ತವಾಂಗ್ ನಲ್ಲಿ 300 ಕ್ಕೂ ಹೆಚ್ಚು ಚೀನೀ ಸೈನಿಕರ ಜೊತೆ ಕಾದಾಡಿ ಹಿಮ್ಮೆಟಿಸಿದ ಭಾರತೀಯ ಸೈನಿಕರು

ನವದೆಹಲಿ: ಅರುಣಾಚಲ ಪ್ರದೇಶದ ತವಾಂಗ್ ಸೆಕ್ಟರ್‌ನಲ್ಲಿ ಭಾರತ ಮತ್ತು ಚೀನಾದ ಸೈನಿಕರ ನಡುವಿನ ಘರ್ಷಣೆ ಬಗ್ಗೆ ಮಂಗಳವಾರ ಸಂಸತ್ತಿನಲ್ಲಿ ಚರ್ಚೆಗೆ ಒತ್ತಾಯಿಸಲಾಗಿದ್ದು, ಗಡಿಯಲ್ಲಿನ ಪರಿಸ್ಥಿತಿಯ ಕುರಿತು ಹಲವಾರು ಕಾಂಗ್ರೆಸ್ ಸಂಸದರು ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ನೀಡುವಂತೆ ಒತ್ತಾಯಿಸಿದರು. ಡಿಸೆಂಬರ್ 9 ರಂದು ಅರುಣಾಚಲ ಪ್ರದೇಶದ ತವಾಂಗ್ ಸೆಕ್ಟರ್‌ನ ಯಾಂಗ್ಟ್ಸೆ ಪ್ರದೇಶದ ಸ್ಥಿತಿಯನ್ನು ಏಕಪಕ್ಷೀಯವಾಗಿ ಬದಲಾಯಿಸುವ ಚೀನಾದ ಪಿಎಲ್‌ಎಯ ಪ್ರಯತ್ನಗಳನ್ನು ಭಾರತೀಯ ಸೇನೆ ಧೈರ್ಯದಿಂದ ತಡೆದಿದೆ ಮತ್ತು ಅದನ್ನು ದೃಢವಾಗಿ ಎದುರಿಸಿದೆ ಎಂದು ರಕ್ಷಣಾ ಸಚಿವ ರಾಜನಾಥ್ […]

ಹೆಬ್ರಿ-ಪರ್ಕಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಮರಗಳ ತೆರವು: ಡಿಸೆಂಬರ್ 22 ರಂದು ಸಾರ್ವಜನಿಕ ಅಹವಾಲು ಸಭೆ

ಉಡುಪಿ: ಹೆಬ್ರಿ-ಪರ್ಕಳ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ಸಂಬಂಧಿಸಿದಂತೆ, ಕಾಮಗಾರಿಗೆ ಅಡಚಣೆಯಾಗುವ ಹೆಬ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೆಳಪೇಟೆಯಿಂದ ಕೊಳಗುಡ್ಡೆವರೆಗೆ ಒಟ್ಟು 862 ಮರಗಳನ್ನು ಹಾಗೂ ಶಿವಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಳಗುಡ್ಡೆಯಿಂದ ಮುಳ್ಳುಗುಡ್ಡೆವರೆಗೆ ಒಟ್ಟು 580 ವಿವಿಧ ಜಾತಿಯ ಮರಗಳನ್ನು ತೆರವುಗೊಳಿಸುವ ಹಿನ್ನೆಲೆ, ಡಿಸೆಂಬರ್ 22 ರಂದು ಮಧ್ಯಾಹ್ನ 3 ಗಂಟೆಗೆ ಹೆಬ್ರಿ ವಲಯ ಕಚೇರಿಯ ಸಭಾಂಗಣದಲ್ಲಿ ಸಾರ್ವಜನಿಕ ಅಹವಾಲು ಸಭೆ ನಡೆಯಲಿದೆ. ಈ ಕುರಿತು ಆಕ್ಷೇಪಣೆಗಳಿದ್ದಲ್ಲಿ ಸಾರ್ವಜನಿಕರು ಸಭೆಯಲ್ಲಿ ಹಾಜರಾಗಿ ಅಥವಾ ಸದ್ರಿ ದಿನಾಂಕದ […]

ಮಂಗಳೂರು: ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡ ವ್ಯಕ್ತಿಯ ಪರಿವಾರದಿಂದ ಅಂಗಾಂಗ ದಾನ

