ಉಡುಪಿ: ವ್ಯಕ್ತಿ ನಾಪತ್ತೆ

ಉಡುಪಿ: ಮಣಿಪಾಲದ ಪ್ರೆಸ್‌ನಲ್ಲಿ ಸೆಕ್ಯೂರಿಟಿ ಕೆಲಸ ಮಾಡಿಕೊಂಡಿದ್ದ ಉಡುಪಿ ತಾಲೂಕು ಬಡಗುಬೆಟ್ಟು ಗ್ರಾಮದ ಕೊಳಂಬೆ ನಿವಾಸಿ ಅರುಣ ಗೌಡ (32) ಎಂಬ ವ್ಯಕ್ತಿಯು ಡಿಸೆಂಬರ್ 7 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 157 ಸೆಂ.ಮೀ ಎತ್ತರ, ಸಾಧಾರಣ ಶರೀರ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಸದ್ಯಕ್ಕೆ ‘ಕಾಂತಾರ- 2’ ಬಗ್ಗೆ ಯಾವುದೇ ಯೋಜನೆಗಳಿಲ್ಲ; ಇದ್ದರೆ ಅಧಿಕೃತ ಘೋಷಣೆ ಮಾಡುತ್ತೇವೆ: ರಿಷಬ್ ಶೆಟ್ಟಿ

ನಟ, ನಿರ್ದೇಶಕ ಮತ್ತು ನಿರ್ಮಾಪಕ ರಿಷಬ್ ಶೆಟ್ಟಿ ಕಾಂತಾರ ಚಿತ್ರದ ಎರಡನೇ ಅವತರಣಿಕೆ ಬರಲಿದೆ ಎನ್ನುವ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಸದ್ಯಕ್ಕೆ ನಮ್ಮಲ್ಲಿ ಅಂತಹ ಯಾವುದೇ ಯೋಜನೆಗಳಿಲ್ಲ. ಕಾಂತಾರ 2 ರ ಅಂತಹ ಯಾವುದೇ ಯೋಜನೆ ಇದ್ದರೆ, ನಾವು ಅಧಿಕೃತ ಘೋಷಣೆ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ. ಇತ್ತೀಚೆಗಷ್ಟೆ ರಿಷಬ್ ಮತ್ತು ಪ್ರಗತಿ ಶೆಟ್ಟಿ ಮಂಗಳೂರಿನ ಭೂತ ಕೋಲವೊಂದರಲ್ಲಿ ದೈವದೆದುರು ನಿಂತಿರುವ ದೃಶ್ಯಗಳನ್ನು ಉಲ್ಲೇಖಿಸಿ ರಿಷಭ್ ಕಾಂತಾರ-2 ಮಾಡಲಿದ್ದಾರೆ ಎನ್ನುವ ಸುದ್ದಿಗಳು ಹರಿದಾಡಿದ್ದವು. ಆದರೆ ರಿಷಬ್ ಇದನ್ನು […]

ಲೈಂಗಿಕ ಹಿಂಸಾಚಾರದ ಪ್ರಕರಣಗಳಲ್ಲಿ ಸಮಗ್ರ ವೈದ್ಯಕೀಯ ಆರೈಕೆಗಾಗಿ ರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣ

ಮಣಿಪಾಲ: ಭಾರತ – ಡಾಕ್ಟರ್ಸ್ ವಿದೌಟ್ ಬಾರ್ಡರ್ಸ್, ಮೆಡೆಸಿನ್ಸ್ ಸಾನ್ಸ್ ಫ್ರಾಂಟಿಯರ್ಸ್, ವೈದ್ಯಕೀಯ ಮತ್ತು ನವೀನ ವಿಧಿವಿಜ್ಞಾನ ಕೇಂದ್ರ, ಕಸ್ತೂರ್ಬಾ ಮೆಡಿಕಲ್ ಕಾಲೇಜ್, ಮಣಿಪಾಲದ ಸಹಯೋಗದೊಂದಿಗೆ ಬೆಂಗಳೂರಿನ ವೈದೇಹಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಬೆಂಬಲದೊಂದಿಗೆ ಲೈಂಗಿಕ ಮತ್ತು ಲಿಂಗ ಆಧಾರಿತ ಹಿಂಸೆ ಕುರಿತು ಎರಡು ದಿನಗಳ ರಾಷ್ಟ್ರೀಯ ಮಟ್ಟದ ವೈದ್ಯಕೀಯ ವಿಚಾರ ಸಂಕಿರಣವನ್ನು ಡಿಸೆಂಬರ್ 10 ಮತ್ತು11 ರಂದು ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನಲ್ಲಿ ಆಯೋಜಿಸಲಾಗಿತ್ತು. ಈ ವಿಚಾರ ಸಂಕಿರಣವು ಭಾರತದಾದ್ಯಂತ ಲೈಂಗಿಕ ಶೋಷಣೆಯಲ್ಲಿ […]

