ಗುಜರಾತ್ ನಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದಿರುವುದು ಜನತೆ ನರೇಂದ್ರ ಮೋದಿ ಮೇಲಿಟ್ಟಿರುವ ವಿಶ್ವಾಸಕ್ಕೆ ಸಾಕ್ಷಿ: ಪ್ರಮೋದ್ ಮಧ್ವರಾಜ್

ಉಡುಪಿ: ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪ್ರಚಂಡ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬಂದಿರುವ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಪಕ್ಷದ ಗೆಲುವಿಗೆ ಸಂತೋಷ ವ್ಯಕ್ತಪಡಿಸಿದರು. ಗುಜರಾತ್ ನಲ್ಲಿ ಸತತ 27 ವರ್ಷದಿಂದ ಬಿಜೆಪಿ ಆಡಳಿತವಿದ್ದು, ಮತ್ತೆ ಮುಂದಿನ 5 ವರ್ಷಗಳಿಗೆ ಅಭೂತಪೂರ್ವ ಬೆಂಬಲದೊಂದಿಗೆ ಪಕ್ಷ ಅಧಿಕಾರಕ್ಕೆ ಬಂದಿದ್ದು, ಇದು ಪಧಾನಿ ನರೇಂದ್ರ ಮೋದಿಯವರ ಮೇಲೆ ಜನತೆ ಸಂಪೂರ್ಣ ವಿಶ್ವಾಸ ಇಟ್ಟಿರುವ ಪ್ರತೀಕ. ಪ್ರಜಾಪ್ರಭುತ್ವದ ಇತಿಹಾಸದಲ್ಲಿ 27 ವರ್ಷ ಆಡಳಿತ ನಡೆಸಿ, ಮತ್ತೆ ಮುಂದಿನ ಬಾರಿಗೆ […]
ಭಾಸ್ಕರ್ ಪಡುಬಿದ್ರಿ ಅವರಿಗೆ ಭಗವಾನ್ ಬುದ್ಧ ನ್ಯಾಷನಲ್ ಫೆಲೋಶಿಪ್ ಪ್ರಶಸ್ತಿ

ಉಡುಪಿ: ಭಗವಾನ್ ಬುದ್ಧ ನ್ಯಾಷನಲ್ ಫೆಲೋಶಿಪ್ ಪ್ರಶಸ್ತಿ ಪಡೆಯುತ್ತಿರುವ ಭಾಸ್ಕರ್ ಪಡುಬಿದ್ರಿಯವರಿಗೆ ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ ರಾಜ್ಯಧ್ಯಕ್ಷ ಆರ್.ಧರ್ಮಸೇನ ಇವರು ಗೌರವಿಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಆಡಳಿತ ಸಂಚಾಲಕ ಬಿ.ಎಮ್. ಮುನಿರಾಜುˌ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಷಕ್ಷ ಅಶೋಕ್ ಕುಮಾರ್ ಕೊಡವೂರು, ಪರಿಶಿಷ್ಟ ಜಾತಿ ವಿಭಾಗದ ಉಡುಪಿ ಜಿಲ್ಲಾ ಅಧ್ಷಕ್ಷ ಜಯ ಕುಮಾರ್ˌ ರಾಜ್ಯ ಸಮಿತಿಯ ಪದಾಧಿಕಾರಿಗಳಾದ ದಿನೇಶ್ ˌಜಿಲ್ಲಾ ಸಮಿತಿಯ ಪದಾಧಿಕಾರಿಉಮೇಶ್ ಉಪಸ್ಥಿತರಿದ್ದರು.
ಜ.12 ರ ರಾಜ್ಯ ಮಟ್ಟದ ‘ಯುವ ಸಂಗಮ’ದಲ್ಲಿ ಜನಪ್ರಿಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾಗಿ: ಕುಯಿಲಾಡಿ

