ಯುವ ಜನತೆ ವಿಶ್ವ ಶಾಂತಿ ಹಾಗೂ ವಿಶ್ವ ಕಲ್ಯಾಣಕ್ಕಾಗಿ ಶ್ರಮಿಸಬೇಕಿದೆ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್

ಮೂಡುಬಿದಿರೆ: ವಿದ್ಯಾರ್ಥಿಗಳ ಶಾರೀರಿಕ, ಆಧ್ಯಾತ್ಮಿಕ, ಭೌದ್ಧಿಕ ಅಭಿವೃದ್ಧಿಯು ವಿದ್ಯಾರ್ಥಿಗಳನ್ನು ಹಾಗೂ ದೇಶವನ್ನು ಸಮರ್ಥ ನಿಟ್ಟಿನಲ್ಲಿ ಸಾಗಿಸಲು ಪ್ರೇರೇಪಿಸುತ್ತದೆ ಎಂದು ಕರ್ನಾಟಕ ರಾಜ್ಯದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಹೇಳಿದರು. ಭಾರತ್ ಸ್ಕೌಟ್ಸ್ ಗೈಡ್ಸ್ `ಅಂತರರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ-2022’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಭಾರತದ ಮೊದಲ ಸ್ಕೌಟ್ಸ್ ಗೈಡ್ಸ್ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ ಕರ್ನಾಟಕದ ಮೂಡುಬಿದಿರೆಯ ಆಳ್ವಾಸ್‌ನಲ್ಲಿ ನಡೆಯುತ್ತಿರುವುದು ಸಂತೋಷದ ವಿಷಯ. ಸಮಾಜದ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಸ್ಕೌಟ್ಸ್ ಗೈಡ್ಸ್ ನ ಸೇವೆ ಅಪಾರ. ಭಾರತ ಯುವ ಜನತೆಯ ದೇಶ, […]

ಕರ್ನಾಟಕ ಕಲಾಭೂಷಣ ರಾಷ್ಟ್ರೀಯ ಪ್ರಶಸ್ತಿಗೆ ಉಡುಪಿಯ ಯುವ ಪ್ರತಿಭೆ ರಾಮಾಂಜಿ ಆಯ್ಕೆ

ಉಡುಪಿ : ಬೆಂಗಳೂರಿನ ಸಿದ್ಧಾರೂಢ ಮಿಷನ್ ಸಂಸ್ಥೆ ವತಿಯಿಂದ ನೀಡಲಾಗುವ ಪ್ರಸಕ್ತ ಸಾಲಿನ ಪ್ರತಿಷ್ಠಿತ “ಕರ್ನಾಟಕ ಕಲಾಭೂಷಣ ” ರಾಷ್ಟ್ರೀಯ ಪ್ರಶಸ್ತಿಗೆ ಉಡುಪಿಯ ಯುವ ಪ್ರತಿಭಾನ್ವಿತ ಕಲಾವಿದ, ನಮ್ಮ ಭೂಮಿಯ ರಾಮಾಂಜಿ ಆಯ್ಕೆಯಾಗಿದ್ದಾರೆ. ರಾಮಾಂಜಿ ಅವರು ಕಳೆದ 20 ವರ್ಷಗಳಿಂದ ಕಲೆ, ಸಾಹಿತ್ಯ, ಸಂಸ್ಕೃತಿ, ಪರಿಸರ, ಶಿಕ್ಷಣ ಹೀಗೆ ಮುಂತಾದ ಕ್ಷೇತ್ರಗಳಲ್ಲಿ ಸಲ್ಲಿಸುತ್ತಿರುವ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ. ಡಿ.25ರಂದು ಬೆಂಗಳೂರಿನ ಸಿದ್ಧಾರೂಢ ಮಿಷನ್ ಸಂಸ್ಥೆಯಲ್ಲಿ ವಿಶ್ವ ದರ್ಶನ ದಿನಪತ್ರಿಕೆಯ ದ್ವಿತೀಯ ಸಮ್ಮೇಳನದಲ್ಲಿ ಈ […]

ಕಲ್ಯಾ: ಮಾಲಕಿ ಮನೆಯಲ್ಲಿಲ್ಲದ ವೇಳೆ ಕಳ್ಳತನ; ಕೃತ್ಯವೆಸಗಿದ ಸ್ನೇಹಿತೆಯ ಬಂಧನ

ಉಡುಪಿ: ಕಾರ್ಕಳ ತಾಲೂಕಿನ ಕಲ್ಯಾ ಗ್ರಾಮದ ಕಂಗಿತ್ತುವಿನ ಉಷಾ ಜಗದೀಶ್‌ ಆಂಚನ್‌ ಎಂಬವರ ಮನೆಯಲ್ಲಿ ಡಿಸೆಂಬರ್ 3ರಂದು ಕಳವು ಪ್ರಕರಣ ನಡೆದಿದ್ದು, ಕಳ್ಳರು ಮನೆಯಲ್ಲಿದ್ದ 4.50 ಲಕ್ಷ ರೂ. ಮೌಲ್ಯದ ಸುಮಾರು 156 ಗ್ರಾಂ ತೂಕದ ಬಂಗಾರದ ಒಡವೆಗಳನ್ನು ಕಳವು ಮಾಡಿಕೊಂಡು ಹೋದ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣವನ್ನು ಬೇಧಿಸಿರುವ ಪೊಲೀಸರು ಕಾರ್ಕಳದಲ್ಲಿ ನಡೆದ ಕಳ್ಳತನದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಬಂಟ್ವಾಳ ಅರಂಬೋಡಿ ಕಾಂತರಬೆಟ್ಟು ನಿವಾಸಿ ಪ್ರಸಾದ್‌ (34) ಹಾಗು ಕಳ್ಳತನಕ್ಕೆ […]

