ಮರಾಠಾ ಸಮುದಾಯಗಳ ಅರಿವು ಶೈಕ್ಷಣಿಕ ಸಾಲ ಯೋಜನೆ ಅರ್ಜಿ ಸಲ್ಲಿಸಲು ಡಿ.31 ಕೊನೆ ದಿನ
ಉಡುಪಿ: ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆ ಹಾಗೂ ರಾಜಶ್ರೀ ಶಾಹುಮಹಾರಾಜ ವಿದೇಶಿ ವ್ಯಾಸಾಂಗ ಯೋಜನೆಯಡಿ ಸೇವಾಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಡಿಸೆಂಬರ್ 31 ರ ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ https://kmcdc.karnataka.gov.in ಅಥವಾ ದೂ.ಸಂಖ್ಯೆ: 080-299093994,0820-2574882, ಸಹಾಯವಾಣಿ ಸಂಖ್ಯೆ: 8867537799 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಡಿ. ದೇವರಾಜ […]
ಕಾಡಬೆಟ್ಟುವಿನಲ್ಲಿ ನರ್ತಕಿ ಭರತ ನಾಟ್ಯ ತರಬೇತಿ ಶಾಲೆ ಉದ್ಘಾಟನೆ
ಉಡುಪಿ: ನಮ್ಮ ದೇಶದ ಭವ್ಯ ಪ್ರಾಚೀನ ಸಾಂಸ್ಕೃತಿಕ ಪರಂಪರೆಗಳಲ್ಲಿ ಒಂದಾಗಿರುವ ಸಂಗೀತ, ನೃತ್ಯ ಕಲೆಯನ್ನು ಇಂದಿನ ಯುವ ಪೀಳಿಗೆಗೆ ದಾಟಿಸುವ ಅಗತ್ಯವಿದೆ ಎಂದು ತಲ್ಲೂರು ಫ್ಯಾಮಿಲಿ ಟ್ರಸ್ಟ್ನ ಪ್ರವರ್ತಕ, ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಗುರುವಾರ ಉಡುಪಿ ಬ್ರಹ್ಮಗಿರಿಯ ಕಾಡಬೆಟ್ಟುವಿನಲ್ಲಿ ನೃತ್ಯಗುರು ವಿದುಷಿ ಶಾಂಭವಿ ಆಚಾರ್ಯ ಅವರ ಭರತನಾಟ್ಯ ತರಬೇತಿ ಶಾಲೆ ‘ನರ್ತಕಿ’ಯ ನೂತನ ಶಾಖೆಯನ್ನು ಉದ್ಘಾಟಿಸಿ ಮಾತನಾಡಿದರು. ಪ್ರಾಚೀನ ಭಾರತದಲ್ಲಿ ರಾಜಾಶ್ರಯ ಪಡೆದಿದ್ದ, ಭರತಮುನಿಗಳಿಂದ ಲೋಕಾರ್ಪಣೆಗೊಂಡ ಈ ಶ್ರೀಮಂತ […]
ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ ಖ್ಯಾತ ಗಾಯಕ ವಿಜಯ್ ಪ್ರಕಾಶ್
ಉಡುಪಿ: ಕರ್ನಾಟಕದ ಖ್ಯಾತ ಸಂಗೀತಗಾರ ವಿದ್ವಾನ್ ವಿಜಯಪ್ರಕಾಶ್ ರವರು ಆಗಮಿಸಿ ದೇವರ ದರ್ಶನ ಮಾಡಿ ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದುಕೊಂಡರು. ಈ ಸಂದರ್ಭದಲ್ಲಿ, ಪರ್ಯಾಯ ಮಠದ ದಿವಾನರಾದ ವರದರಾಜ ಭಟ್,ನಾರಾಯಣ ಸರಳಾಯ ಮೊದಲಾದವರು ಉಪಸ್ಥಿತರಿದ್ದರು.
ಕೇಂದ್ರ ಸಚಿವರಿಂದ ಶ್ರೀಕೃಷ್ಣಮಠ ಭೇಟಿ
ಉಡುಪಿ: ಭಾರತ ಸರಕಾರದ ಕೇಂದ್ರ ಮಾಹಿತಿ ಮತ್ತು ಪ್ರಸಾರ ಹಾಗೂ ಯುವ ವ್ಯವಹಾರಗಳು ಮತ್ತು ಕ್ರೀಡಾ ಇಲಾಖೆ ಸಚಿವ ಅನುರಾಗ್ ಸಿಂಗ್ ಠಾಕೂರ್ ಶ್ರೀಕೃಷ್ಣಮಠಕ್ಕೆ ಆಗಮಿಸಿ ದೇವರ ದರ್ಶನ ಮಾಡಿ ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದುಕೊಂಡರು. ಈ ಸಂದರ್ಭದಲ್ಲಿ, ಕರ್ನಾಟಕ ರಾಜ್ಯ ರೇಷ್ಮೆ ಹಾಗೂ ಕ್ರೀಡಾ ಮತ್ತು ಯುವ ಸಬಲೀಕರಣ ಸಚಿವ ಡಾ.ನಾರಾಯಣ ಗೌಡ, ಶಾಸಕ ಕೆ.ರಘುಪತಿ ಭಟ್, ಉಡುಪಿ ಜಿಲ್ಲಾಧಿಕಾರಿ ಕೂರ್ಮಾ್ರಾವ್ ಪರ್ಯಾಯ ಮಠದ ದಿವಾನ ವರದರಾಜ ಭಟ್, ಪರ್ಯಾಯ […]
ಡಿ. 27 ರಿಂದ 30 ರವರೆಗೆ ಜಿಲ್ಲಾ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ
ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಡಿಸೆಂಬರ್ 27 ರಿಂದ 30 ರ ವರೆಗೆ ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ. ಡಿ. 27 ರಂದು 220/110/11ಕೆವಿ ಕೇಮಾರ್ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಫೀಡರ್‌ಗಳಾದ ನಿಟ್ಟೆ, ಕಲ್ಯಾ, ಲೆಮಿನಾ, ನಿಟ್ಟೆ ವಾಟರ್ ಸಪ್ಲೈ, 110ಕೆವಿ ಕಾರ್ಕಳ ಉಪಕೇಂದ್ರದಿಂದ ಹೊರಡುವ 11ಕೆವಿ ಪದವು ಫೀಡರ್ ಹಾಗೂ 110 ಕೆವಿ ಬೆಳ್ಮಣ್ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆ.ವಿ ಫೀಡರ್‌ಗಳಾದ […]