ಯೂಟ್ಯೂಬ್ ನಲ್ಲಿ ಬಿಡುಗಡೆಯಾಯ್ತು ಗಗನ್ ಗಾಂವ್ಕರ್ ಸುಮಧುರ ಕಂಠದಲ್ಲಿ ಸಿಂಗಾರ ಸಿರಿಯೆ ತುಳು ಆವೃತ್ತಿ
ವಿಶ್ವದಾದ್ಯಂತ ಕಿಚ್ಚು ಹಚ್ಚಿದ ಕಾಂತಾರ ಚಿತ್ರದ ಸಿಂಗಾರ ಸಿರಿಯೆ ಗೀತೆಯನ್ನು ಮೆಚ್ಚದವರೇ ಇಲ್ಲ. ಇದೀಗ ಸಿಂಗಾರ ಸಿರಿಯೆ ಹಾಡಿನ ತುಳು ಆವೃತ್ತಿಯು ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿದ್ದು, ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಪ್ರತಾಪ್ ಶೆಟ್ಟಿ ಸಾಹಿತ್ಯದ ಗೀತೆಯನ್ನು ಝೀಟಿವಿಯ ಸರೆಗಮಪ ಸಂಗೀತ ರಿಯಾಲಿಟಿ ಶೋ ವಿಜೇತ ಗಗನ್ ಗಾಂವ್ಕರ್ ಸುಶ್ರಾವ್ಯವಾಗಿ ಹಾಡಿದ್ದಾರೆ. ಹಾಡಿನ ಮಿಕ್ಸಿಂಗ್ ಅನ್ನು ಉಡುಪಿಯ ನಿನಾದ್ ಆಡಿಯೋ ರೆಕಾರ್ಡಿಂಗ್ ಮಿಕ್ಸಿಂಗ್ ಸ್ಟುಡಿಯೋನ ಶರತ್ ಉಚ್ಚಿಲ ಮಾಡಿದ್ದಾರೆ.
ಕಾರ್ಕಳ ಜ್ಞಾನಸುಧಾ ಕಾಲೇಜಿನ ವಾರ್ಷಿಕ ಸಾಂಸ್ಕೃತಿಕ ಕಾರ್ಯಕ್ರಮ ‘ಜ್ಞಾನಸಂಭ್ರಮ’ಕ್ಕೆ ಚಾಲನೆ
ಗಣಿತ ನಗರ: ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಗಣಿತನಗರ ಕ್ರೀಡಾಂಗಣದಲ್ಲಿ ನಡೆದ 2022-23ನೇ ಸಾಲಿನ ವಾರ್ಷಿಕ ಸಾಂಸ್ಕೃತಿಕ ಉತ್ಸವ ‘ಜ್ಞಾನ ಸಂಭ್ರಮ -2022’ಅನ್ನು ಹಿರಿಯರಾದ ದೇಜು ಮೈಂದನ್ ಕೊಡವೂರ್ ದೀಪ ಬೆಳಗಿಸಿ ಉದ್ಘಾಟಿಸಿದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ಅಧ್ಯಕ್ಷ ಡಾ.ಸುಧಾಕರ್ ಶೆಟ್ಟಿ, ಶಿಕ್ಷಣದ ಜೊತೆಗೆ ವಿದ್ಯಾರ್ಥಿಯಲ್ಲಿ ನಾಡು, ನುಡಿ, ಸಂಸ್ಕೃತಿ, ಆಚಾರ- ವಿಚಾರಗಳನ್ನು ಪರಿಚಯಿಸುವಲ್ಲಿ ಸಾಂಸ್ಕೃತಿಕ ಚಟುವಟಿಕೆಗಳು ಬಹು ಮುಖ್ಯ ಪಾತ್ರ ವಹಿಸುತ್ತವೆ. ಆಟ-ಪಾಠದ ಜೊತೆಗೆ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ […]
ಕನ್ಹಯ್ಯ ಲಾಲ್ ತೇಲಿ ಹತ್ಯೆ ಪ್ರಕರಣ: 11 ಆರೋಪಿಗಳ ವಿರುದ್ದ ಚಾರ್ಜ್ ಶೀಟ್ ಸಲ್ಲಿಸಿದ ಎನ್‌ಐಎ
ನವದೆಹಲಿ: ಈ ವರ್ಷ ಜೂನ್ 28 ರಂದು ಇಬ್ಬರು ಭಯೋತ್ಪಾದಕರಿಂದ ಕನ್ಹಯ್ಯ ಲಾಲ್ ತೇಲಿ ಎಂಬ ಟೈಲರ್ ನ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಯು ಗುರುವಾರ ರಾಜಸ್ಥಾನದ ಜೈಪುರದ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ (ಆರ್‌ಸಿ-27/2022/ಎನ್‌ಐಎ/ಡಿಎಲ್‌ಐ) ಸಲ್ಲಿಸಿದೆ. ರಿಯಾಜ್ ಅಟ್ಟಾರಿ ಮತ್ತು ಗೋಸ್ ಮೊಹಮ್ಮದ್ ಎನ್ನುವ ಆರೋಪಿಗಳು ದೇಶಾದ್ಯಂತ ಜನಸಾಮಾನ್ಯರಲ್ಲಿ ಭಯ ಮತ್ತು ಆತಂಕವನ್ನು ಸೃಷ್ಟಿಸಲು ಸಾಮಾಜಿಕ ಮಾಧ್ಯಮದಲ್ಲಿ ಹತ್ಯೆಯ ವೀಡಿಯೊವನ್ನು ಪ್ರಸಾರ ಮಾಡಿದ್ದಾರೆ ಎಂದು ಸಂಸ್ಥೆ ಹೇಳಿದೆ. ಭಯೋತ್ಪಾದಕ […]
