ಭಾರತ ಕಂಡ ಶ್ರೇಷ್ಠ ನಾಯಕ ಪ್ರಖರ ವಾಗ್ಮಿ ಯಶಸ್ವಿ ಪ್ರಧಾನಿ: ಭಾರತರತ್ನ ಅಟಲ್ ಬಿಹಾರಿ ವಾಜಪೇಯಿ
ಐದು ವರ್ಷಗಳ ಕಾಲ ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ಡಿಎ) ಸರ್ಕಾರವನ್ನು ಸಮರ್ಥವಾಗಿ ಮುನ್ನಡೆಸಿದ ಭಾರತ ಕಂಡ ಶ್ರೇಷ್ಠ ನಾಯಕ ಮತ್ತು ಶ್ರೇಷ್ಠ ವಾಗ್ಮಿ ಮಾಜಿ ಪ್ರಧಾನಿ ಭಾರತರತ್ನ ಅಟಲ್ ಬಿಹಾರಿ ವಾಜಪೇಯಿ ಅವರು ಭಾರತವನ್ನು ವಿಶ್ವಗುರುವಾಗಿಸುವ ಹಲವಾರು ವಿಷಯಗಳಿಗೆ ಹಾಕಿದ ಅಡಿಪಾಯದ ಫಲವನ್ನು ಇಂದು ಭಾರತೀಯರೆಲ್ಲರೂ ಉಣ್ಣುತ್ತಿದ್ದಾರೆ. ಭಾರತದ ದೂರಸಂಪರ್ಕ ಕ್ಷೇತ್ರದಲ್ಲಿ ಕ್ರಾಂತಿ, ಭಾರತ್ ಮಾಲಾ, ಸಾಗಾರ್ ಮಾಲಾ ದಂತಹ ಬೃಹತ್ ಮೂಲಸೌಕರ್ಯ ಯೋಜನೆಗಳಿಗೆ ಅಡಿಪಾಯ, ಗ್ರಾಮ ಸಡಕ್ ಯೋಜನೆ, […]
ಅಟಲ್ ಉತ್ಸವಕ್ಕೆ ನಾಡಿನ ಗಣ್ಯದಿಂದ ಶುಭಹಾರೈಕೆ
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 98ನೇ ಜನ್ಮ ದಿನಾಚರಣೆ ಪ್ರಯುಕ್ತ ಇಂದು ನಾಳೆ ಅಟಲ್ ಉತ್ಸವ ಆಚರಣೆ ನಡೆಯುತ್ತಿದ್ದು, ಅಟಲ್ ಉತ್ಸವಕ್ಕೆ ನಾಡಿನ ಗಣ್ಯರು ಶುಭಹಾರೈಸಿದ್ದಾರೆ.
ಅನೈಚ್ಛಿಕ ಡೌನ್ಗ್ರೇಡ್ ಟಿಕೆಟ್ ಗಳಿಗೆ ವಿಮಾನ ಸಂಸ್ಥೆಗಳಿಂದ ಸಂಪೂರ್ಣ ಮರುಪಾವತಿ: ಡಿಜಿಸಿಎ ಹೊಸ ಮಾನದಂಡ
ಹೊಸದಿಲ್ಲಿ: ವಿಮಾನಯಾನ ನಿಯಂತ್ರಕ ಡಿಜಿಸಿಎ ಹೊಸ ಮಾನದಂಡಗಳನ್ನು ಜಾರಿಗೆ ತರಲು ಸಿದ್ಧತೆ ನಡೆಸಿದ್ದು, ವಿಮಾನಯಾನ ಸಂಸ್ಥೆಗಳು ನಿರ್ದಿಷ್ಟ ವರ್ಗದ ಟಿಕೆಟ್ಗಳನ್ನು ಅನೈಚ್ಛಿಕವಾಗಿ ಡೌನ್ಗ್ರೇಡ್ ಮಾಡಿದಲ್ಲಿ ಪ್ರಯಾಣಿಕರಿಗೆ ಪರಿಹಾರವನ್ನು ನೀಡುವ ನಿಯಮಾವಳಿಗಳಿ ಶೀಘ್ರದಲ್ಲೇ ಜಾರಿಗೆ ಬರಲಿವೆ. ನಿಯಮಗಳು ಜಾರಿಗೆ ಬಂದ ನಂತರ, ಸಂಬಂಧಪಟ್ಟ ವಿಮಾನಯಾನ ಸಂಸ್ಥೆಯು ತೆರಿಗೆಗಳನ್ನು ಒಳಗೊಂಡಂತೆ ಅಂತಹ ಟಿಕೆಟ್ಗಳ ಸಂಪೂರ್ಣ ಮೌಲ್ಯವನ್ನು ಮರುಪಾವತಿಸಬೇಕಾಗುತ್ತದೆ ಮತ್ತು ಪೀಡಿತ ಪ್ರಯಾಣಿಕರನ್ನು ಮುಂದಿನ ಲಭ್ಯವಿರುವ ಕ್ಲಾಸ್ ನಲ್ಲಿ ಉಚಿತ ಪ್ರಯಾಣದ ವ್ಯವಸ್ಥೆ ಮಾಡಬೇಕಾಗುತ್ತದೆ ಎಂದು ಡಿಜಿಸಿಎ ತಿಳಿಸಿದೆ. ಡೌನ್ಗ್ರೇಡ್ ಎಂದರೇನು? […]
