ನಾಳೆ ಕಾರ್ಕಳದಲ್ಲಿ ಸಾಂಸ್ಕೃತಿಕ ಸೌರಭ ಕಾರ್ಯಕ್ರಮ

ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ, ಕೋಟಿ ಚೆನ್ನಯ್ಯ ಥೀಂ ಪಾರ್ಕ್ ಅಭಿವೃದ್ಧಿ ಸಮಿತಿ ಹಾಗೂ ಯಕ್ಷ ರಂಗಾಯಣ ಕಾರ್ಕಳ ಇವರ ಸಹಯೋಗದೊಂದಿಗೆ ಸಾಂಸ್ಕೃತಿಕ ಸೌರಭ ಕಾರ್ಯಕ್ರಮವು ಡಿಸೆಂಬರ್ 24 ರಂದು ಸಂಜೆ 4 ಗಂಟೆಗೆ ಕಾರ್ಕಳ ಕೋಟಿ ಚೆನ್ನಯ್ಯ ಥೀಂ ಪಾರ್ಕ್ನಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ರಾಜ್ಯದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ ಸುನಿಲ್ ಕುಮಾರ್ ಉದ್ಘಾಟಿಸಲಿದ್ದು, ಕಾರ್ಕಳ ಭುವನೇಂದ್ರ ಕಾಲೇಜಿನ ಪ್ರಾಂಶುಪಾಲ ಡಾ. ಎ ಮಂಜುನಾಥ ಕೋಟ್ಯಾನ್ […]

ಸಿಕ್ಕಿಂನಲ್ಲಿ ಸೇನಾ ವಾಹನ ಪಲ್ಟಿ: 16 ಯೋಧರ ಸಾವು; ನಾಲ್ವರಿಗೆ ಗಾಯ

ನವದೆಹಲಿ: ಸಿಕ್ಕಿಂನಲ್ಲೊಂದು ಹೃದಯ ಕಲಕುವ ಘಟನೆ ನಡೆದಿದೆ. ಶುಕ್ರವಾರ ಉತ್ತರ ಸಿಕ್ಕಿಂ ಬಳಿ ಕಡಿದಾದ ಇಳಿಜಾರಿನಲ್ಲಿ ಸೇನಾ ವಾಹನವು ಜಾರಿ ಕೆಳಗುರುಳಿ 16 ಸೇನಾ ಯೋಧರು ಸಾವನ್ನಪ್ಪಿದ್ದಾರೆ ಮತ್ತು ನಾಲ್ವರು ಗಾಯಗೊಂಡಿದ್ದಾರೆ. ಬೆಳಿಗ್ಗೆ ಚಾಟೆನ್‌ನಿಂದ ಥಾಂಗು ಕಡೆಗೆ ಸಾಗುತ್ತಿದ್ದ ಈ ವಾಹನವು ಮೂರು ವಾಹನಗಳ ಬೆಂಗಾವಲು ಪಡೆಯ ಭಾಗವಾಗಿತ್ತು ಮತ್ತು ಝೀಮಾ ಮಾರ್ಗದಲ್ಲಿ ವಾಹನವು ಅಪಘಾತಕ್ಕೀಡಾಯಿತು. ರಕ್ಷಣಾ ಕಾರ್ಯಾಚರಣೆಯನ್ನು ತಕ್ಷಣವೇ ಪ್ರಾರಂಭಿಸಲಾಯಿತು ಮತ್ತು ಗಾಯಗೊಂಡ ನಾಲ್ವರು ಸೈನಿಕರನ್ನು ಏರ್ ಲಿಫ್ಟ್ ಮೂಲಕ ಸ್ಥಳಾಂತರಿಸಲಾಗಿದೆ. ದುರದೃಷ್ಟವಶಾತ್, ಮೂವರು ಜೂನಿಯರ್ […]

ಅಮೃತ ಜೀವನ ಯೋಜನೆಯಡಿ ಹಸು ಘಟಕ ಪ್ರಾರಂಭಿಸಲು ಸಹಾಯಧನ ಲಭ್ಯ

ಉಡುಪಿ: ಪಶುಪಾಲನಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯ ಮುಖ್ಯಮಂತ್ರಿಗಳ ಅಮೃತ ಜೀವನ ಯೋಜನೆಯಡಿ ಇತರೆ ಫಲಾನುಭವಿಗಳಿಗೆ ಶೇ.25 ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಶೇ.33.33 ಸಹಾಯಧನದಡಿ ಮಿಶ್ರತಳಿ ಹಾಲು ಕರೆಯುವ ಹಸು ಘಟಕ ಪ್ರಾರಂಭಿಸುವ ಯೋಜನೆ ಅನುಷ್ಠಾನಗೊಳಿಸಲು ಪ.ಜಾತಿ, ಪ.ಪಂಗಡ, ಇತರೆ ಕೂಲಿ ಕೃಷಿ ಕಾರ್ಮಿಕರು ಮತ್ತು ಪಶು ಸಂಗೋಪನೆಯಲ್ಲಿ ತೊಡಗಿಸಿಕೊಂಡ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು 2023 ಜನವರಿ 10 ಕೊನೆಯ ದಿನ. […]

