ಉಡುಪಿ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಉಡುಪಿ: ಮಲ್ಪೆ ಸೀ ವಾಕ್ ಬಳಿಯ ಸಮುದ್ರದ ನೀರಿನಲ್ಲಿ ಡಿಸೆಂಬರ್ 17 ರಂದು ಸುಮಾರು 50-55 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹವು ಪತ್ತೆಯಾಗಿದ್ದು, ಮೃತ ವ್ಯಕ್ತಿಯ ವಾರಾಸುದಾರರು ಯಾರಾದರೂ ಇದ್ದಲ್ಲಿ ಮಲ್ಪೆ ಪೊಲೀಸ್ ಠಾಣೆ ದೂ.ಸಂಖ್ಯೆ: 0820-253799, ಮೊ.ನಂ: 9480805447 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಲ್ಪೆ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ದಿವ್ಯಾಂಗರ ಜೊತೆ ಕೈಜೋಡಿಸಿ ಮುಖ್ಯವಾಹಿನಿಗೆ ಕರೆತನ್ನಿ: ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ

ಉಡುಪಿ: ಡಿ 16 ಮತ್ತು 17 ರಂದು ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ದಿವ್ಯಾಂಗರ ಮಾಹಿತಿ ಕಾರ್ಯಗಾರ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆದಿದ್ದು ಇದರ ಸಮಾರೋಪ ಕಾರ್ಯಕ್ರಮದ ಗೌರವ ಅಧ್ಯಕ್ಷತೆಯನ್ನು ಶ್ರೀಶ್ರೀ ವಿದ್ಯಾಸಾಗರ ತೀರ್ಥ ಶ್ರೀ ಪಾದರು ಶ್ರೀ ಪರ್ಯಾಯ ಶ್ರೀ ಕೃಷ್ಣಾಪುರ ವಹಿಸಿದ್ದು, ತಮ್ಮ ಅನುಗ್ರಹ ಭಾಷಣದಲ್ಲಿ ದಿವ್ಯಾಂಗರು ಸಮಾಜದ ಮುಖ್ಯ ವಾಹಿನಿಗೆ ಬರುವಂತಾಗುವಲ್ಲಿ ಸಮಾಜದ ಎಲ್ಲಾ ನಾಗರಿಕರು ತಮ್ಮ ಕೆಲಸ ನಿರ್ವಹಿಸುವುದರೊಂದಿಗೆ ದಿವ್ಯಾಂಗರ ಜೊತೆಗೂ ಕೈ ಜೋಡಿಸಿ ಶ್ರೀ ಕೃಷ್ಣ […]

ಕೋವಿಡ್ ಇನ್ನೂ ಮುಗಿದಿಲ್ಲ: ಚೀನಾದ ಓಮಿಕ್ರಾನ್ ರೂಪಾಂತರ BF.7 ಭಾರತದಲ್ಲೂ ಪತ್ತೆ; ಮುನ್ನೆಚರಿಕೆಯೆ ಮದ್ದು ಎಂದ ತಜ್ಞರು

ನವದೆಹಲಿ: ಚೀನಾದಲ್ಲಿ ಹಠಾತ್ ಪ್ರಕರಣಗಳ ಏರಿಕೆಗೆ ಕಾರಣವಾಗಿರುವ ಕೋವಿಡ್-19 ರೂಪಾಂತರವಾದ ಓಮಿಕ್ರಾನ್ ರೂಪಾಂತರ BF.7, ಭಾರತದಲ್ಲಿಯೂ ಪತ್ತೆಯಾಗಿದೆ ಎಂದು ವರದಿಯಾಗಿದೆ. ಭಾರತದಲ್ಲಿ BF.7 ನ ಮೊದಲ ಪ್ರಕರಣವನ್ನು ಗುಜರಾತ್ ಬಯೋಟೆಕ್ನಾಲಜಿ ರಿಸರ್ಚ್ ಸೆಂಟರ್ ಅಕ್ಟೋಬರ್‌ನಲ್ಲಿ ಪತ್ತೆ ಮಾಡಿದೆ. ಇಲ್ಲಿಯವರೆಗೆ, ಗುಜರಾತ್‌ನಿಂದ ಎರಡು ಪ್ರಕರಣಗಳು ವರದಿಯಾಗಿದ್ದು, ಒಡಿಶಾದಿಂದ ಒಂದು ಪ್ರಕರಣ ವರದಿಯಾಗಿದೆ ಎಂದು ಪಿಟಿಐ ವರದಿ ತಿಳಿಸಿದೆ. ಭಾರತದಲ್ಲಿ ಈ ರೂಪಾಂತರದ 3 ಪ್ರಕರಣಗಳು ಪತ್ತೆಯಾಗಿದ್ದರೂ, ದೇಶದಲ್ಲಿ ಕೋವಿಡ್ ಪ್ರಕರಣಗಳಲ್ಲಿ ಒಟ್ಟಾರೆ ಏರಿಕೆ ಕಂಡುಬಂದಿಲ್ಲ. ಕೇಂದ್ರ ಆರೋಗ್ಯ ಸಚಿವ […]

