ಮತದಾರರ ಪಟ್ಟಿ ಪರಿಷ್ಕರಣೆ ಅರ್ಜಿಗಳ ಪರಿಶೀಲನೆ ಸಂಪೂರ್ಣ ಪಾರದರ್ಶಕ: ಜಿಲ್ಲಾಧಿಕಾರಿ ಕೂರ್ಮಾರಾವ್ 

ಉಡುಪಿ: ಮತದಾರರ ಪಟ್ಟಿಗೆ ಸೇರ್ಪಡೆ, ತಿದ್ದುಪಡಿ, ವರ್ಗಾವಣೆ, ಕುರಿತಂತೆ ಸಾರ್ವಜನಿಕರಿಂದ ಸ್ವೀಕರಿಸಿರುವ ಅರ್ಜಿಗಳನ್ನು ಎಚ್ಚರಿಕೆಯಿಂದ ಪರಿಶೀಲಿಸಿ, ಆನ್‌ಲೈನ್ ಹೊರತುಪಡಿಸಿ ನೇರವಾಗಿ ಅರ್ಜಿ ನೀಡಿರುವವರಿಗೆ ಅರ್ಜಿ ಪಡೆದ ಬಗ್ಗೆ ಸ್ವೀಕೃತಿ ನೀಡಿ ಪಾರದರ್ಶಕತೆ ಕಾಯ್ದುಕೊಂಡು, ಅರ್ಜಿಗಳನ್ನು ನಿಗದಿತ ಅವಧಿಯೊಳಗೆ ವಿಲೇವಾರಿ ಮಾಡುವಂತೆ ಮತ್ತು ಹೊಸ ಮತದಾರರಿಗೆ ಶೀಘ್ರದಲ್ಲಿ ಎಪಿಕ್ ಕಾರ್ಡ್ ದೊರೆಯಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೂರ್ಮಾ ರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ವೀಡಿಯೋ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, […]

ರಾಜ್ಯಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ ಮಸೂದೆ ಮಂಡನೆ: ವಿರೋಧಪಕ್ಷಗಳಿಂದ ಪ್ರತಿಭಟನೆ

ನವದೆಹಲಿ: ಆಡಳಿತಾರೂಢ ಭಾರತೀಯ ಜನತಾ ಪಕ್ಷದ ಸಂಸದ ಕಿರೋಡಿ ಲಾಲ್ ಮೀನಾ ಶುಕ್ರವಾರ ರಾಜ್ಯಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆಯ ಖಾಸಗಿ ಸದಸ್ಯರ ಮಸೂದೆಯನ್ನು ಮಂಡಿಸಿದರು. ವಿರೋಧ ಪಕ್ಷದ ಸದಸ್ಯರು ಈ ಕ್ರಮವನ್ನು ವಿರೋಧಿಸಿರು ಮತ್ತು ಪ್ರಸ್ತಾವಿತ ಮಸೂದೆಗೆ ಮತದಾನ ನಡೆಸುವಂತೆ ಕೇಳಿಕೊಂಡರು. ವೈಯಕ್ತಿಕ ಕಾನೂನುಗಳನ್ನು ರದ್ದುಪಡಿಸುವ ಮೂಲಕ, ಏಕರೂಪ ನಾಗರಿಕ ಸಂಹಿತೆಯು ಮದುವೆ, ದತ್ತು, ಪಿತ್ರಾರ್ಜಿತ, ಉತ್ತರಾಧಿಕಾರ ಮತ್ತು ವಿಚ್ಛೇದನದವರೆಗಿನ ಎಲ್ಲ ವಿಷಯಗಳ ಮೇಲೆ ಸಾಮಾನ್ಯ ಕಾನೂನುಗಳ ನಿಯಮಗಳೊಂದಿಗೆ ಯಾವುದೇ ಸಮುದಾಯಗಳನ್ನು ಲೆಕ್ಕಿಸದೆ ದೇಶದ ನಾಗರಿಕರನ್ನು ಸಮಾನವಾಗಿ […]