ಡಿ.15 ರಿಂದ 31ರವರೆಗೆ ಶಕ್ತಿ ಮೋಟಾರ್ಸ್ ನಲ್ಲಿ ಸಾಲ ಮತ್ತು ವಿನಿಮಯ ಮೇಳ!

ಉಡುಪಿ: ಇಲ್ಲಿನ ಕರಾವಳಿ ಜಂಕ್ಷನ್ ಬಳಿ ಶ್ರೀ ರಾಮದರ್ಶನ ಕಟ್ಟಡದಲ್ಲಿ ಹೊಸದಾಗಿ ಪ್ರಾರಂಭವಾದ ಶಕ್ತಿ ಮೋಟಾರ್ಸ್ ದ್ವಿಚಕ್ರ ವಾಹನಗಳ ಮಳಿಗೆಯಲ್ಲಿ ಡಿ.15 ರಿಂದ 31ರವರೆಗೆ ಸಾಲ ಮತ್ತು ವಿನಿಮಯ ಮೇಳವನ್ನು ಆಯೋಜಿಸಲಾಗಿದೆ. ವಾಹನಗಳ ಮೇಲೆ ಕಡಿಮೆ ಮುಂಗಡ ಪಾವತಿ: 1999/- ರೂ ಎಲ್ಲಾ ಮಾಡೆಲ್ ಗಳಿಗೆ ವಿನಿಮಯ ಧಮಾಕಾ 3000+ ಜಾಕೆಟ್, ಹೆಲ್ಮೆಟ್ ಮತ್ತು ಎಲ್ಲಾ ಫಿಟ್ಟಿಂಗ್ಸ್ ಗಳೊಂದಿಗೆ ಒಟ್ಟು ಪ್ರಯೋಜನಗಳು: 6000+ ನಗದು ರಿಯಾಯಿತಿ 3000+ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 7996855666, 0820-3500155 ನಂ: 27/3/573/1, […]

ಕರಾವಳಿ ಜಂಕ್ಷನ್ ನಿಂದ ಮಲ್ಪೆವರೆಗಿನ ಚತುಷ್ಪಥ ರಸ್ತೆ ಕಾಮಗಾರಿ ಶೀಘ್ರ ಪ್ರಾರಂಭ ಕುರಿತು ಸಭೆ

ಉಡುಪಿ: ತೀರ್ಥಹಳ್ಳಿ – ಮಲ್ಪೆ ರಾಷ್ಟ್ರೀಯ ಹೆದ್ದಾರಿ 169ಎ ಇದರ ಕರಾವಳಿ ಜಂಕ್ಷನ್‌ನಿಂದ ಮಲ್ಪೆವರೆಗಿನ ಚತುಷ್ಪಥ ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ಸೋಮವಾರದಂದು ಶಾಸಕ ರಘುಪತಿ ಭಟ್ ನೇತೃತ್ವದಲ್ಲಿ ವಿವಿಧ ಇಲಾಖಾಧಿಕಾರಿಗಳ ಸಭೆಯು ನಗರಸಭೆಯ ಸಭಾಭವನದಲ್ಲಿ ನಡೆಯಿತು. ರಸ್ತೆ ಕಾಮಗಾರಿಯ ಭೂಸ್ವಾಧೀನ 3ಡಿ ಪ್ರಕ್ರಿಯೆ ಪೂರ್ಣಗೊಂಡಿದ್ದು, ಶೀಘ್ರ ಕಾಮಗಾರಿ ಆರಂಭಿಸುವ ವಿಚಾರವಾಗಿ ಶಾಸಕರು, ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು, ಅರಣ್ಯ ಇಲಾಖೆ, ಮೆಸ್ಕಾಂ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸಭೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ […]