ವಾರಾಹಿ ಏತ ನೀರಾವರಿ ಯೋಜನೆಗಾಗಿ ಮರಗಳ ತೆರವು: ಸಾರ್ವಜನಿಕ ಅಹವಾಲು ಸಭೆ
ಉಡುಪಿ: ವಾರಾಹಿ ಏತ ನೀರಾವರಿ ಯೋಜನಾ ಕಾಮಗಾರಿಗೆ ಸಂಬಂಧಿಸಿದಂತೆ ಕುಂದಾಪುರ ತಾಲೂಕು ಹಾಲಾಡಿ ಗ್ರಾಮದ ಸರ್ವೇ ನಂ. 139 ರಲ್ಲಿ ಕಾಲುವೆ ನಿರ್ಮಾಣಕ್ಕೆ ಅಡಚಣೆಯಾಗುವ ಒಟ್ಟು 316 ಮರಗಳನ್ನು ತೆರವುಗೊಳಿಸುವ ಹಿನ್ನೆಲೆ, ಡಿಸೆಂಬರ್ 23 ರಂದು ಮಧ್ಯಾಹ್ನ 3 ಗಂಟೆಗೆ ಶಂಕರನಾರಾಯಣ ವಲಯ ಕಚೇರಿಯ ಸಭಾಂಗಣದಲ್ಲಿ ಸಾರ್ವಜನಿಕ ಅಹವಾಲು ಸಭೆ ನಡೆಯಲಿದೆ. ಈ ಕುರಿತು ಆಕ್ಷೇಪಣೆಗಳಿದ್ದಲ್ಲಿ ಸಾರ್ವಜನಿಕರು ಸಭೆಯಲ್ಲಿ ಹಾಜರಾಗಿ ಅಥವಾ ಸದ್ರಿ ದಿನಾಂಕದ ಒಳಗೆ ವೃಕ್ಷ ಅಧಿಕಾರಿ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ, ಕುಂದಾಪುರ ವಿಭಾಗ […]
ಚುನಾವಣೆ ಗೆಲ್ಲಲು ಕಾಂಗ್ರೆಸ್ ಕಸರತ್ತು: ಬದಲಾಯಿತು ಜಿಲ್ಲಾ ಕಚೇರಿಯ ವಾಸ್ತು?
ಮಂಗಳೂರು: ಇಲ್ಲಿನ ಮಲ್ಲಿಕಟ್ಟೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಳೆದ ಮೂರು ದಿನಗಳಿಂದ ಬಿರುಸಿನ ಕಾಮಗಾರಿ ನಡೆಯುತ್ತಿದ್ದು, ವಾಸ್ತುಶಾಸ್ತ್ರದಲ್ಲಿ ನಂಬಿಕೆ ಇಟ್ಟಿರುವ ಪಕ್ಷದ ಮುಖಂಡರೊಬ್ಬರು ಅಧ್ಯಕ್ಷರ ಅನುಮತಿ ಮೇರೆಗೆ ಈ ನವೀಕರಣ ಕಾಮಗಾರಿ ನಡೆಸಿದ್ದಾರೆ ಎನ್ನಲಾಗಿದೆ. ಜಿಲ್ಲಾ ಕಾಂಗ್ರೆಸ್ ಭವನದ ಪ್ರವೇಶ ದ್ವಾರದ ಮೆಟ್ಟಿಲುಗಳ ನವೀಕರಣ ಸೇರಿದಂತೆ ಇತರ ಕಾಮಗಾರಿಗಳನ್ನು ನಡೆಸಲಾಗುತ್ತಿದ್ದು, ವಾಸ್ತುದೋಷ ನಿವಾರಣೆಗಾಗಿ ಈ ಕೆಲಸ ಮಾಡಲಾಗಿದೆ ಎನ್ನುವ ಚರ್ಚೆ ನಡೆಯುತ್ತಿದೆ. ಇದನ್ನು ತಳ್ಳಿ ಹಾಕಿರುವ ಕಾಂಗ್ರೆಸ್, ನೀರಿನ ಟ್ಯಾಂಕಿಯ ಮತ್ತು ಮೆಟ್ಟಿಲಿನ ದುರಸ್ತಿ ಮಾಡಲಾಗಿದೆ ಎಂದಿದ್ದಾರೆ. […]
