ಮಣಿಪಾಲ: ದ ರಾಯೋ ಮಾಬೆನ್ ಡಿಸೈನರ್ ಸ್ಟುಡಿಯೋ ಉದ್ಘಾಟನೆ

ಮಣಿಪಾಲ: ಉಡುಪಿ-ಮಣಿಪಾಲದ ಜನರಿಗಾಗಿ ಲಕ್ಷ್ಮೀಂದ್ರನಗರದ ಪ್ರೀಮಿಯರ್ ಅಪ್ ಟೌನ್ ನಲ್ಲಿ ದ ರಾಯೋ ಮಾಬೆನ್ ಡಿಸೈನರ್ ಸ್ಟುಡಿಯೋ ಇದರ ಉದ್ಘಾಟನೆಯು ಡಿ.18 ಭಾನುವಾರದಂದು ನಡೆಯಿತು. ಸ್ಟುಡಿಯೋವನ್ನು ಉದ್ಘಾಟಿಸಿ ಮಾತನಾಡಿದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ನಮ್ಮ ಊರಿನ ಹುಡುಗಿಯೊಬ್ಬಳು ಇಷ್ಟು ಉತ್ತಮ ಸಾಧನೆ ಮಾಡಿರುವುದನ್ನು ನೋಡಿದಾಗ ನನಗೆ ಹೆಮ್ಮೆ ಎನಿಸಿತು. ಆಕೆ ತಾನೇ ಖುದ್ದು ವಿನ್ಯಾಸ ಮಾಡಿರುವ ವಸ್ತ್ರಗಳನ್ನು ನೋಡಲು ಸಂತೋಷವಾಯಿತು. ಆಕೆಯ ಪ್ರತಿಭೆಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಉಡುಪಿಯ ಜನತೆ ಗುಣಮಟ್ಟದ ವಸ್ತುಗಳನ್ನು ಖರೀದಿಸುವುದಕ್ಕೆ ಹೆಸರುವಾಸಿಯಾಗಿದ್ದಾರೆ. ರಿಯಾ […]

ಡಿ. 20 ರಂದು ಜಿಲ್ಲಾವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ

ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಡಿಸೆಂಬರ್ 20 ರಂದು ವಿವಿಧೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ. 110/33/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರ ಕುಂದಾಪುರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ 110/11 ಕೆ.ವಿ ಉಪಕೇಂದ್ರಗಳಾದ ಕುಂದಾಪುರ ಮತ್ತು ನಾವುಂದ ಹಾಗೂ 33/11 ಕೆ.ವಿ ಉಪಕೇಂದ್ರಗಳಾದ ತಲ್ಲೂರು, ಬೈಂದೂರು, ಕೊಲ್ಲೂರು ಮತ್ತು ಗಂಗೊಳ್ಳಿಯಿಂದ ಹೊರಡುವ ಎಲ್ಲಾ 11 ಕೆ.ವಿ ಫೀಡರುಗಳ ಜೊತೆಗೆ 33 ಕೆ.ವಿ ಸೌಕೂರು ಏತ ನೀರಾವರಿ ವಿದ್ಯುತ್ […]

ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ಶ್ರೀ ವೆಂಕಟರಮಣ ಕಾಲೇಜು ವಿದ್ಯಾರ್ಥಿನಿಯರ ಸಾಧನೆ

ಕುಂದಾಪುರ: ಪದವಿ ಪೂರ್ವ ಶಿಕ್ಷಣ ಇಲಾಖೆ, ಬೆಂಗಳೂರು ಹಾಗೂ ಕೆ. ಇ. ಎಲ್. ಎಸ್ ಪದವಿ ಪೂರ್ವ ಕಾಲೇಜು ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಡಿ.14 ರಂದು ಜರುಗಿದ ರಾಜ್ಯ ಮಟ್ಟದ ಇಂಗ್ಲೀಷ್ ಚರ್ಚಾ ಸ್ಪರ್ಧೆಯಲ್ಲಿ ಕುಂದಾಪುರ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಪ್ರಣಮ್ಯ ಹಾಗೂ ಭಾವಗೀತೆ ಸ್ಪರ್ಧೆಯಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಧಾರಿಣಿ ಕೆ. ಎಸ್ ತೃತೀಯ ಸ್ಥಾನ ಪಡೆದಿರುತ್ತಾರೆ. ವಿದ್ಯಾರ್ಥಿನಿಯರ ಸಾಧನೆಗೆ ಕಾಲೇಜಿನ […]

