ಜ. 8 ರಂದು ಕೊಡಗು ಸೈನಿಕ ಶಾಲೆಯ ಪ್ರವೇಶಾತಿ ಪರೀಕ್ಷೆ

ಉಡುಪಿ, ಡಿಸೆಂಬರ್ 5 (ಕವಾ): ಕೊಡಗು ಸೈನಿಕ ಶಾಲೆಯ 6 ಮತ್ತು 9 ನೇ ತರಗತಿಗಳ ಪ್ರವೇಶಾತಿ ಪರೀಕ್ಷೆಯು 2023 ಜನವರಿ 8 ರಂದು ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ www.nta.ac.in , https://aissee.nta.ac.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಸೊಸೈಟಿ ಮತ್ತು ಶಿಕ್ಷಣ ಇಲಾಖೆ ಸಹಭಾಗಿತ್ವದಲ್ಲಿ ಕೆ.ಪಿ.ಎಸ್ ಶಾಲೆ ಅಭಿವೃದ್ಧಿಗೆ ಒಡಂಬಡಿಕೆ

ಉಡುಪಿ: ಸರಕಾರಿ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಕೆ.ಪಿ.ಎಸ್ ಶಾಲೆ ಆಭಿವೃದ್ಧಿ ಕುರಿತಂತೆ ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಸೊಸೈಟಿ ಮತ್ತು ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆಯ ನಡುವೆ ರಾಜ್ಯದಲ್ಲೇ ಮೊದಲ ಬಾರಿಗೆ ಒಡಂಬಡಿಕೆ ನಡೆಯಿತು. ರಜತಾದ್ರಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಶಾಸಕ ರಘುಪತಿ ಭಟ್ ಮತ್ತು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ಅವರ ಸಮ್ಮುಖದಲ್ಲಿ ಒಡಂಬಡಿಕೆ ಪತ್ರದ ಹಸ್ತಾಂತರ ಕಾರ್ಯಕ್ರಮ ಸೋಮವಾರ ನಡೆಯಿತು. ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ […]

ಮೆದುಳು ಜ್ವರ ಲಸಿಕಾ ಅಭಿಯಾನ ಕಾರ್ಯಕ್ರಮ ಉದ್ಘಾಟನೆ

ಉಡುಪಿ: ಜಿಲ್ಲೆಯಲ್ಲಿನ 1 ರಿಂದ 15 ವರ್ಷದೊಳಗಿನ ಮಕ್ಕಳಲ್ಲಿ ಮೆದುಳು ಜ್ವರ ಬಾರದಂತೆ ತಡೆಯಲು ಜೆ.ಇ. ಲಸಿಕೆ ಪಡೆಯುವುದು ಅಗತ್ಯವಿದ್ದು, ಪೋಷಕರು ತಮ್ಮ ಮಕ್ಕಳಿಗೆ ಈ ಲಸಿಕೆಯನ್ನು ಪಡೆಯಲು ಪ್ರೇರೇಪಿಸುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ತಿಳಿಸಿದರು. ಅವರು ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರಾಷ್ಟ್ರೀಯ ಆರೋಗ್ಯ ಅಭಿಯಾನ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ, ನಗರದ ಬೋರ್ಡ್ ಹೈಸ್ಕೂಲ್‌ನಲ್ಲಿ ನಡೆದ, ಮೆದುಳು ಜ್ವರ ಲಸಿಕಾ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ […]

ಜಿಲ್ಲಾ ಮತದಾರರ ಪಟ್ಟಿ ಪರಿಷ್ಕರಣೆ: ಸರ್ವಪಕ್ಷ ಪ್ರತಿನಿಧಿಗಳೊಂದಿಗೆ ಜಿಲ್ಲಾಧಿಕಾರಿ ಸಭೆ

ಉಡುಪಿ: ಸೋಮವಾರದಂದು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಮತದಾರರ ಪಟ್ಟಿ ಪರಿಷ್ಕರಣೆ ಸಭೆಯು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಜಿಲ್ಲೆಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯನ್ನು ಅತ್ಯಂತ ಪಾರದರ್ಶಕವಾಗಿ, ಯಾವುದೇ ಗೊಂದಲಗಳಿಗೆ ಆಸ್ಪದವಿಲ್ಲದಂತೆ ನಡೆಸಲಾಗುತ್ತಿದೆ ಎಂದು ಸರ್ವಪಕ್ಷ ಪ್ರತಿನಿಧಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ತಿಳಿಸಿದರು. ಚುನಾವಣಾ ಆಯೋಗದ ಮಾರ್ಗಸೂಚಿಯ ನಿರ್ದೇಶನದಂತೆ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ನಡೆಸಲಾಗುತ್ತಿದ್ದು, ಮತದಾರರ ಪಟ್ಟಿಯಲ್ಲಿ ಯುವ ಮತದಾರರ ಸೇರ್ಪಡೆಗೆ […]