ಡಿ.9 ರಿಂದ 11ರವರೆಗೆ ಅರೆಹೊಳೆ ಪ್ರತಿಷ್ಠಾನದ ವತಿಯಿಂದ ನಾಟಕೋತ್ಸವ ಆಯೋಜನೆ
ಮಂಗಳೂರು: ಕಳೆದ ಏಳು ವರ್ಷಗಳಿಂದ ರಾಜ್ಯ ಮಟ್ಟದ ಕನ್ನಡ ನಾಟಕೋತ್ಸವವನ್ನು ಆಚರಿಸುತ್ತಿರುವ ಅರೆಹೊಳೆ ಪ್ರತಿಷ್ಠಾನವು ಈ ವರ್ಷ ಎಂಟನೆಯ ನಾಟಕೋತ್ಸವವನ್ನು ಡಿಸೆಂಬರ್ 9 ರಿಂದ 11ರತನಕ ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ಎಲ್ ಸಿ ಆರ್ ಐ ಸಭಾಂಗಣದಲ್ಲಿ ಆಯೋಜಿಸಿದೆ. ನಾಟಕೋತ್ಸವದ ಮೊದಲ ದಿನ ಡಿ.09 ರಂದು ಉಡುಪಿ ಉದ್ಯಾವರದ ಗಲಾಟೆ ತಂಡದ ಕೀರ್ತನ ಉದ್ಯಾವರ ಅವರ ಏಕವ್ಯಕ್ತಿ ನಾಟಕ ಯತ್ರ ನಾರ್ಯಸ್ತು ಪೂಜ್ಯಂತೇ ಪ್ರದರ್ಶನಗೊಳ್ಳಲಿದೆ. ಈ ನಾಟಕದ ಕಥೆ ಸುಧಾ ಅಡುಕಳ ಅವರದ್ದಾಗಿದ್ದು ರಂಗ ರೂಪ […]
ಗುಜರಾತಿನಲ್ಲಿ ಸತತ ಏಳನೇ ಬಾರಿ ಅರಳಿದ ಕಮಲ; ಹಿಮಾಚಲ ಕೈ ಪಾಲು: ಎಮ್.ಸಿ.ಡಿ ಗೆ ತೃಪ್ತಿ ಪಟ್ಟುಕೊಂಡ ಆಪ್
ನವದೆಹಲಿ: ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯ ಫಲಿತಾಂಶಗಳು ಹೊರಬಿದ್ದಿದ್ದು, ಗುಜರಾತಿನಲ್ಲಿ ಸತತ ಏಳನೇ ಬಾರಿಗೆ ಕಮಲ ಅರಳಿಸುವಲ್ಲಿ ಭಾರತೀಯ ಜನತಾ ಪಕ್ಷ ಯಶಸ್ವಿಯಾಗಿದೆ. ಗುಜರಾತ್ ನಲ್ಲಿ ಸತತ ಏಳನೇ ಬಾರಿಗೆ ಅರಳಿದ ಕಮಲ ಬಿಜೆಪಿ 71 ಸೀಟು ಗೆದ್ದಿದ್ದು 87 ರಲ್ಲಿ ಮುನ್ನಡೆ ಸಾಧಿಸಿ 158 ಸೀಟು ಸಿಗುವ ಸಾಧ್ಯತೆಗಳಿದ್ದು ಪೂರ್ಣ ಬಹುಮತದ ಸರಕಾರ ರಚಿಸುವುದು ಬಹುತೇಕ ಖಚಿತವಾಗಿದೆ , ಐ.ಎನ್.ಸಿ(ಕಾಂಗ್ರೆಸ್) 6 ಸೀಟು ಗೆದ್ದಿದ್ದು10 ರಲ್ಲಿ ಮುನ್ನಡೆ ಸಾಧಿಸಿ 16 ಸೀಟು ಗಳಿಸುವ […]
ಆಗುಂಬೆ ಘಾಟಿ ತಿರುವಿನಲ್ಲಿ ಲಾರಿ ಟಯರ್ ಸ್ಫೋಟ: ಸಂಚಾರ ವ್ಯವಸ್ಥೆಯಲ್ಲಿ ಕೆಲ ಕಾಲ ವ್ಯತ್ಯಯ
ಶಿವಮೊಗ್ಗ: ಆಗುಂಬೆ ಘಾಟಿಯಲ್ಲಿ ಲಾರಿ ಟೈರ್ ಸ್ಪೋಟಗೊಂಡು ಕೆಲವು ಹೊತ್ತು ವಾಹನ ಸಂಚಾರ ಸ್ಥಗಿತವಾಗಿತ್ತು. ಘಾಟಿಯ 8ನೇ ತಿರುವಿನಲ್ಲಿ ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ. ಕ್ಯಾಂಟರ್ ಲಾರಿಯ ಹಿಂಬದಿ ಟೈರ್ ಸ್ಪೋಟಗೊಂಡಿದೆ. ತಿರುವಿನಲ್ಲೇ ಲಾರಿ ನಿಂತಿದ್ದರಿಂದ ಇತರೆ ವಾಹನಗಳ ಸಂಚಾರಕ್ಕೆ ಕಷ್ಟವಾಗಿತ್ತು. ಇದರಿಂದ ವಾಹನಗಳು ನಿಧಾನವಾಗಿ ಸಂಚರಿಸುತ್ತಿವೆ. ತಿರುವಿನಲ್ಲಿ ಲಾರಿ ನಿಂತಿದ್ದರಿಂದ ಹಿಂಬದಿಯಲ್ಲಿ ಕಿ.ಮೀ.ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ತೀರ್ಥಹಳ್ಳಿ ಕಡೆಯಲ್ಲೂ ದೊಡ್ಡ ಸಂಖ್ಯೆಯ ವಾಹನಗಳು ನಿಂತಿದ್ದವು. ಪೊಲೀಸರು ಕ್ರೇನ್ ತರಿಸಿ ಲಾರಿಯನ್ನು ಪಕಕ್ಕೆ ಸರಿಸಿದ್ದಾರೆ. ಬಸ್ಸುಗಳು […]