ಮಂಗಳೂರು: ಅಪಘಾತದ ನಂತರ ಮೆದುಳು ನಿಷ್ಕ್ರಿಯಗೊಂಡ 37 ವರ್ಷದ ಅಪಘಾತ ಸಂತ್ರಸ್ತರ ಅಂಗಾಂಗಗಳನ್ನು ಆತನ ಪರಿವಾರದವರ ಸಮ್ಮತಿಯ ಮೇರೆಗೆ ಅವಶ್ಯವಿದ್ದವರಿಗೆ ದಾನ ಮಾಡಲಾಗಿದೆ. ಮಂಗಳೂರಿನ ಫಾ. ಮುಲ್ಲರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಸೋಮವಾರದಂದು ಶಸ್ತ್ರಚಿಕಿತ್ಸೆ ನಡೆಸಿ, ಅಂಗಾಗಗಳನ್ನು ಇತರ ಆಸ್ಪತ್ರೆಗಳಿಗೆ ಸಾಗಿಸಲಾಯಿತು. ಮೂಡಿಗೆರೆಯ ಹೊರಟ್ಟಿ ಗ್ರಾಮದ ಧನ್ಯಕುಮಾರ್ ಹೆಚ್ ಎಂ ಎಂಬವರು ಡಿ.8ರಂದು ಸಬ್ಬೇನಹಳ್ಳಿಯಲ್ಲಿ ಬೈಕ್ ಅಪಘಾತಕ್ಕೀಡಾಗಿದ್ದು, ಡಿ.9ರಂದು ಅವರನ್ನು ಆಸ್ಪತ್ರೆಗೆ ಕರೆತರಲಾಗಿತ್ತು. ಆತನ ತಲೆಗೆ ತೀವ್ರ ಗಾಯವಾಗಿತ್ತು. ಧನ್ಯಕುಮಾರ್ ಚಿಕಿತ್ಸೆಗೆ ಸ್ಪಂದಿಸದಿದ್ದಾಗ ವೈದ್ಯರು ಅವರ ಮೆದುಳು […]

ಮೀನುಗಾರರ ಮಕ್ಕಳ ಶಿಷ್ಯವೇತನ: ಐಡಿ ರಚನೆಗೆ ಡಿ. 15 ಕೊನೆ ದಿನ

ಉಡುಪಿ: ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೀನುಗಾರರ ಮಕ್ಕಳ ಹೆಚ್ಚಿನ ಹಾಗೂ ಉನ್ನತ ಶಿಕ್ಷಣ ಪ್ರೋತ್ಸಾಹಿಸಲು ಹೊಸ ಶಿಷ್ಯ ವೇತನ ಯೋಜನೆಯಡಿ 8, 9, 10, ಪಿ.ಯು.ಸಿ., ಸ್ನಾತಕ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ಜಿಲ್ಲೆಯ ಮೀನುಗಾರರ ಸಹಕಾರಿ ಸಂಘದ ಸದಸ್ಯರು ಹಾಗೂ ಮೀನು ಕೃಷಿಕರ ಮಕ್ಕಳು ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರು ಅಥವಾ ಸಂಬಂಧಪಟ್ಟ ಮೀನುಗಾರರ ಸಹಕಾರಿ ಸಂಘಗಳಿಂದ ಮಾಹಿತಿ ಪಡೆದು, ಪ್ರೂಟ್ಸ್ ಐಡಿ ಮಾಡಿಕೊಳ್ಳುವ ಅವಧಿಯನ್ನು ಡಿಸೆಂಬರ್ 15 ರ ವರೆಗೆ […]

ಶಿರಾಡಿ ಘಾಟ್ ಗಿಲ್ಲ ಸುರಂಗ ಮಾರ್ಗ; ಚತುಷ್ಪಥ ರಸ್ತೆ ನಿರ್ಮಾಣಕ್ಕೆ ನಿರ್ಧಾರ: ನಿತಿನ್ ಗಡ್ಕರಿ

ನವದೆಹಲಿ: ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ, ಶಿರಾಡಿ ಘಾಟ್‌ನಲ್ಲಿ ಸುರಂಗಗಳನ್ನು ನಿರ್ಮಿಸುವ ಯೋಜನೆಯನ್ನು ಸರ್ಕಾರ ಕೈಬಿಟ್ಟಿದೆ ಮತ್ತು ಮಂಗಳೂರು-ಬೆಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ-75 ಸಿ ರಸ್ತೆಯಲ್ಲಿ ವಾಹನಗಳ ಸಾಂದ್ರತೆಯನ್ನು ಪರಿಹರಿಸಲು ಚತುಷ್ಪಥ ರಸ್ತೆಯನ್ನು ನಿರ್ಮಿಸಲು ನಿರ್ಧರಿಸಿದೆ ಎಂದು ಹೇಳಿದ್ದಾರೆ. ಶುಕ್ರವಾರದಂದು ಲೋಕಸಭೆಯಲ್ಲಿ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಸುರಂಗ ಮಾರ್ಗದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಸಾರಿಗೆ ಸಚಿವ, ಶಿರಾಡಿ ಘಾಟ್ ವಿಭಾಗದಲ್ಲಿ ಸುರಂಗಗಳ ನಿರ್ಮಾಣವು ಬೃಹತ್ ಹೂಡಿಕೆಗಳನ್ನು ಜೊತೆಗೆ ಕೆಲಸ […]