ಕಾರ್ಕಳ ಜ್ಞಾನಸುಧಾ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

ಗಣಿತನಗರ: ವಿದ್ಯಾರ್ಥಿಗಳಲ್ಲಿರುವ ಒತ್ತಡ, ದುಗುಡ, ದುಮ್ಮಾನ ದೂರ ಮಾಡಿ, ಉತ್ಸಾಹದಿಂದ ಬೆಳೆಯಲು ಸಹಕಾರಿ ಕ್ರೀಡೆಯಾಗಿದೆ. ಕ್ರೀಡೆ ಹಾಗೂ ಸಾಂಸ್ಕೃತಿಕವಾಗಿ ಗುರುತಿಸಿಕೊಳ್ಳುವ ವಿದ್ಯಾರ್ಥಿಗಳಿಗೆ ಸಮಾಜದ ಮುಖ್ಯ ವೇದಿಕೆ ಸಿಗಲು ಸಾಧ್ಯವಿದೆ ಎಂದು ಉಡುಪಿ ಜಿಲ್ಲಾ ಯುವ ಸಬಲೀಕರಣ ಹಾಗೂ ಕ್ರೀಡಾ ವಿಭಾಗದ ಉಪನಿರ್ದೇಕ ಡಾ. ರೋಷಣ್ ಕುಮಾರ್ ಹೇಳಿದರು. ಅವರು ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನಲ್ಲಿ ಕ್ರೀಡಾಂಗಣದಲ್ಲಿ ನಡೆದ 2022-23ನೇ ಸಾಲಿನ ವಾರ್ಷಿಕ ಕ್ರೀಡಾ ಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಉಡುಪಿ ಜಿಲ್ಲಾ ಪ.ಪೂ. […]

ವಾರಾಹಿ ಎಡದಂಡೆ ಯೋಜನೆಯಿಂದ ಜನರಿಗಾಗುತ್ತಿರುವ ತೊಂದರೆ ತಕ್ಷಣ ಬಗೆಹರಿಸಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ.

ಉಡುಪಿ: ಹಾರ್ದಳ್ಳಿ-ಮಂಡಳ್ಳಿ ಗ್ರಾಮ ವ್ಯಾಪ್ತಿಯಲ್ಲಿ ಹಾದು ಹೋಗಿರುವ ವಾರಾಹಿ ಎಡದಂಡೆ ಕಾಮಗಾರಿಯಿಂದ ಸ್ಥಳೀಯರಿಗೆ ಸಂಪರ್ಕ ರಸ್ತೆ ಸಮಸ್ಯೆ ಸೇರಿದಂತೆ ಮತ್ತಿತರ ಸಮಸ್ಯೆಗಳ ಬಗ್ಗೆ ತಕ್ಷಣವೇ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚನೆ ನೀಡಿದರು. ಅವರು ಶನಿವಾರ ಬಿದ್ಕಲ್‌ಕಟ್ಟೆಯ ಕೆ.ಪಿ.ಎಸ್. ಶಾಲೆಯಲ್ಲಿ ನಡೆದ ಹಾರ್ದಳ್ಳಿ-ಮಂಡಳ್ಳಿ ಗ್ರಾಮ ವ್ಯಾಪ್ತಿಯ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವಾರಾಹಿ ಎಡದಂಡೆ ಕಾಮಗಾರಿಯ ಕಾರಣ ಗ್ರಾಮದಲ್ಲಿ ಹಲವೆಡೆ ಸಂಪರ್ಕ ರಸ್ತೆಗಳ ಸಮಸ್ಯೆ ಉಂಟಾಗಿದೆ. ಈ ಬಗ್ಗೆ ವಾರಾಹಿ […]