ಉಡುಪಿ: ವಿಶ್ವ ಕಂಡ ಶ್ರೇಷ್ಠ ದಾರ್ಶನಿಕ, ರಾಷ್ಟ್ರೀಯ ಏಕತೆ ಮತ್ತು ಸಾಂಸ್ಕೃತಿಕ ಜಾಗೃತಿಯ ಪ್ರತೀಕ, ಯುವ ಜನತೆಯ ಪ್ರೇರಣಾ ಶಕ್ತಿ ಸ್ವಾಮಿ ವಿವೇಕಾನಂದರವರ ಜನ್ಮ ದಿನ ಜನವರಿ12. ಅಂದು ಆಚರಿಸಲ್ಪಡುವ ‘ರಾಷ್ಟ್ರೀಯ ಯುವ ದಿನಾಚರಣೆ’ಯ ಅಂಗವಾಗಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಉಡುಪಿಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ ‘ಯುವ ಸಂಗಮ’ದಲ್ಲಿ ಭಾಗಿಯಾಗಲು ಉತ್ತರ ಪ್ರದೇಶದ ಜನಪ್ರಿಯ ಮುಖ್ಯಮಂತ್ರಿಗಳಾದ ಯೋಗಿ ಆದಿತ್ಯನಾಥ್ ಜೀ ಯವರು ಉಡುಪಿಗೆ ಆಗಮಿಸಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. […]
ಸೈಕ್ಲೋನ್ ಮ್ಯಾಂಡಸ್ ಪರಿಣಾಮ: ಕರ್ನಾಟಕದ ಹಲವೆಡೆ ಮಳೆ ಸಾಧ್ಯತೆ

ಬೆಂಗಳೂರು: ಋತುವಿನ ಮೊದಲ ಚಂಡಮಾರುತವು ಬಂಗಾಳ ಕೊಲ್ಲಿಯಲ್ಲಿ ಅಭಿವೃದ್ಧಿ ಹೊಂದುತ್ತಿದ್ದು, ಪೂರ್ವ ಕರಾವಳಿಯ ತಮಿಳುನಾಡು, ಪುದುಚೇರಿ, ಮತ್ತು ಆಂಧ್ರಪ್ರದೇಶದಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ಸೈಕ್ಲೋನ್ ಪರಿಣಾಮಗಳನ್ನು ಎದುರಿಸಲು ಆಡಳಿತವು ಸರ್ವ ಸನ್ನದ್ದವಾಗಿದೆ. ಮ್ಯಾನ್-ಡೌಸ್ ಎಂದು ಕರೆಯಲಾಗುವ ಈ ಸೈಕ್ಲೋನ್ ಗೆ ಅರೇಬಿಕ್ ಭಾಷೆಯಲ್ಲಿ ‘ನಿಧಿ ಪೆಟ್ಟಿಗೆ’ ಎನ್ನುವ ಅರ್ಥವಿದೆ. ಈ ಸೈಕ್ಲೋನ್ ನ ಪರಿಣಾಮ ಕರ್ನಾಟಕದ ಬೆಂಗಳೂರಿನಲ್ಲಿಯೂ ಕಾಣಿಸಿಕೊಳ್ಳಬಹುದು ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಡಿಸೆಂಬರ್ 9 ರ ಮಧ್ಯರಾತ್ರಿ ವೇಳೆಗೆ ಈ ಸೈಕ್ಲೋನ್ ಗಂಟೆಗೆ […]
ಡಿ. 9 ರಂದು ಗಾಂಧಿ ಆಸ್ಪತ್ರೆಯಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಉಡುಪಿ: ಗಾಂಧಿ ಆಸ್ಪತ್ರೆ ಉಡುಪಿ, ಎಚ್.ಡಿ.ಎಫ್.ಸಿ ಬ್ಯಾಂಕ್, ಸ್ನೇಹ ಟ್ಯುಟೋರಿಯಲ್, ಲಯನ್ಸ್ ಮತ್ತು ಲಿಯೋ ಕ್ಲಬ್, ಉಡುಪಿ ಕೋ-ಆಪರೇಟಿವ್ ಟೌನ್ ಬ್ಯಾಂಕ್, ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ ಹಾಗೂ ರಕ್ತನಿಧಿ ಕಸ್ತೂರ್ಬಾ ಆಸ್ಪತ್ರೆ ಸಹಯೋಗದಲ್ಲಿ ಡಿ. 9 ಶುಕ್ರವಾರದಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ಗಂಟೆವರೆಗೆ ಗಾಂಧಿ ಆಸ್ಪತ್ರೆಯಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದ್ದು ರಕ್ತದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಆಸ್ಪತ್ರೆಯ ಆಡಳಿತ ಮಂಡಳಿ ತಿಳಿಸಿದೆ.