ಕ್ರೀಡಾ ವಸತಿ ಶಾಲೆ ಹಾಗೂ ನಿಲಯ ಪ್ರವೇಶಾತಿಗಾಗಿ ಕ್ರೀಡಾಪಟುಗಳ ಆಯ್ಕೆ

ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ 2023-24 ನೇ ಶೈಕ್ಷಣಿಕ ಸಾಲಿನಲ್ಲಿ ಕ್ರೀಡಾ ವಸತಿ ಶಾಲೆ ಹಾಗೂ ನಿಲಯಗಳ ಪ್ರವೇಶಾತಿಗೆ 7 ನೇ ತರಗತಿ ವ್ಯಾಸಾಂಗ ಮಾಡುತ್ತಿರುವ ಹಾಗೂ ಜೂನ್ 1 ರಿಂದ 8 ನೇ ತರಗತಿ ಪ್ರವೇಶಕ್ಕೆ ಅರ್ಹತೆ ಹೊಂದುವ 14 ವರ್ಷದೊಳಗಿನ ಬಾಲಕ ಹಾಗೂ ಬಾಲಕಿಯರ ಆಯ್ಕೆ ಪ್ರಕ್ರಿಯೆಯು ಈ ಕೆಳಕಂಡ ಸ್ಥಳಗಳಲ್ಲಿ ನಡೆಯಲಿದೆ. ಡಿಸೆಂಬರ್ 21 ರಂದು ಕುಂದಾಪುರ ಗಾಂಧಿ ಮೈದಾನ, ಡಿ. 22 ರಂದು ಬೈಂದೂರು ಸರಕಾರಿ ಜೂನಿಯರ್ […]

ಪದವಿ, ಸ್ನಾತಕೋತ್ತರ ಪರೀಕ್ಷೆಗಳನ್ನು ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಬರೆಯಲು ಅನುಮತಿ: ಉನ್ನತ ಶಿಕ್ಷಣ ಇಲಾಖೆ

ಬೆಂಗಳೂರು: ಕರ್ನಾಟಕ ಉನ್ನತ ಶಿಕ್ಷಣ ಮಂಡಳಿಯು ಪದವಿ ಮತ್ತು ಸ್ನಾತಕೋತ್ತರ ಕೋರ್ಸ್‌ಗಳ ವಿದ್ಯಾರ್ಥಿಗಳು ತಮ್ಮ ಪರೀಕ್ಷೆಗಳನ್ನು ಕನ್ನಡ ಮತ್ತು ಇಂಗ್ಲಿಷ್ ಎರಡೂ ಭಾಷೆಯಲ್ಲಿ ಬರೆಯಲು ಅನುಮತಿ ನೀಡಿದೆ. ಡಿಸೆಂಬರ್ 14 ರಂದು ನಡೆದ ಕೌನ್ಸಿಲ್ನ 23 ನೇ ಸಾಮಾನ್ಯ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಸಭೆಯ ಅಧ್ಯಕ್ಷತೆಯನ್ನು ರಾಜ್ಯದ ಉನ್ನತ ಶಿಕ್ಷಣ ಸಚಿವ ಸಿಎನ್ ಅಶ್ವತ್ಥನಾರಾಯಣ್ ವಹಿಸಿದ್ದರು. ಇಲ್ಲಿಯವರೆಗೆ ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳಿಗೆ ಕನ್ನಡ ಅಥವಾ ಇಂಗ್ಲಿಷ್‌ ಯಾವುದಾದರೂ ಒಂದು ಭಾಷೆಯಲ್ಲಿ ಉತ್ತರಗಳನ್ನು ಬರೆಯಬಹುದಿತ್ತು.ಆದಾಗ್ಯೂ, ಹೊಸ ನಿರ್ಧಾರವು ವಿದ್ಯಾರ್ಥಿಗಳು […]

