಅಭಿನಂದಿಸಿದ್ದಾರೆ.
ಮಾಹೆಯ ನೂತನ ರಿಜಿಸ್ಟ್ರಾರ್ ಆಗಿ ಡಾ. ಪಿ. ಗಿರಿಧರ್ ಕಿಣಿ ಅಧಿಕಾರ ಸ್ವೀಕಾರ
ಮಣಿಪಾಲ: ಮಾಹೆಯ ಅಡ್ಮಿಶನ್ ವಿಭಾಗದ ನಿರ್ದೇಶಕ ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕ, ಡಾ. ಪಿ. ಗಿರಿಧರ್ ಕಿಣಿ ಇವರು ಮಾಹೆ ಮಣಿಪಾಲದ ನೂತನ ರಿಜಿಸ್ಟ್ರಾರ್(ಕುಲಸಚಿವ) ಆಗಿ ನೇಮಕಗೊಂಡಿದ್ದು ಡಿ. 01 ರಂದು ಅಧಿಕಾರ ಸ್ವೀಕಾರ ಮಾಡಿದ್ದಾರೆ. ಬಿ.ಇ. ಎಲೆಕ್ಟ್ರಿಕಲ್ ಎಂಡ್ ಎಲೆಕ್ಟ್ರಾನಿಕ್ಸ್ (1995 ) ಮತ್ತು ಎಂ.ಟೆಕ್(1998) ಮತ್ತು ಪಿಎಚ್ ಡಿ ಪದವೀಧರರಾದ ಇವರು 1999 ರಲ್ಲಿ ತಾವು ಓದಿದ ಕಾಲೇಜಿನಲ್ಲಿಯೆ ಉಪನ್ಯಾಸಕ ವೃತ್ತಿಯನ್ನು ಆರಂಭಿಸಿ ಅಂದಿನಿಂದ ಮಾಹೆಯಲ್ಲಿ […]