ಗ್ರಾಮೀಣ ಪ್ರದೇಶದ ಸ್ವಚ್ಛತೆಯಲ್ಲಿ ರಾಜ್ಯದಲ್ಲೇ ಅಗ್ರಸ್ಥಾನ ಪಡೆದ ಉಡುಪಿ; ಸ್ವಚ್ಛತಾ ಸೇನಾನಿಗಳ ಪಾತ್ರ ಅನನ್ಯ : ಪ್ರಸನ್ನ ಹೆಚ್
ಉಡುಪಿ: ಗ್ರಾಮೀಣ ಪ್ರದೇಶದ ಸ್ವಚ್ಛತೆಯಲ್ಲಿ ಉಡುಪಿ ಜಿಲ್ಲೆಯು ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದಿದ್ದು, ಈ ಸ್ಥಾನ ಪಡೆಯುವಲ್ಲಿ ಜಿಲ್ಲೆಯ ಗ್ರಾಮೀಣ ಭಾಗದ ಸ್ವಚ್ಛತಾ ಸೇನಾನಿಗಳ ಪಾತ್ರ ಅತ್ಯಂತ ಮಹತ್ವವಾಗಿದ್ದು, ಜಿಲ್ಲೆಯ ಈ ಸಾಧನೆಯನ್ನು ನಿರಂತರವಾಗಿ ಮುಂದುವರೆಸುವಂತೆ ಗ್ರಾಮೀಣ ಸ್ವಚ್ಛತಾ ಕಾರ್ಯಕರ್ತರಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್. ಹೇಳಿದರು. ಅವರು ಬುಧವಾರ ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಇವರ ವತಿಯಿಂದ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಸ್ವಚ್ಛ […]
ಸರಕಾರ ನಾಡದೋಣಿ ಮತ್ತು ಗಿಲ್‌ನೆಟ್ ಮೀನುಗಾರರ ಸಮಸ್ಯೆಗೆ ತಕ್ಷಣ ಸ್ಪಂದಿಸದಿದ್ದಲ್ಲಿ ತೀವ್ರ ಹೋರಾಟ: ರಮೇಶ್ ಕಾಂಚನ್
ಉಡುಪಿ: ನಾಡದೋಣಿ ಮತ್ತು ಗಿಲ್‌ನೆಟ್ ಮೀನುಗಾರರಿಗೆ ಕಳೆದ ಹತ್ತು ತಿಂಗಳಿನಿಂದ ಸೀಮೆಎಣ್ಣೆ ಬಿಡುಗಡೆಗೊಂಡಿಲ್ಲ. ಈಗಾಗಲೇ ನಾಡದೋಣಿ ಸಂಘದವರು ಉಡುಪಿ ಜಿಲ್ಲಾಧಿಕಾರಿ ಕಚೇರಿಯ ಎದುರು ಪ್ರತಿಭಟನೆ ನಡೆಸಿ ತಕ್ಷಣ ಸೀಮೆಎಣ್ಣೆ ಬಿಡುಗಡೆ ಮಾಡಿ ಎಂದು ಒತ್ತಾಯಿಸಿದ ಹೊರತಾಗಿಯೂ ಸರಕಾರ ನಿರ್ಲಕ್ಷ್ಯ ಧೋರಣೆ ಮುಂದುವರಿಸಿರುವುದು ಖಂಡನಾರ್ಹವಾಗಿದೆ. ನಾಡದೋಣಿ ಮತ್ತು ಗಿಲ್‌ನೆಟ್ ಮೀನುಗಾರರ ಸಮಸ್ಯೆಗೆ ತಕ್ಷಣ ಸ್ಪಂದಿಸಿ ಸೀಮೆಎಣ್ಣೆ ಬಿಡುಗಡೆ ಮಾಡುವಂತೆ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಸರಕಾರವನ್ನು ಆಗ್ರಹಿಸಿದ್ದಾರೆ. ಕಾಂಗ್ರೆಸ್ ಸರಕಾರವಿದ್ದ ಸಂದರ್ಭದಲ್ಲಿ ನಾಡದೋಣಿ ಮತ್ತು ಗಿಲ್‌ನೆಟ್ […]