ಮುಚ್ಚಿದ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ; ಕೋವಿನ್ ನಲ್ಲಿ ಮೂಗಿನ ಲಸಿಕೆ ಇಂಕೋವಾಕ್ ಲಭ್ಯ
ಬೆಂಗಳೂರು: ಚೀನಾ ಸೇರಿದಂತೆ ವಿಶ್ವದ ಕೆಲವು ಭಾಗಗಳಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಫ್ಲ್ಯೂ ಮಾದರಿ ಮತ್ತು ತೀವ್ರ ಉಸಿರಾಟದ ಕಾಯಿಲೆಗೆ ಕಡ್ಡಾಯ ಕೋವಿಡ್ ಪರೀಕ್ಷೆಯನ್ನು ನಡೆಸಲು ಕರ್ನಾಟಕ ಸರ್ಕಾರ ಗುರುವಾರ ನಿರ್ಧರಿಸಿದೆ. ರಾಜ್ಯಕ್ಕೆ ಆಗಮಿಸುವ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಶೇಕಡಾ ಎರಡರಷ್ಟು ಯಾದೃಚ್ಛಿಕ ಪರೀಕ್ಷೆಯು ಕೇಂದ್ರದಿಂದ ಪರಿಷ್ಕೃತ ನಿರ್ದೇಶನಗಳವರೆಗೆ ಮುಂದುವರಿಯುತ್ತದೆ ಎಂದು ರಾಜ್ಯ ಆರೋಗ್ಯ ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ. ಮುಚ್ಚಿದ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ ಪಬ್‌ಗಳು, ಬಾರ್‌ಗಳು, ಕಚೇರಿಗಳು, ರೆಸ್ಟೋರೆಂಟ್‌ಗಳು, ಮಾಲ್‌ಗಳು, ಬಸ್‌ಗಳು, […]
ರಂಗಸ್ಥಳದಲ್ಲೇ ಪಯಣ ಮುಗಿಸಿದ ಕಲಾವಿದ: ಗುರುವಪ್ಪ ಬಾಯಾರು ಹೃದಯಾಘಾತದಿಂದ ನಿಧನ
ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಮೇಳದ ಕಲಾವಿದ ಗುರುವಪ್ಪ ಬಾಯಾರು (58) ಅವರು ಗುರುವಾರ ಡಿ.22 ರಂದು ರಾತ್ರಿ ಕಟೀಲಿನ ಸರಸ್ವತೀ ಸದನದಲ್ಲಿ ನಡೆಯುತ್ತಿದ್ದ ಯಕ್ಷಗಾನದ ಸಂದರ್ಭದಲ್ಲಿ ರಂಗಸ್ಥಳದಲ್ಲೇ ಹೃದಯಾಘಾತದಿಂದ ಕುಸಿದು ಬಿದ್ದು ಇಹಲೋಕದ ಪಯಣ ಮುಗಿಸಿದ್ದಾರೆ. ಸರಸ್ವತೀ ಸದನದಲ್ಲಿ ಕಟೀಲು ನಾಲ್ಕನೇ ಮೇಳದ ಯಕ್ಷಗಾನ ಬಯಲಾಟದ ತ್ರಿಜನ್ಮ ಮೋಕ್ಷ ಪ್ರಸಂಗ ನಡೆಯುತಿತ್ತು. ಬಾಯಾರು ಅವರು ಶಿಶುಪಾಲನ ಪಾತ್ರ ನಿರ್ವಹಿಸಿದ್ದರು. ಪ್ರಸಂಗದ ಕೊನೆಯ ಭಾಗ ಪ್ರದರ್ಶನಗೊಳ್ಳುತ್ತಿತ್ತು. ಆ ಸಂದರ್ಭದಲ್ಲಿ ರಂಗಸ್ಥಳದಲ್ಲಿ ನಿಂತಿದ್ದ ಗುರುವಪ್ಪ ಬಾಯಾರು ಅವರು ರಂಗಸ್ಥಳದಿಂದ […]