ಉಡುಪಿ-ಬ್ರಹ್ಮಾವರ ವ್ಯಾಪ್ತಿ ಕಳವು ಪ್ರಕರಣ ಬೇಧಿಸಿದ ಪೊಲೀಸರು: ಆರೋಪಿಗಳ ಬಂಧನ; ಚಿನ್ನಾಭರಣ ವಶ

ಬ್ರಹ್ಮಾವರ: ಬ್ರಹ್ಮಾವರ ಮತ್ತು ಕೋಟಾ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸುವಲ್ಲಿ ಬ್ರಹ್ಮಾವರ ಸಿಪಿಐರವರ ವಿಶೇಷ ತಂಡ ಯಶಸ್ವಿಯಾಗಿದೆ. ಆರೋಪಿಯಿಂದ 7 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಸ್ವತ್ತನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣ ರಾತ್ರಿ ಸಮಯದಲ್ಲಿ ಮನೆಗಳಿಗೆ ನುಗ್ಗಿ ಕಳ್ಳತನ ಮಾಡುತ್ತಿದ್ದ ಕಾದೂರು ತಂತ್ರಾಡಿಯ ವಿಜಯ್ ಕುಮಾರ್ ಶೆಟ್ಟಿಯನ್ನು ಬಂಧಿಸಲಾಗಿದೆ. ಜೈಲಿನಿಂದ ಬಿಡುಗಡೆಯಾದ ಕಳ್ಳತನದ ಆರೋಪಿಗಳ ಮಾಹಿತಿಯನ್ನು ಕಲೆಹಾಕಿ ಎಲ್ಲರ ಮೇಲೆ ನಿಗಾ ಇರಿಸಲಾಗಿತ್ತು. ಸೋಮವಾರದಂದು ಸಂಜೆ ನೀಲಾವರ ಕ್ರಾಸ್ ಬಳಿ ಆರೋಪಿ […]

ಡಿ.24 ರಂದು “ಅಟಲ್ ಉತ್ಸವ” ರಾಷ್ಟ್ರಮಟ್ಟದ ಹೊನಲು‌ ಬೆಳಕಿನ ಕಬಡ್ಡಿ ಪಂದ್ಯಕೂಟ: ನಗರದಲ್ಲಿ ರಘುಪತಿ ಭಟ್ ಮಾಹಿತಿ

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 98ನೇ ಜನ್ಮದಿನಾಚರಣೆಯ ಅಂಗವಾಗಿ ಬಿಜೆಪಿ ಉಡುಪಿ ನಗರ ಹಾಗೂ ಗ್ರಾಮಾಂತರ ವತಿಯಿಂದ ಡಿ. 24ರಂದು ಸಂಜೆ 5ಗಂಟೆಗೆ “ಅಟಲ್ ಉತ್ಸವ” ರಾಷ್ಟ್ರಮಟ್ಟದ ಹೊನಲು‌ ಬೆಳಕಿನ ಕಬಡ್ಡಿ ಪಂದ್ಯಕೂಟ ಹಾಗೂ ಡಿ. 25ರಂದು ಸಂಜೆ 4ಗಂಟೆಗೆ ಬೂತ್ ಸಂಗಮ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಎರಡು ಕಾರ್ಯಕ್ರಮಗಳು ಉಡುಪಿ ಎಂಜಿಎಂ ಮೈದಾನದಲ್ಲಿ ನಡೆಯಲಿದೆ ಎಂದು ಶಾಸಕ ರಘುಪತಿ ಭಟ್ ತಿಳಿಸಿದರು. ಮಣಿಪಾಲದ ಕಂಟ್ರಿ ಇನ್ ಹೋಟೆಲ್ ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ […]