ಅರ್ಹ ಯುವ ಮತದಾರರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿ: ಮನೋಜ್ ಜೈನ್

ಉಡುಪಿ: ಜಿಲ್ಲೆಯ ಮತದಾರರ ಪಟ್ಟಿಗೆ ಅರ್ಹ ಯುವ ಮತದಾರರ ಸೇರ್ಪಡೆಗೆ ಹೆಚ್ಚಿನ ಒತ್ತು ನೀಡಬೇಕೆಂದು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್ ಸೂಚನೆ ನೀಡಿದರು. ಅವರು ಮಂಗಳವಾರದಂದು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮತದಾರರ ಪಟ್ಟಿಯ ಪರಿಷ್ಕರಣೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆಯು ಭಾರತ ಚುನಾವಣಾ ಆಯೋಗದ ಸೂಚನೆಯನ್ವಯ ಕಳೆದ ನವೆಂಬರ್‌ನಿಂದ ಪ್ರಾರಂಭಿಸಲಾಗಿದ್ದು, ಈಗಾಗಲೇ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಈ ಬಗ್ಗೆ […]

ಜಿ.ಪಂ/ತಾಲೂಕು ನಿರ್ವಹಣಾ ಘಟಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ವಿವಿಧ ಹುದ್ದೆಗಳ ನೇಮಕಾತಿ

ಉಡುಪಿ: ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಯೋಜನೆಯಡಿ ಉಡುಪಿ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಅಭಿಯಾನ ನಿರ್ವಾಹಣಾ ಘಟಕಗಳಲ್ಲಿ ಕಾರ್ಯನಿರ್ವಹಿಸಲು ಹೊರಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 15 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ zpudupi.karnataka.gov.in ಅಥವಾ ಯೋಜನಾ ನಿರ್ದೇಶಕರು, ಜಿಲ್ಲಾ ಪಂಚಾಯತ್, ಉಡುಪಿ ಮೊ.ನಂ: 9480878002 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಜಿಲ್ಲೆಯ ಪ್ರವಾಸಿ ತಾಣಗಳ ಆಕರ್ಷಣೀಯ ವಿನೂತನ ಪ್ರಾತ್ಯಕ್ಷಿಕೆ ಸಲ್ಲಿಸಿ ಬಹುಮಾನ ಗೆಲ್ಲಿ

ಉಡುಪಿ: “ಕರ್ನಾಟಕ ಒಂದು ರಾಜ್ಯ ಹಲವು ಜಗತ್ತುಗಳು” ಎಂಬ ಘೋಷವಾಕ್ಯಕ್ಕೆ ಪೂರಕವಾಗುವಂತೆ ಜಿಲ್ಲೆಯಲ್ಲಿನ ಪ್ರವಾಸಿ ತಾಣಗಳ ಕುರಿತಂತೆ ನೈಸರ್ಗಿಕ, ಧಾರ್ಮಿಕ, ವನ್ಯಜೀವಿ, ಆಹಾರ ಪದ್ಧತಿ ಹಾಗೂ ಸ್ಥಳೀಯ ಕಲೆ ಮತ್ತು ಸಂಸ್ಕೃತಿ ಬಿಂಬಿಸುವ ವಿಭಿನ್ನ ಹಾಗೂ ವೈಶಿಷ್ಟ್ಯ ಪೂರ್ಣ ಸಮಗ್ರ ಮಾಹಿತಿಯನ್ನೊಳಗೊಂಡ ಆಕರ್ಷಣೀಯ ವಿನೂತನ ಪ್ರಾತ್ಯಕ್ಷಿಕೆಯನ್ನು ಸಿದ್ಧಪಡಿಸಿ ಸಹಾಯಕ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ ಕಚೇರಿಗೆ ಅಥವಾ ಇ-ಮೇಲ್ [email protected] ಗೆ ಡಿಸೆಂಬರ್ 15 ರ ಒಳಗೆ ಸಲ್ಲಿಸಬಹುದಾಗಿದೆ. ಆಕರ್ಷಕ ಒಂದು ಪ್ರಾತ್ಯಕ್ಷಿಕೆಯ ವಿಜೇತರಿಗೆ ಬಹುಮಾನ ನೀಡಲಾಗುವುದು. […]

