36 ನೇ ವರ್ಷದ ಬಾರಾಡಿ ಬೀಡು “ಸೂರ್ಯ – ಚಂದ್ರ” ಜೋಡುಕರೆ ಕಂಬಳ ಕೂಟದ ಫಲಿತಾoಶ
36ನೇ ವರ್ಷದ ಬಾರಾಡಿ ಬೀಡು “ಸೂರ್ಯ – ಚಂದ್ರ” ಜೋಡುಕರೆ ಕಂಬಳ ಕೂಟದ ಫಲಿತಾoಶ ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ : ಕನೆಹಲಗೆ: 02 ಜೊತೆ ಅಡ್ಡಹಲಗೆ: 04 ಜೊತೆ ಹಗ್ಗ ಹಿರಿಯ: 19 ಜೊತೆ ನೇಗಿಲು ಹಿರಿಯ: 31 ಜೊತೆ ಹಗ್ಗ ಕಿರಿಯ: 24 ಜೊತೆ ನೇಗಿಲು ಕಿರಿಯ: 96 ಜೊತೆ ಒಟ್ಟು ಕೋಣಗಳ ಸಂಖ್ಯೆ: 176 ಜೊತೆ •••••••••••••••••••••••••••••••••••••••••••••• ಕನೆಹಲಗೆ: ಪ್ರಥಮ: ವಾಮಂಜೂರು ತಿರುವೈಲುಗುತ್ತು ನವೀನ್ಚಂದ್ರ ಆಳ್ವ ಹಲಗೆ ಮುಟ್ಟಿದವರು: ಬೈಂದೂರು ಭಾಸ್ಕರ ದೇವಾಡಿಗ […]
ಮಾಹೆಯಲ್ಲಿ ಕನ್ನಡ ಮತ್ತು ಪ್ರಾದೇಶಿಕ ಭಾಷಾ ಅಧ್ಯಯನ ಕೇಂದ್ರ ಪ್ರಾರಂಭ
ಮಣಿಪಾಲ: ಡಿ.11 ರಂದು ಭಾರತೀಯ ಭಾಷಾ ದಿವಸ್ ಅಂಗವಾಗಿ ಮಾಹೆಯು ಕನ್ನಡ ಮತ್ತು ಪ್ರಾದೇಶಿಕ ಭಾಷೆಗಳ ಅಧ್ಯಯನ ಕೇಂದ್ರವನ್ನು ಆರಂಭಿಸಲಿದೆ. ತಮಿಳು ಕವಿ, ಭಾರತೀಯ ಸ್ವಾತಂತ್ರ್ಯ ಹೋರಾಟಗಾರ ಮತ್ತು ಬಹುಭಾಷಾವಾದಿ, ಚಿನ್ನಸ್ವಾಮಿ ಸುಬ್ರಮಣ್ಯ ಭಾರತಿ ಅವರ ಜನ್ಮ ವಾರ್ಷಿಕೋತ್ಸವದ ನಿಮಿತ್ತ ಭಾರತೀಯ ಭಾಷೆಗಳ ಸಂಸ್ಮರಣಾರ್ಥವಾಗಿ ಯುಜಿಸಿಯು ಹೊರಡಿಸಿದ ಘೋಷಣೆಯಿಂದ ಪ್ರೇರಿತವಾಗಿ ಮಾಹೆಯಲ್ಲಿಯೂ ಕನ್ನಡ ಮತ್ತು ಪ್ರಾದೇಶಿಕ ಭಾಷೆಗಳ ಅಧ್ಯಯನ ಕೇಂದ್ರವನ್ನು ಸ್ಥಾಪಿಸುವ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಕರ್ನಾಟಕದ ಭಾಷೆಗಳಾದ ಕನ್ನಡ, ತುಳು, ಕೊಂಕಣಿ, ಬ್ಯಾರಿ ಮತ್ತು ಕೊಡವ ಭಾಷೆಗಳ […]
ಉನ್ನತಿ ಕೆರಿಯರ್ ಅಕಾಡೆಮಿ: ಉಡುಪಿ ಮಾಸಿಕ ಉನ್ನತಿ ಉದ್ಯೋಗ ಮೇಳದಲ್ಲಿ ಉದ್ಯೋಗಾವಕಾಶಗಳು
ಉಡುಪಿ: ಕೌಶಲ್ಯ ಶಿಕ್ಷಣಕ್ಕೆ ಪ್ರಸಿದ್ಧಿ ಪಡೆದಿರುವ ಹಾಗೂ ರಾಜ್ಯ ಕೌಶಲ್ಯಾಭಿವೃದ್ಧಿ ನಿಗಮದ ಪಾಲುದಾರ ಸಂಸ್ಥೆಯಾದ ಉಡುಪಿಯ ಉನ್ನತಿ ಕೆರಿಯರ್ ಅಕಾಡೆಮಿಯು ಈಗಾಗಲೇ 3000ಕ್ಕೂ ಅಧಿಕ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸಿದೆ. ಇದೀಗ ಜಿಲ್ಲೆಯ ಹಾಗೂ ರಾಜ್ಯದ ಇತರ ಯುವಕ-ಯುವತಿಯರಿಗೂ ಇದರ ಲಾಭವನ್ನು