ವ್ಯಕ್ತಿ ನಾಪತ್ತೆ
ಉಡುಪಿ: ಉಚ್ಚಿಲದ ನರ್ಸರಿಗೆ ಕೆಲಸಕ್ಕೆಂದು ಬಂದ ಜಾರ್ಖಂಡ್ ಮೂಲದ ನೀರಜ್ ಕುಮಾರ್ ರಾಜಕ್ (37) ಎಂಬ ವ್ಯಕ್ತಿಯು ಡಿಸೆಂಬರ್ 6 ರಂದು ನರ್ಸರಿಯ ರೂಮಿನಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 5 ಇಂಚು ಎತ್ತರ, ಸಾಮಾನ್ಯ ಶರೀರ, ಎಣ್ಣೆಕಪ್ಪು ಮೈಬಣ್ಣ ಹೊಂದಿದ್ದು, ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಪಡುಬಿದ್ರಿ ಪೊಲೀಸ್ ಠಾಣೆಯ ಉಪ ನಿರೀಕ್ಷಕರು ದೂ.ಸಂಖ್ಯೆ: 0820-2555452, ಮೊ.ನಂ: 9480805450, ಕಾಪು ಪೊಲೀಸ್ ವೃತ್ತ ನಿರೀಕ್ಷಕರು ದೂ.ಸಂಖ್ಯೆ: 0820-2552133, […]
ವಿದ್ಯಾರ್ಥಿ ಮಿತ್ರ ಸೇವಾ ಟ್ರಸ್ಟ್ ವತಿಯಿಂದ ವಿದ್ಯಾರ್ಥಿಗಳಿಗಾಗಿ ಕಾರ್ಯಾಗಾರ
ಕೋಟ: ವಿದ್ಯಾರ್ಥಿ ಮಿತ್ರ ಸೇವಾ ಟ್ರಸ್ಟ್ (ರಿ) ಅಚ್ಲ್ಯಾಡಿ ಇದರ ಆಶ್ರಯದಲ್ಲಿ ಲಯನ್ಸ್ ಕ್ಲಬ್ ಬನ್ನಾಡಿ ವಡ್ದರ್ಸೆ ಇದರ ಪ್ರಾಯೋಜಕತ್ವದಲ್ಲಿ ವಿವೇಕಾನಂದ ಪ್ರೌಢಶಾಲೆ, ಕೋಟ ಇಲ್ಲಿಯ ವಿದ್ಯಾರ್ಥಿಗಳಿಗೆ ಪರೀಕ್ಷಾ ಆತಂಕ ಮತ್ತು ಪರಿಹಾರೋಪಾಯಗಳು ಕುರಿತು ಆಪ್ತ ಸಮಾಲೋಚನೆ ಮತ್ತು ಕಾರ್ಯಗಾರವನ್ನು ಸೋಮವಾರ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ಬನ್ನಾಡಿ ವಡ್ದರ್ಸೆಯ ಕಾರ್ಯದರ್ಶಿ ಅಜಿತ್ ಶೆಟ್ಟಿ ಕೊತ್ತಾಡಿ, ಸಂಪನ್ಮೂಲ ವ್ಯಕ್ತಿಗಳಾದ ಗಿರೀಶ್ ಎಂ ಎನ್ ಉಪಸ್ಥಿತರಿದ್ದರು. ವಿವೇಕಾನಂದ ಜೂನಿಯರ್ ಕಾಲೇಜಿನ ಪ್ರಾಂಶುಪಾಲ ಜಗದೀಶ್ ನಾವಡ ಸ್ವಾಗತಿಸಿ, ಪ್ರೌಢಶಾಲೆಯ ಮುಖ್ಯೋಪಾಧ್ಯಾಯ […]
ತುರ್ತು ಸೇವೆಗಾಗಿ ಕರಾವಳಿಗೆ ಬೇಕು ಸುಸಜ್ಜಿತ ಸೀ ಆಂಬ್ಯುಲೆನ್ಸ್: ಮೀನುಗಾರರ ಬೇಡಿಕೆಗಿಲ್ಲ ಸೂಕ್ತ ಸ್ಪಂದನೆ
ಮಲ್ಪೆ : ಸಮುದ್ರ ಮಧ್ಯೆ ಅವಘಡಗಳು ಸಂಭವಿಸಿದಾಗ ತುರ್ತು ಸೇವೆಗಾಗಿ ಕರಾವಳಿ ಕಾವಲು ಪಡೆಯಲ್ಲಿ ಸೀ ಆ್ಯಂಬುಲೆನ್ಸ್ ಇಲ್ಲ. ಈ ಬಗ್ಗೆ ಮೀನುಗಾರರು ಹಲವು ವರ್ಷದಿಂದ ಬೇಡಿಕೆ ಸಲ್ಲಿಸಿದ್ದರೂ ಸರಕಾರದಿಂದ ಯಾವುದೇ ಮನ್ನಣೆ ದೊರಕಿಲ್ಲ. ರಾಜ್ಯದ 320 ಕಿ.ಮೀ. ಕರಾವಳಿಯ ಭದ್ರತೆ ಮತ್ತು ಕಾರ್ಯಾಚರಣೆ ಜತೆಗೆ ಸಮುದ್ರದ ಮಧ್ಯೆ ಸಂಕಷ್ಟಕ್ಕೆ ಸಿಲುಕಿರುವ ಮೀನುಗಾರರನ್ನು ರಕ್ಷಿಸುವ ಕೆಲಸವನ್ನು ಕರಾವಳಿ ಕಾವಲು ಪಡೆಗೆ ವಹಿಸಲಾಗಿದೆ. ಮಲ್ಪೆಯಲ್ಲಿ ಇದರ ಕೇಂದ್ರ ಕಚೇರಿ ಇದ್ದು, ಮಲ್ಪೆ ವ್ಯಾಪ್ತಿಯಲ್ಲಿ ಕಳೆದ 10 ವರ್ಷಗಳಿಂದ 85ಕ್ಕೂ […]