ಜಿಲ್ಲಾ ಕಾಂಗ್ರೆಸ್ ವತಿಯಿಂದ ಡಾ. ಬಿ.ಆರ್. ಅಂಬೇಡ್ಕರ್ ರವರ ಮಹಾ ಪರಿನಿರ್ವಾಣ ದಿನಾಚರಣೆ

ಉಡುಪಿ: ಜಿಲ್ಲಾ ಕಾಂಗ್ರೆಸ್ ಸಮಿತಿ, ಪ ಜಾ ವಿಭಾಗದ ವತಿಯಿಂದ ಡಿ.06ರಂದು ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ರವರ 66ನೇ ಮಹಾ ಪರಿನಿರ್ವಾಣ ಕಾರ್ಯಕ್ರಮವನ್ನು ಬ್ರಹ್ಮಗಿರಿಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕಾಂಗ್ರೆಸ್ ಮುಖಂಡ ನಾಗೇಶ್ ಉದ್ಯಾವರ, ಪ ಜಾ ವಿಭಾಗದ ಜಿಲ್ಲಾದ್ಯಕ್ಷ ಜಯ ಕುಮಾರ್, ಕಾಪುದಕ್ಷಿಣ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ನವೀನ್ ಚಂದ್ರ ಅಡ್ವೆ ಮುಂತಾದವರು ಭಾಗವಹಿಸಿದ್ದರು. ಪ ಜಾ ಘಟಕದ […]

ಕನ್ನಡ ಶಾಲೆಗಾಗಿ ಬೃಹತ್ ಮೊತ್ತದ ದೇಣಿಗೆ ನೀಡಿದ ಉದ್ಯಮಿ ಎಚ್. ಎಸ್. ಶೆಟ್ಟಿಯವರಿಗೆ ಅಭಿನಂದನಾ ಕಾರ್ಯಕ್ರಮ

ಉಡುಪಿ : ನಿಟ್ಟೂರು ಪ್ರೌಢಶಾಲೆಯಲ್ಲಿ ಪಠ್ಯ ಹಾಗೂ ಪಠ್ಯೇತರ ವಿಭಾಗಗಳಲ್ಲಿ ನಡೆಯುತ್ತಿರುವ ಸಮಾಜ ಮುಖಿಯಾದ ಚಟುವಟಿಕೆಗಳನ್ನು ಮೆಚ್ಚಿ ತಮ್ಮ ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಸೊಸೈಟಿ ಮೂಲಕ ಬೃಹತ್ ಮೊತ್ತದ ದೇಣಿಗೆ ನೀಡಿದ ಬೆಂಗಳೂರಿನ ಉದ್ಯಮಿ ಎಚ್. ಎಸ್. ಶೆಟ್ಟಿಯವರಿಗೆ ಗೌರವ ಪೂರ್ವಕ ಕೃತಜ್ಞತೆಯ ದ್ಯೋತಕವಾಗಿ ಶಾಲಾ ಹಳೆ ವಿದ್ಯಾರ್ಥಿಗಳು 10ನೇ ತರಗತಿ ವಿದ್ಯಾರ್ಥಿ ದೀಕ್ಷಿತ್ ಹಾಗೂ ದ್ವಿತೀಯ ಪದವಿ ಓದುತ್ತಿರುವ ಹಳೆ ವಿದ್ಯಾರ್ಥಿನಿ ರಕ್ಷಿತಾಳಿಗೆ ನಿರ್ಮಿಸಿದ ‘ಶ್ರೀನಿವಾಸ’ ಮನೆಯ ಉದ್ಘಾಟನೆ ಡಿಸೆಂಬರ್ 5, ರಂದು ಕರಂಬಳ್ಳಿಯಲ್ಲಿ […]