ಅಗ್ನಿ V ಕ್ಷಿಪಣಿ ಯಶಸ್ವಿ ಪರೀಕ್ಷೆ: ಉತ್ತರ ಚೀನಾ ವ್ಯಾಪ್ತಿವರೆಗೂ ನಿಖರ ಗುರಿ ಸಾಧಿಸುವ ಸಾಮರ್ಥ್ಯ ಸಾಬೀತು

ನವದೆಹಲಿ: ಭಾರತವು ಗುರುವಾರ ಅತ್ಯಂತ ಹೆಚ್ಚಿನ ನಿಖರತೆಯೊಂದಿಗೆ 5,000 ಕಿಲೋಮೀಟರ್ ವ್ಯಾಪ್ತಿಯ ಗುರಿಗಳನ್ನು ಹೊಡೆಯುವ ಸಾಮರ್ಥ್ಯವನ್ನು ಹೊಂದಿರುವ ಪರಮಾಣು ಸಾಮರ್ಥ್ಯದ ಅಗ್ನಿ V ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷಿಸಿದೆ. ಭಾರತವು ಅಗ್ನಿ V ಪರಮಾಣು ಸಾಮರ್ಥ್ಯದ ಬ್ಯಾಲಿಸ್ಟಿಕ್ ಕ್ಷಿಪಣಿಯ ರಾತ್ರಿ ಪ್ರಯೋಗಗಳನ್ನು ಯಶಸ್ವಿಯಾಗಿ ನಡೆಸಿದೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ. ಡಿ. 9 ರಂದು ಅರುಣಾಚಲ ಪ್ರದೇಶದ ತವಾಂಗ್ ಜಿಲ್ಲೆಯಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವೆ ಘರ್ಷಣೆ ನಡೆದಿದ್ದು, ಇದೀಗ ಅಗ್ನಿ V ಕ್ಷಿಪಣಿಯ ಯಶಸ್ವಿ ಪರೀಕ್ಷೆಯು […]

ಕಳತ್ತೂರು: ಅಪರಾಧ ಮಾಸ ತಡೆ ಮಾಸಚರಣೆ ಕಾರ್ಯಕ್ರಮ

ಕಳತ್ತೂರು: ಕಳತ್ತೂರು ಚಂದ್ರನಗರದ ಬಟರ್ ಫ್ಲೈ ಗೆಸ್ಟ್ ಹೌಸ್ ಸಭಾಂಗಣದಲ್ಲಿ ಶಿರ್ವ ಪೊಲೀಸ್ ಠಾಣಾ ವತಿಯಿಂದ ಗುರುವಾರದಂದು ನಡೆದ ಅಪರಾಧ ಮಾಸ ತಡೆ ಮಾಸಚರಣೆ ಸಭೆ ನಡೆಯಿತು. ಸಭೆಯಲ್ಲಿ ಭಾಗವಹಿಸಿದ್ದ ಶಿರ್ವ ಠಾಣಾಧಿಕಾರಿ ರಾಘವೇಂದ್ರ ಮಾತನಾಡಿ, ಹೆತ್ತವರು ತಮ್ಮ ಅಪ್ರಾಪ್ತ ಮಕ್ಕಳಿಗೆ ದ್ವಿಚಕ್ರ ವಾಹನ ಹಾಗೂ ಇತರ ವಾಹನಗಳನ್ನು ನೀಡದೆ ವಾಹನ ಚಾಲನೆ ಪರವಾನಿಗೆ ಪಡೆದ ನಂತರವಷ್ಟೆ ವಾಹನವನ್ನು ನೀಡಿ, ಹೆತ್ತವರು ಜಾಗ್ರತೆ ವಹಿಸಿ ಮಕ್ಕಳನ್ನು ಅಪಾಯದಿಂದ ರಕ್ಷಿಸಿಕೊಳ್ಳಬೇಕು. ಮಾದಕ ದ್ರವ್ಯಗಳ ಕುರಿತು ಎಚ್ಚರಿಕೆಯಿಂದಿರಬೇಕು. ಎಲ್ಲಾ ವಾಹನ […]