ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ಬಾಬಾ ರಾಮದೇವ್ ಅವರ ಶಿಷ್ಯ ಸ್ವಾಮಿ ಪರಮಾರ್ಥ ದೇವ್
ಉಡುಪಿ: ಬಾಬಾ ರಾಮದೇವ್ ಅವರ ಶಿಷ್ಯ ಸ್ವಾಮಿ ಪರಮಾರ್ಥ ದೇವ್ ಇವರು ಶ್ರೀಕೃಷ್ಣ ಮಠಕ್ಕೆ ಆಗಮಿಸಿ ದೇವರ ದರ್ಶನ ಪಡೆದು ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದುಕೊಂಡರು. ಈ ಸಂದರ್ಭದಲ್ಲಿ ಕೇಂದ್ರ ಯುವ ಪ್ರಭಾರಿ ಚಂದ್ರ ಮೋಹನ್, ಕೇಂದ್ರೀಯ ಸಹ ಯುವ ಪ್ರಭಾರಿ ಸಚಿನ್, ರಾಜ್ಯ ಪ್ರಭಾರಿ ಭವರ್ಲಾಲ್ ಆರ್ಯ, ರಾಜ್ಯ ಸಹ ಪ್ರಭಾರಿ ಡಾ.ಜ್ಞಾನೇಶ್ವರ್ ರಾಜ್ಯ ಮಹಿಳಾ ಪ್ರಭಾರಿ ಸುವರ್ಣ ಮಾರ್ಲ,ಉಡುಪಿ ಜಿಲ್ಲಾ ಪ್ರಭಾರಿ ರಾಘವೇಂದ್ರ ಭಟ್ ,ಪರ್ಯಾಯ ಸ್ವಾಗತ ಸಮಿತಿಯ […]
ಪೆರ್ಡೂರು: ಟಿಪ್ಪರ್ ಡಿಕ್ಕಿ ಹೊಡೆದು ವೃದ್ಧ ಸ್ಥಳದಲ್ಲೇ ಸಾವು
ಪೆರ್ಡೂರು: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೃದ್ಧರೋರ್ವರಿಗೆ ಟಿಪ್ಪರ್ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಪೆರ್ಡೂರು ಮೇಲ್ಪೇಟೆಯ ಬಿಎಮ್ ಸ್ಕೂಲ್ ಎದುರು ಇಂದು ಬೆಳಿಗ್ಗೆ ನಡೆದಿದೆ. ಮೃತರನ್ನು ಅಲಂಕಾರು ನಿವಾಸಿ 70 ವರ್ಷದ ಮಂಜಯ್ಯ ಶೆಟ್ಟಿ ಎಂದು ಗುರುತಿಸಲಾಗಿದೆ. ಪೆರ್ಡೂರಿನಿಂದ ಹಿರಿಯಡಕ ಕಡೆಗೆ ಹೋಗುತ್ತಿದ್ದ ಟಿಪ್ಪರ್ ಒಂದು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಂಜಯ್ಯ ಶೆಟ್ಟಿಗೆ ಡಿಕ್ಕಿ ಹೊಡೆದಿದ್ದು, ಇದರ ಪರಿಣಾಮ ರಸ್ತೆಗೆ ಬಿದ್ದ ಮಂಜಯ್ಯ ಶೆಟ್ಟಿ ಅವರ ತಲೆ ಮೇಲೆ ಟಿಪ್ಪರ್ ನ ಚಕ್ರ […]
ಮಾಹೆ ಮಣಿಪಾಲ್ ಯೂನಿವರ್ಸಲ್ ಪ್ರೆಸ್ ವತಿಯಿಂದ ಬಹುಭಾಷಾ ಕವಿಗೋಷ್ಠಿ ಆಯೋಜನೆ
ಮಣಿಪಾಲ: ಮಹಾಕವಿ ಸುಬ್ರಹ್ಮಣ್ಯ ಭಾರತಿಯವರ ಜಯಂತಿಯ ಸಂದರ್ಭದಲ್ಲಿ ಆಚರಿಸಲಾಗುತ್ತಿರುವ ‘ಭಾರತೀಯ ಭಾಷಾ ಉತ್ಸವ್’ನ ಅಂಗವಾಗಿ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್‌ನ ಪ್ರಸಾರಾಂಗ ಘಟಕವಾದ ಮಣಿಪಾಲ್ ಯೂನಿವರ್ಸಲ್ ಪ್ರೆಸ್ ಪ್ರ-ದೇಶ ಭಾಷಾ ಕವಿಗೋಷ್ಠಿ ‘ಸುಮಧುರ ಭಾಷಿಣೀಂ’ ಅನ್ನು ಡಿ. 