ಐಪಿಎಲ್ ಮಿನಿ ಹರಾಜು: 18.5 ಕೋಟಿಗೆ ಪಂಜಾಬ್ ಪಾಲಾದ ಸ್ಯಾಮ್ಯುಯೆಲ್ ಕರ್ರನ್; ಚೆನೈ ತಂಡಕ್ಕೆ ಬೆನ್ ಸ್ಟೋಕ್ಸ್ ಸೇರ್ಪಡೆ

ಕೊಚ್ಚಿ: ಭಾರತದ ಅತಿದೊಡ್ಡ ಕ್ರೀಡಾಕೂಟ ಇಂಡಿಯನ್ ಪ್ರೀಮಿಯರ್ ಲೀಗ್ ಬೇಸಿಗೆಯಲ್ಲಿ ಪ್ರಾರಂಭವಾಗಲಿದ್ದು ಅದಕ್ಕೆ ಪೂರ್ವಭಾವಿಯಾಗಿ ಮಿನಿ ಹರಾಜು ನಡೆಸಲು ಸಂಘಟನಾ ಸಂಸ್ಥೆ ನಿರ್ಧರಿಸಿತ್ತು. ಐಪಿಎಲ್‌ನ 16ನೇ ಆವೃತ್ತಿಗಾಗಿ ಒಟ್ಟು 991 ಆಟಗಾರರು ನೋಂದಾಯಿಸಿಕೊಂಡಿದ್ದಾರೆ. ಇಂದು ಎರ್ನಾಕುಲಂ ನಲ್ಲಿ 405 ಆಟಗಾರರ ಮಿನಿ ಹರಾಜು ಪ್ರಕ್ರಿಯೆ ನಡೆದಿದೆ. ಎಲ್ಲಾ ಸ್ವರೂಪಗಳಲ್ಲಿಯೂ ಆಡುವ ಇಂಗ್ಲಿಷ್ ಕ್ರಿಕೆಟಿಗ ಸ್ಯಾಮ್ಯುಯೆಲ್ ಮ್ಯಾಥ್ಯೂ ಕರ್ರನ್ ದಾಖಲೆಯ 18.5 ಕೋಟಿ ಮೊತ್ತಕ್ಕೆ ಪಂಜಾಬ್ ಕಿಂಗ್ಸ್ ಪಾಲಾಗಿದ್ದಾರೆ. 17.5 ಕೋಟಿ ಮೊತ್ತಕ್ಕೆ ಕ್ಯಾಮರೂನ್ ಗ್ರೀನ್ ಮುಂಬೈ ಇಂಡಿಯನ್ಸ್ […]

ಹೆಮ್ಮಾಡಿ: ಪ್ರಗತಿ ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘ ದಶಮಾನೋತ್ಸವ, ಅಂಪಾರು ಶಾಖೆ ಉದ್ಘಾಟನೆ

ಕುಂದಾಪುರ: ಹೆಮ್ಮಾಡಿಯ ಪ್ರಗತಿ ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘದ ದಶಮಾನೋತ್ಸವ ಸಂಭ್ರಮ ಹಾಗೂ ಅಂಪಾರಿನ ಪ್ರಶಾಂತ್ ಕಾಂಪ್ಲೆಕ್ಸ್ ನಲ್ಲಿ ಆರಂಭಗೊಂಡ ಅಂಪಾರು ಶಾಖೆಯ ಉದ್ಘಾಟನೆ ಸೋಮವಾರ ನಡೆಯಿತು. ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಧರ್ಮದರ್ಶಿ ಬಿ. ಅಪ್ಪಣ್ಣ ಹೆಗ್ಡೆ ಶಾಖೆಯನ್ನು ಉದ್ಘಾಟಿಸಿ ಶುಭಹಾರೈಸಿ ಮಾತನಾಡಿ, ಯಾವುದೇ ಸಹಕಾರಿ ಸಂಸ್ಥೆ ಯಶಸ್ವಿಯಾಗಿ ಮುನ್ನಡೆಯಲು ಗ್ರಾಹಕರ ಸಹಕಾರ ಬಹಳ ಮುಖ್ಯ. ಸಿಬ್ಬಂದಿ ಮತ್ತು ಗ್ರಾಹಕರ ಉತ್ತಮ ಬಾಂಧವ್ಯದಿಂದ ಸಂಘವು ಒಳ್ಳೆಯ ರೀತಿಯಲ್ಲಿ ಮುನ್ನಡೆಯಲು ಸಾಧ್ಯ ಎಂದರು. ಭದ್ರತಾ ಕೋಶವನ್ನು ಉದ್ಘಾಟಿಸಿದ […]