ಡಿ18 ರಂದು ಉಡುಪಿ ಕಥೋಲಿಕ್ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ರಜತ ಸಂಭ್ರಮ ಸಮಾರಂಭ
ಉಡುಪಿ: ಉಡುಪಿ ಕಥೋಲಿಕ್ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ಇದರ ರಜತ ಸಂಭ್ರಮ ಸಮಾರಂಭ ವು ಡಿ18 ರವಿವಾರದಂದು ಪೂರ್ವಾಹ್ನ 10:30ಕ್ಕೆ “ಆವೆ ಮರಿಯಾ” ಸಭಾಂಗಣ, ಶೋಕ ಮಾತಾ ಇಗರ್ಜಿ ವಠಾರದಲ್ಲಿ ನಡೆಯಲಿದೆ. ಅಲೋಶಿಯಸ್ ಡಿ’ ಅಲ್ಮೇಡಾ ಅಧ್ಯಕ್ಷರು, ಉಡುಪಿ ಕಥೋಲಿಕ್ ಕ್ರೆ.ಕೋ.ಸೊ.ನಿ. ಉಡುಪಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದು, ಶಾಸಕ ಕೆ. ರಘುಪತಿ ಭಟ್ ಉದ್ಘಾಟಿಸಲಿದ್ದಾರೆ. ಉಡುಪಿ ಕೆಥೋಲಿಕ್ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷ ಪರಮಪೂಜ್ಯ ಡಾ| ಜೆರಾಲ್ಡ್ ಐಸಾಕ್ ಲೋಬೋ ಆಶೀರ್ವಚನ ಮಾಡಲಿದ್ದಾರೆ. ಫಾ| ವಲೇರಿಯನ್ ಮೆಂಡೋನ್ಸಾ ರೆಕ್ಟರ್, […]
ಕುಂದಾಪುರ: ಮಂಗಳೂರು ವಿವಿಯಿಂದ ಅನುಭವಿಸುತ್ತಿರುವ ಸಮಸ್ಯೆ ವಿರುದ್ದ ವಿದ್ಯಾರ್ಥಿಗಳಿಂದ ಪ್ರತಿಭಟನೆ
ಕುಂದಾಪುರ: ಮಂಗಳೂರು ವಿಶ್ವವಿದ್ಯಾನಿಲಯದಿಂದ ವಿದ್ಯಾರ್ಥಿಗಳು ಅನುಭವಿಸುತ್ತಿರುವ ಶೈಕ್ಷಣಿಕ ಸಮಸ್ಯೆಯ ಬಗ್ಗೆ ಡಿ.15 ರಂದು ಎಬಿವಿಪಿ ನೇತೃತ್ವದಲ್ಲಿ ಸಾವಿರಾರು ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸಿದರು. ಕುಂದಾಪುರದ ಶಾಸ್ತ್ರಿ ವೃತ್ತದಿಂದ ಮಿನಿವಿಧಾನಸೌಧದ ತನಕ ಪ್ರತಿಭಟನಾ ಮೆರವಣಿಗೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕು ಸಂಪರ್ಕ ಪ್ರಮುಖ್ ರಾಹುಲ್ ಶೆಟ್ಟಿ , ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಅಂಕಪಟ್ಟಿ ನೀಡದೆ ಸತಾಯಿಸುತ್ತಿರುವುದು, ಅಂಕಪಟ್ಟಿ ಬಾರದ ಹಿನ್ನೆಲೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಹಾಕಲು ಸಮಸ್ಯೆಯಾಗುತ್ತಿದೆ. ಮೌಲ್ಯಮಾಪನವನ್ನು ಸೂಕ್ತ ಸಮಯದಲ್ಲಿ ನಡೆಸದೇ […]