ವಿಸ್ತರಿಸಲು ಸಂಸ್ಥೆಯು ಪ್ರತಿ ತಿಂಗಳ ಎರಡನೇ ವಾರದಂದು ಉದ್ಯೋಗ ಮೇಳವನ್ನು ತನ್ನ ಉಡುಪಿಯ ಪಿಪಿಸಿ 1ನೇ ಅಡ್ಡರಸ್ತೆಯಲ್ಲಿರುವ ಕ್ಯಾಂಪಸ್ ನಲ್ಲಿ ಆಯೋಜಿಸಲಿದೆ. ಈ ಮೇಳದಲ್ಲಿ ಸ್ಥಳೀಯ ಹಾಗೂ ಇನ್ನಿತರ ಕಂಪೆನಿಗಳು ಭಾಗವಹಿಸಿ ಅಭ್ಯರ್ಥಿಗಳ ಸಂದರ್ಶವನ್ನು ನಡೆಸಿ […]
ಯೂಟರ್ನ್ ಹೊಡೆದ ದೆಹಲಿ ಪಾಲಿಕೆ ಸದಸ್ಯರು: ಆಪ್ ಗೆ ಕೈಕೊಟ್ಟು ಮತ್ತೆ ಕಾಂಗ್ರೆಸ್ ಗೆ ಮರಳಿದ ಕೌನ್ಸಿಲರ್ ಗಳು
ದೆಹಲಿ: ಆಮ್ ಆದ್ಮಿ ಪಕ್ಷಕ್ಕೆ ಸೇರಿದ ಕೆಲವೇ ಗಂಟೆಗಳ ನಂತರ, ಹೊಸದಾಗಿ ಚುನಾಯಿತರಾದ ಇಬ್ಬರು ಕಾಂಗ್ರೆಸ್ ಕೌನ್ಸಿಲರ್ಗಳು ಮತ್ತು ಪಕ್ಷದ ನಾಯಕ ಅಲಿ ಮೆಹದಿ ತಮ್ಮ ಹಳೆಯ ಪಕ್ಷಕ್ಕೆ ಮರಳಿದ್ದಾರೆ ಮತ್ತು ಕ್ಷಮೆಯಾಚಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಪೋಸ್ಟ್ ಮಾಡಿರುವ ಮೆಹದಿ, ತಾನು ಆಪ್ ಗೆ ಸೇರುವ ಮೂಲಕ ತಪ್ಪು ಮಾಡಿದೆ ಮತ್ತು ತಾನು ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿಯ ನಿಷ್ಠಾವಂತ ಕಾರ್ಯಕರ್ತ ಎಂದು ಪ್ರತಿಪಾದಿಸಿದ್ದಾರೆ. “ನಾನು ದೊಡ್ಡ ತಪ್ಪು ಮಾಡಿದ್ದೇನೆ. ನನ್ನ ತಪ್ಪನ್ನು ನಾನು ಒಪ್ಪಿಕೊಳ್ಳುತ್ತೇನೆ […]
ಬೆಂಗಳೂರಿನಲ್ಲಿ ಬೈಂದೂರು ಹುಡುಗರ ಮೇಲೆ ಮಾರಣಾಂತಿಕ ಹಲ್ಲೆ: ಕಠಿಣ ಕ್ರಮಕ್ಕೆ ಒಕ್ಕೊರಲ ಆಗ್ರಹ
ಬೆಂಗಳೂರು: ಹೊಟ್ಟೆಪಾಡಿಗೆಂದು ಊರು ಬಿಟ್ಟು ಪರವೂರು ಸೇರಿ ನಿಯತ್ತಿನಿಂದ ದುಡಿಯುತ್ತಿದ್ದ ಯುವಕರ ಮೇಲೆ ಸಿಗರೇಟಿನ ಹಣ ಕೇಳಿದರೆನ್ನುವ ಕಾರಣಕ್ಕೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಬಗ್ಗೆ ಆಕ್ರೋಶ ವ್ಯಕ್ತವಾಗಿದ್ದು, ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಒಕ್ಕೊರಲ ಆಗ್ರಹ ಕೇಳಿ ಬರುತ್ತಿದೆ. ಬೆಂಗಳೂರಿನ ಕುಂದಲಹಳ್ಳಿ ಎಚ್.ಎ.ಎಲ್ ಸಮೀಪ ಬೇಕರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕುಂದಾಪುರ ಬೈಂದೂರು ಮೂಲದ ನವೀನ್ ಕುಮಾರ್, ಪ್ರಜ್ವಲ್ ಶೆಟ್ಟಿ, ನಿತಿನ್ ಶೆಟ್ಟಿ ಎಂಬುವರ ಮೇಲೆ ಗುರುವಾರದಂದು ಬೆಂಗಳೂರಿನ ಪುಡಿ ರೌಡಿಗಳು ಮಾರಣಾಂತಿಕ ಹಲ್ಲೆ ನಡೆಸಿರುವ ದೃಶ್ಯಗಳ […]