ಡಿ.6: ಇಂಧನ ಸಚಿವರ ಪ್ರವಾಸ ಕಾರ್ಯಕ್ರಮ

ಉಡುಪಿ: ಕರ್ನಾಟಕ ಸರಕಾರದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ವಿ ಸುನಿಲ್ ಕುಮಾರ್ ಅವರು ಡಿಸೆಂಬರ್ 6 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಅಂದು ಬೆಳಗ್ಗೆ 8.30 ಕ್ಕೆ ಕಲ್ಲಂಬಾಡಿ ಪದವು ನಲ್ಲಿ ನೂತನ ವಿದ್ಯುತ್ ಪರಿವರ್ತಕದ ಉದ್ಘಾಟನೆ ಹಾಗೂ ಕಲ್ಲಂಬಾಡಿ-ಊದು ರಸ್ತೆಯ ಗುದ್ದಲಿಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ನಂತರ ಬೆಳ್ತಂಗಡಿಗೆ ತೆರಳಲಿರುವರು. ಮಧ್ಯಾಹ್ನ 2.30 ಕ್ಕೆ ಕಾರ್ಕಳ ವಿಕಾಸ ಜನಸೇವಾ ಕಚೇರಿಯಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಭಿವೃದ್ಧಿ ಕಾಮಗಾರಿಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ, […]

ನಟ ಸುದೀಪ್ ರಿಂದ ಕಟೀಲು ದೇವಳಕ್ಕೆ ಭೇಟಿ

ಕಿನ್ನಿಗೋಳಿ: ಇಲ್ಲಿನ ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕನ್ನಡ ಚಿತ್ರ ನಟ ಕಿಚ್ಚ ಸುದೀಪ್ ಭಾನುವಾರದಂದು ಭೇಟಿ ನೀಡಿ ಪೂಜೆ ಸಲ್ಲಿಸಿದರು. ಪತ್ನಿ ಪ್ರಿಯಾ ಜೊತೆ ಆಗಮಿಸಿದ್ದ ಸುದೀಪ್, ದೇವಳದಲ್ಲಿ ವಿಶೇಷ ಪೂಜೆ ನೆರವೇರಿಸಿ ಪ್ರಾರ್ಥನೆ ಸಲ್ಲಿಸಿದರು. ಕಟೀಲು ಮತ್ತು ಮುಲ್ಕಿಯಲ್ಲಿ ನಡೆಯಲಿರುವ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಸುದೀಪ್ ಜಿಲ್ಲೆಗಾಗಮಿಸಿದ್ದಾರೆ. ಈ ಸಂದರ್ಭದಲ್ಲಿ ಅವರಿಗೆ ದೇವಸ್ಥಾನದ ವತಿಯಿಂದ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು. ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು ಉಪಸಿತರಿದ್ದರು.

ಸುಧೀರ್ಘ ಪ್ರತಿಭಟನೆಗೆ ಮಣಿದ ಇರಾನ್ ಸರ್ಕಾರ: ನೈತಿಕ ಪೊಲೀಸ್ ಗಿರಿ ರದ್ದಿಗೆ ನಿರ್ಧಾರ

ಟೆಹರಾನ್: ದೇಶದ ಕಟ್ಟುನಿಟ್ಟಾದ ಮಹಿಳಾ ವಸ್ತ್ರ ಸಂಹಿತೆಯನ್ನು ಉಲ್ಲಂಘಿಸಿದ ಆರೋಪದ ಮೇಲೆ ಬಂಧನಕ್ಕೊಳಗಾದ ಮಹ್ಸಾ ಅಮಿನಿ ಎಂಬ ಮಹಿಳೆಯ ಸಾವಿನಿಂದ ಉಂಟಾದ ಎರಡು ತಿಂಗಳ ಪ್ರತಿಭಟನೆಯ ನಂತರ ಇರಾನ್ ತನ್ನ ನೈತಿಕತೆಯ ಪೊಲೀಸರನ್ನು ರದ್ದುಗೊಳಿಸಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. ಟೆಹ್ರಾನ್‌ನಲ್ಲಿ ನೈತಿಕತೆಯ ಪೊಲೀಸರು ಬಂಧಿಸಿದ ಮೂರು ದಿನಗಳ ನಂತರ, ಸೆಪ್ಟೆಂಬರ್ 16 ರಂದು ಕುರ್ದಿಷ್ ಮೂಲದ 22 ವರ್ಷದ ಇರಾನಿನ ಮಹಿಳೆ ಮರಣ ಹೊಂದಿದಾಗಿನಿಂದ ಮಹಿಳೆಯರ ನೇತೃತ್ವದ ಪ್ರತಿಭಟನೆಗಳು ಇರಾನ್ ಅನ್ನು ಆವರಿಸಿತ್ತು. ಪ್ರತಿಭಟನಾಕಾರರು ತಮ್ಮ […]