ಡಿ.13 ರಂದು ಜಿಲ್ಲಾವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ

ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಡಿಸೆಂಬರ್ 13 ರಂದು ವಿವಿಧೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ. 220/110/11ಕೆವಿ ಕೇಮಾರ್ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಫೀಡರ್‌ಗಳಾದ ನಿಟ್ಟೆ, ಕಲ್ಯಾ, ಲೆಮಿನಾ, ನಿಟ್ಟೆ ವಾಟರ್ ಸಪ್ಲೈ, 110ಕೆವಿ ಕಾರ್ಕಳ ಉಪಕೇಂದ್ರದಿಂದ ಹೊರಡುವ 11 ಕೆವಿ ಪದವು ಫೀಡರ್ ಹಾಗೂ 110 ಕೆವಿ ಬೆಳ್ಮಣ್ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಫೀಡರ್‌ಗಳಾದ ಮುಂಡ್ಕೂರು, ನಂದಳಿಕೆ, ಬೋಳ ಮತ್ತು ಬೆಳ್ಮಣ್ ಫೀಡರ್ […]

ಡಿಸೆಂಬರ್ 11 ರಂದು ಸಾಧಕ ಶಾಲೆ ಮತ್ತು ಸಾಧಕ ಶಿಕ್ಷಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮ

ಉಡುಪಿ: ಉಡುಪಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಪ್ರೌಢಶಾಲಾ ಮತ್ತು ಪದವಿಪೂರ್ವ ಕಾಲೇಜುಗಳಲ್ಲಿ ಉತ್ತಮ ಗುಣಮಟ್ಟದ ಸಾಧನೆಯನ್ನು ಮಾಡಿರುವ ಶಾಲೆ, ಕಾಲೇಜುಗಳನ್ನು ಗುರುತಿಸಿ, ಗೌರವಿಸುವ ಸಾಧಕ ಶಾಲೆ ಮತ್ತು ಸಾಧಕ ಶಿಕ್ಷಕ ಪ್ರಶಸ್ತಿ ಕಾರ್ಯಕ್ರಮವು ಡಿಸೆಂಬರ್ 11 ರಂದು ಮಧ್ಯಾಹ್ನ 2 ಗಂಟೆಗೆ ಉಡುಪಿಯ ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ನಡೆಯಲಿದ್ದು, ರಾಜ್ಯದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್, ಪರ್ಯಾಯ ಮಠಾಧೀಶರು ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ. ಸಾಧಕ ಶಾಲೆ ಪ್ರಶಸ್ತಿ- ಪದವಿಪೂರ್ವ ಕಾಲೇಜು […]

ಹಾಡುಹಗಲೇ ಮನೆಯೊಳಗೆ ನುಗ್ಗಿ ವೈದ್ಯೆಯನ್ನು ಅಪಹರಿಸಿದ ಯುವಕರ ಗುಂಪು: ತೆಲಂಗಾಣದ ರಂಗಾ ರೆಡ್ಡಿಯಲ್ಲಿ ಬೆಚ್ಚಿಬೀಳಿಸುವ ಘಟನೆ

ರಂಗಾರೆಡ್ಡಿ: ಶುಕ್ರವಾರದಂದು ತೆಲಂಗಾಣದ ರಂಗಾ ರೆಡ್ಡಿ ಜಿಲ್ಲೆಯ ಆದಿಬಟ್ಲಾ ಪ್ರದೇಶದಲ್ಲಿ 24 ವರ್ಷದ ಯುವತಿಯನ್ನು ಆಕೆಯ ಮನೆಯಿಂದ ಬಲವಂತವಾಗಿ ಕರೆದೊಯ್ದ ಪುರುಷರ ಗುಂಪೊಂದು ಆಕೆಯ ಮನೆಯನ್ನು ಧ್ವಂಸಗೊಳಿಸಿ ಆಕೆಯ ತಂದೆಯನ್ನು ಥಳಿಸಿದೆ. ಈ ಭಯಾನಕ ಘಟನೆಯು ಕ್ಯಾಮರಾದಲ್ಲಿ ಸೆರೆಹಿಡಿಯಲ್ಪಟ್ಟಿದೆ ಮತ್ತು ಕೈಯಲ್ಲಿ ಕೋಲುಗಳನ್ನು ಹಿಡಿದಿರುವ ಅನೇಕ ಪುರುಷರ ಗುಂಪೊಂದು ಕಾರನ್ನು ಧ್ವಂಸಗೊಳಿಸುತ್ತಿರುವ, ಯುವತಿಯ ತಂದೆಯನ್ನು ಥಳಿಸುತ್ತಿರುವ ಮತ್ತು ಮನೆಗೆ ನುಗ್ಗುತ್ತಿರುವ ದೃಶ್ಯಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ಸುಮಾರು 100 ಯುವಕರು ಮನೆಗೆ ನುಗ್ಗಿ ತಮ್ಮ ಮಗಳನ್ನು […]