ಡಿ. 26 ರಂದು ರಾಷ್ಟ್ರೀಯ ಗ್ರಾಹಕರ ದಿನಾಚರಣೆ
ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಬಳಕೆದಾರರ ವೇದಿಕೆ, ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರ, ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಗ್ರಾಹಕರ ದಿನಾಚರಣೆಯು ಡಿಸೆಂಬರ್ 26 ರಂದು ಬೆಳಗ್ಗೆ 10.30 ಕ್ಕೆ ಕುಂಜಿಬೆಟ್ಟು ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಉದ್ಘಾಟಿಸಲಿದ್ದು, […]
ಸರ್ಕಾರಿ ನೌಕರರು ಜನರ ನಿರೀಕ್ಷೆಗೆ ಸ್ಪಂದಿಸಿ ಪ್ರಾಮಾಣಿಕತೆಯಿಂದ ಕೆಲಸ ನಿರ್ವಹಿಸಬೇಕು: ನಿವೃತ್ತ ಜಿಲ್ಲಾಧಿಕಾರಿ ಕಲ್ಪನಾ
ಉಡುಪಿ: ಜನರಿಂದ ಜನರಿಗೋಸ್ಕರ ಇರುವ ಸರ್ಕಾರ ಜನಸಾಮಾನ್ಯರನ್ನು ಕೇಂದ್ರವನ್ನಾಗಿಟ್ಟುಕೊಂಡು ಯೋಜನೆ ಹಾಗೂ ಕಾರ್ಯಕ್ರಮಗಳನ್ನು ಜಾರಿಗೆ ತರುತ್ತದೆ. ಇವುಗಳನ್ನು ಅನುಷ್ಠಾನಗೊಳಿಸುವ ಕೆಲಸ ಕಾರ್ಯಾಂಗದ್ದಾಗಿದ್ದು, ಇದರ ಜವಾಬ್ದಾರಿ ಸರ್ಕಾರಿ ನೌಕರರ ಮೇಲಿರುತ್ತದೆ. ಇದನ್ನು ಅರಿತು ದಕ್ಷತೆಯಿಂದ ಕಾರ್ಯನಿರ್ವಹಿಸಬೇಕು. ಬಹುಪಾಲು ಜನರು ಸರ್ಕಾರದಿಂದ ಹೆಚ್ಚೇನೂ ನಿರೀಕ್ಷಿಸದೇ ತಮ್ಮ ದೈನಂದಿನ ಕೆಲಸ ಕಾರ್ಯಗಳನ್ನು ನಿರ್ವಹಿಸಿಕೊಂಡು ಹೋಗುತ್ತಿರುತ್ತಾರೆ. ಸರ್ಕಾರದಿಂದ ಅಗತ್ಯ ಮೂಲಭೂತ ಸೌಕರ್ಯಗಳನ್ನು ಮಾತ್ರ ಅಪೇಕ್ಷಿಸುವ ಅವರ ನಿರೀಕ್ಷೆಗೆ ತಕ್ಕಂತೆ ನಾವು ಸ್ಪಂದಿಸಬೇಕು ಎಂದು ಉಡುಪಿ ಜಿಲ್ಲೆಯ ಪ್ರಥಮ ಜಿಲಾಧಿಕಾರಿ(ಈಗ ನಿವೃತ್ತ) ಕಲ್ಪನಾ ಹೇಳಿದರು. […]