12ರಂದು ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ ಆಯೋಜಿಸಿಸಲಾಗಿತ್ತು. ಈ ಕವಿಗೋಷ್ಠಿಯಲ್ಲಿ ಸುಜಯೀಂದ್ರ ಹಂದೆ ಅವರು ಕುಂದಗನ್ನಡವನ್ನು, ಅನುಬೆಳ್ಳೆ , ವಾಸಂತಿ ಅಂಬಲಪಾಡಿ, ಪೂರ್ಣಿಮಾ ಜನಾರ್ದನ್ ತುಳುವಿನ ವಿವಿಧ ಪ್ರಭೇದಗಳನ್ನು, ಯೂಕೂಬ್ ಖಾದರ್ ಬ್ಯಾರಿಭಾಷೆಯನ್ನು, ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಕೊಂಕಣಿಯನ್ನು […]
ವರದಕ್ಷಿಣೆ ಕಿರುಕುಳ ಪ್ರಕರಣದಲ್ಲಿ ಕಿರುತೆರೆ ನಟಿ ಅಭಿನಯಾಗೆ ಶಿಕ್ಷೆ ವಿಧಿಸಿದ ನ್ಯಾಯಾಲಯ
ಬೆಂಗಳೂರು: ಕನ್ನಡ ಹಿರಿತೆರೆ ಮತ್ತು ಕಿರುತೆರೆಯ ಹಿರಿಯ ನಟಿ ಅಭಿನಯಾ ಅವರಿಗೆ ಕರ್ನಾಟಕ ಉಚ್ಛ ನ್ಯಾಯಾಲಯವು 2 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಸಹೋದರನ ಹೆಂಡತಿಗೆ ವರದಕ್ಷಿಣಿ ಕಿರುಕುಳ ನೀಡಿದ್ದಕ್ಕಾಗಿ ಹಾಗೂ ಕೌಟುಂಬಿಕ ದೌರ್ಜನ್ಯ ನಡೆಸಿದ್ದಕ್ಕಾಗಿ ಈ ಶಿಕ್ಷೆ ವಿಧಿಸಲಾಗಿದೆ. ಅಭಿನಯಾ ಅವರ ತಾಯಿ ಜಯಮ್ಮನಿಗೂ 5 ವರ್ಷ ಜೈಲು ಶಿಕ್ಷೆ ನೀಡಿ, ನ್ಯಾಯಾಲಯದ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ. ಅಭಿನಯಾ ಅವರ ಅಣ್ಣನ ಪತ್ನಿ ಲಕ್ಷ್ಮಿದೇವಿ ವರದಕ್ಷಿಣೆ ಕಿರುಕುಳ ವಿರುದ್ದ ದೂರು ನೀಡಿದ್ದರು. ಬೆಂಗಳೂರಿನ ಚಂದ್ರಾ […]
ಕುಂದಾಪುರ: ಡಿ. 17 ರಂದು ಹಾರ್ದಳ್ಳಿ ಮಂಡಳ್ಳಿಯಲ್ಲಿ ಜಿಲ್ಲಾಧಿಕಾರಿಗಳ ಗ್ರಾಮವಾಸ್ತವ್ಯ
ಕುಂದಾಪುರ: ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಅಂಗವಾಗಿ ಜಿಲ್ಲಾಧಿಕಾರಿಗಳು ಡಿಸೆಂಬರ್ 17 ರಂದು ಬೆಳಗ್ಗೆ 11 ಗಂಟೆಗೆ ಕುಂದಾಪುರ ತಾಲೂಕು ಹಾರ್ದಳ್ಳಿ ಮಂಡಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ (ಪ್ರೌಢಶಾಲಾ ವಿಭಾಗ) ಗ್ರಾಮ ವಾಸ್ತವ್ಯ ಮಾಡಲಿದ್ದು, ಸದ್ರಿ ಗ್ರಾಮಕ್ಕೆ ಒಳಪಡುವ ಗ್ರಾಮಸ್ಥರು ತಮ್ಮ ಅಹವಾಲುಗಳನ್ನು ಮುಂಚಿತವಾಗಿ ಗ್ರಾಮದ ಗ್ರಾಮಕರಣಿಕರ ಕಚೇರಿಗೆ ಸಲ್ಲಿಸುವಂತೆ ಹಾಗೂ ಗ್ರಾಮಸ್ಥರು ಭಾಗವಹಿಸಿ, ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.