ಕುಂದಾಪುರ: ಕೆನರಾ ಬ್ಯಾಂಕ್ ಉಡುಪಿ ಪ್ರಾದೇಶಿಕ ಕಚೇರಿ-2ರ ಗ್ರಾಹಕರ ಸಮಾವೇಶ

ಕುಂದಾಪುರ: ದೇಶದ ಅಗ್ರಗಣ್ಯ ಬ್ಯಾಂಕ್ ಗಳಲ್ಲಿ ಒಂದಾಗಿರುವ ಕೆನರಾ ಬ್ಯಾಂಕ್ ಉಡುಪಿ ಪ್ರಾದೇಶಿಕ ಕಚೇರಿ-2ರ ಗ್ರಾಹಕರ ಸಮವೇಶವು ಅಂಕದಕಟ್ಟೆಯ ಸಹನಾ ಕನ್ವೆನ್ಶನ್ ಸೆಂಟರಿನಲ್ಲಿ ನಡೆಯಿತು. ಬೈಂದೂರು ಶಾಸಕ ಬಿ.ಎಂ ಸುಕುಮಾರ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬ್ಯಾಂಕ್ ನ ಉಡುಪಿ ಪ್ರಾದೇಶಿಕ ಕಚೇರಿಯ ಸಹಾಯಕ ಪ್ರಬಂಧಕ ಶ್ರೀಜಿತ್ ಮಾತನಾಡಿ ತುಂಬ ಸಮಯದ ಬಳಿಕ ಗ್ರಾಹರಕ ಜೊತೆ ಸಂವಾದ ಮಾಡುವ ಯೋಗ ಬಂದಿದೆ. ಜಾಗತಿಕ ಸಾಂಕ್ರಮಿಕ ಸಂದರ್ಭದಲ್ಲಿ ತೊಂದರೆಯಾದರೂ ಬ್ಯಾಂಕ್ ತನ್ನ ಗ್ರಾಹಕರನ್ನು ಆಧರಿಸಿದೆ. ಡಿಸೆಂಬರ್ ಅಂತ್ಯಕ್ಕೆ ಬ್ಯಾಂಕ್ 20 […]

ಐತಿಹಾಸಿಕ ವಿಶ್ವ ಜಾಂಬೂರಿಗೆ ವಿದ್ಯುಕ್ತ ಚಾಲನೆ ನೀಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಮೂಡುಬಿದಿರೆ: ಪ್ರಪಂಚದಾದ್ಯಂತ ಸುಮಾರು 70 ಮಿಲಿಯನ್‌ ಸ್ವಯಂಸೇವಕರನ್ನು ಹೊಂದಿರುವ ಸ್ಕೌಟ್ಸ್‌ ಗೈಡ್ಸ್‌ನ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಗೆ ವಿದ್ಯಾಕಾಶಿ ಎನಿಸಿಕೊಂಡ ಮೂಡಬಿದರೆಯ ಆಳ್ವಾಸ್ ಕಾಲೇಜಿನಲ್ಲಿ ಬುಧವಾರದಂದು ವಿದ್ಯುಕ್ತ ಚಾಲನೆ ನೀಡಲಾಯಿತು. ಮೂಡುಬಿದಿರೆ ಆಳ್ವಾಸ್‌ ಶಿಕ್ಷಣ ಸಂಸ್ಥೆಯ 150 ಎಕರೆ ವಿಶಾಲ ಪ್ರದೇಶದಲ್ಲಿ ವಿಶ್ವ ಜಾಂಬೂರಿಯನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮವನ್ನು ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಉದ್ಘಾಟಿಸಿ ಮಾತನಾಡಿ, ಸ್ಕೌಟ್ಸ್ ಮತ್ತು ಗೈಡ್ಸ್‌ ವಿದ್ಯಾರ್ಥಿಗಳಲ್ಲಿ ದೈಹಿಕ, ಮಾನಸಿಕ, ಬೌದ್ಧಿಕ, ಸಾಮಾಜಿಕ, ಸಾಂಸ್ಕೃತಿಕ ಜ್ಞಾನ ಮತ್ತು ಕೌಶಲ್ಯ ಸಾಮರ್ಥ್ಯಗಳನ್ನು ಅಭಿವೃದ್ಧಿಪಡಿಸುತ್ತದೆ. ಜವಾಬ್ದಾರಿಯುತ […]