ಕರ್ನಾಟಕ ಅಭಿಯೋಜಕ ಎಚ್.ಕೆ.ಜಗದೀಶ್ ಇವರಿಂದ ಶ್ರೀಕೃಷ್ಣ ಮಠ ಭೇಟಿ

ಉಡುಪಿ: ಕರ್ನಾಟಕ ಅಭಿಯೋಜಕರ ಮತ್ತು ಸರಕಾರಿ ವ್ಯಾಜ್ಯಗಳ ಇಲಾಖೆ ನಿರ್ದೇಶಕ ಎಚ್.ಕೆ.ಜಗದೀಶ್ ಮತ್ತು ಉಡುಪಿಯ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ.ರಾಘವೇಂದ್ರ ಇವರು ಶ್ರೀಕೃಷ್ಣ ಮಠಕ್ಕೆ ಆಗಮಿಸಿ, ದೇವರ ದರ್ಶನ ಪಡೆದುಕೊಂಡರು. ಈ ಸಂದರ್ಭದಲ್ಲಿ ಪರ್ಯಾಯ ಮಠದ ದಿವಾನರಾದ ವರದರಾಜ ಭಟ್ , ಮಟ್ಟು ಲಕ್ಷ್ಮೀನಾರಾಯಣ ರಾವ್ ಉಪಸ್ಥಿತರಿದ್ದರು.

ಬಸ್ ಚಕ್ರದಡಿ ಸಿಲುಕಿ ವ್ಯಕ್ತಿ ಸಾವು

ಕಾರ್ಕಳ: ಭಾನುವಾರ ಸಂಜೆ ವ್ಯಕ್ತಿಯೊಬ್ಬರು ಬಸ್ಸಿಗೆ ಹತ್ತುವಾಗ ನಿಯಂತ್ರಣ ತಪ್ಪಿ ಬಸ್ಸಿನ ಚಕ್ರದಡಿಗೆ ಸಿಲುಕಿ ಮೃತಪಟ್ಟ ಘಟನೆ ಹಿರ್ಗಾನದ ಬಸ್ಸು ನಿಲ್ದಾಣದ ಮುಂಭಾಗದಲ್ಲಿ ನಡೆದಿದೆ. ಮೃತಪಟ್ಟಿರುವ ವ್ಯಕ್ತಿಯನ್ನು ಚಿಕ್ಕಲ್ ಬೆಟ್ಟಿನ ಕೃಷ್ಣ ನಾಯಕ್(71) ಎಂದು ಗುರುತಿಸಲಾಗಿದೆ. ಇವರು ಹಿರ್ಗಾನದಿಂದ ಚಿಕ್ಕಲ್ ಬೆಟ್ಟು ಕ್ರಾಸಿಗೆ ತೆರಳಲು ಬಸ್ಸು ಹತ್ತುವ ಸಂದರ್ಭ ಆಯತಪ್ಪಿ ಬಿದ್ದು ಬಸ್ಸಿನ ಚಕ್ರದಡಿಗೆ ಸಿಲುಕಿದ್ದಾರೆ. ತಕ್ಷಣವೇ ಅವರನ್ನು ಅಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಲಾಯಿತಾದರೂ ದುರಾದೃಷ್ಟವಶಾತ್ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಮೃತರು ಪತ್ನಿ ಹಾಗೂ ಇಬ್ಬರು ಪುತ್ರರು, […]