ಡಿ.19 ರಿಂದ ಡಿ. 27 ರವರೆಗೆ ಲೋಕಾಯುಕ್ತ ಕಾಯ್ದೆಯಡಿ ದೂರು ಸಲ್ಲಿಕೆಗೆ ಅವಕಾಶ
ಉಡುಪಿ: ಜಿಲ್ಲಾ ಲೋಕಾಯುಕ್ತ ವಿಭಾಗದ ಪೊಲೀಸ್ ಉಪಾಧೀಕ್ಷಕರು ಡಿಸೆಂಬರ್ 19 ರಂದು ಬೈಂದೂರು ಪ್ರವಾಸಿ ಮಂದಿರ, ಡಿ. 20 ರಂದು ಬ್ರಹ್ಮಾವರದ ಚಾಂತಾರು ಗ್ರಾಮ ಪಂಚಾಯತ್ ಸಭಾಂಗಣ, ಡಿ. 21 ರಂದು ಹೆಬ್ರಿ ತಾಲೂಕು ಕಚೇರಿ, ಡಿ. 22 ರಂದು ಕಾರ್ಕಳ ಪ್ರವಾಸಿ ಮಂದಿರ, ಡಿ. 26 ರಂದು ಕುಂದಾಪುರ ಪ್ರವಾಸಿ ಮಂದಿರ ಹಾಗೂ ಡಿ. 27 ರಂದು ಕಾಪು ಪುರಸಭೆ ಕಚೇರಿ ಆವರಣದಲ್ಲಿ ಬೆಳಗ್ಗೆ 11 ರಿಂದ ಮಧ್ಯಾಹ್ನ 1 ರ ವರೆಗೆ ಲೋಕಾಯುಕ್ತ ಕಾಯ್ದೆಯಡಿ […]
ಮಂಗಳೂರು: ಫ್ರೆಶರ್‌ಗಳಿಗಾಗಿ ಡಿ.16 ರಂದು ಇನ್ಫೋಸಿಸ್ ನಲ್ಲಿ ಸಂದರ್ಶನ
ಮಂಗಳೂರು:ಬಿಎ,ಬಿಕಾಂ, ಎಂಕಾಂ, ಬಿಬಿಎ ಫ್ರೆಶರ್‌ಗಳಿಗೆ ಇನ್ಫೋಸಿಸ್‌ನಲ್ಲಿ ಸಂದರ್ಶನವನ್ನು ಡಿ.16 ರಂದು ಇನ್ಫೋಸಿಸ್ ಮಂಗಳೂರು ಮುಡಿಪು ಕಚೇರಿಯಲ್ಲಿ ನಿಗದಿಪಡಿಸಲಾಗಿದೆ. ನಿಮ್ಮ ರೆಸ್ಯೂಮ್ ಅನ್ನು [email protected] ಗೆ ಕಳುಹಿಸಿ.
ನೇತ್ರದೋಷವುಳ್ಳ ವಿದ್ಯಾರ್ಥಿಗಳಿಂದ ಲ್ಯಾಪ್‌ಟಾಪ್- ಬ್ರೈಲ್ ಕಿಟ್ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ಉಡುಪಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಮತ್ತು ಉನ್ನತ ವ್ಯಾಸಂಗ ಮಾಡುತ್ತಿರುವ ಶೇ.40 ಮತ್ತು ಅದಕ್ಕಿಂತ ಹೆಚ್ಚಿನ ನೇತ್ರದೋಷವುಳ್ಳ ವಿದ್ಯಾರ್ಥಿಗಳಿಂದ ಉಚಿತ ಲ್ಯಾಪ್‌ಟಾಪ್ ಹಾಗೂ ಬ್ರೈಲ್ ಕಿಟ್‌ಗಳ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 30 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ […]