ರಾಷ್ಟ್ರಮಟ್ಟದ ಕಲೋತ್ಸವ- ಕರ್ನಾಟಕ ಶಾಸ್ತ್ರೀಯ ವಾದ್ಯ ಸಂಗೀತ ಸ್ಪರ್ಧೆ: ಕು.ಕಾದಂಬರಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಉಡುಪಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವಾಲಯ, ಭಾರತ ಸರಕಾರ ಹಾಗೂ ಎನ್.ಸಿ.ಇ.ಆರ್.ಟಿ ನವದೆಹಲಿ ವತಿಯಿಂದ ನಡೆಸಲಾಗುವ ರಾಷ್ಟ್ರಮಟ್ಟದ ಕಲೋತ್ಸವ-2022 ರಲ್ಲಿ ಕುಮಾರಿ ಕಾದಂಬರಿ ಡಿ ಕರ್ನಾಟಕ ಶಾಸ್ತ್ರೀಯ ವಾದ್ಯ ಸಂಗೀತ ಸ್ಪರ್ಧೆ-ವೀಣಾ ವಿಭಾಗದಲ್ಲಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು, ಒಡಿಸ್ಸಾದ ಭುವನೇಶ್ವರದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಲಿದ್ದಾಳೆ. ಕಾದಂಬರಿ ಮಣಿಪಾಲದ ಮಾಧವ ಕೃಪಾ ಆಂಗ್ಲ ಮಾಧ್ಯಮ ಶಾಲೆಯ 10 ನೇ ತರಗತಿ ವಿದ್ಯಾರ್ಥಿನಿಯಾಗಿದ್ದು, ಡಾ. ಗಾಯತ್ರಿ ಮತ್ತು ಡಾ ಶ್ರೀಧರ್ ಇವರ […]

ಸರ್ಕಲ್ ಮಟ್ಟದ ಅಂಚೆ ಚೀಟಿ ವಿನ್ಯಾಸ ಸ್ಪರ್ಧೆ: ಕು.ದೀಪಿಕಾ ಭಟ್ಟ್ ಗೆ ಪ್ರಮಾಣ ಪತ್ರ

ಉಡುಪಿ: ಆಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ಕರ್ನಾಟಕ ಸರ್ಕಲ್ ಮಟ್ಟದ ಅಂಚೆ ಚೀಟಿ ವಿನ್ಯಾಸದ ಸ್ವರ್ಧೆಯಲ್ಲಿ ವಿಜೇತಳಾದ ಕು.ದೀಪಿಕಾ ಭಟ್ಟ್ ಗೆ ದಕ್ಷಿಣ ಕರ್ನಾಟಕ ವಲಯದ ಪೋಸ್ಟ್ ಮಾಸ್ಟರ್ ಜನರಲ್ ಸುರೇಶ್ ಗುಪ್ತಾ ಇವರು ಸ್ಮರಣಿಕೆ ಮತ್ತು ಪ್ರಮಾಣ ಪತ್ರವನ್ನು ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಉಡುಪಿ ಅಂಚೆ ಅಧೀಕ್ಷಕ ನವೀನ್ ಚಂದರ್ ಮೂಳೂರು ಮತ್ತು ಉಡುಪಿ ಪ್ರಧಾನ ಅಂಚೆ ಕಚೇರಿಯ ಪೋಸ್ಟ್ ಮಾಸ್ಟರ್ ಗುರು ಪ್ರಸಾದ್ ಉಪಸ್ಥಿತರಿದ್ದರು.

ಸುರತ್ಕಲ್: ಚಾಕುವಿನಿಂದ ಇರಿದು ವ್ಯಕ್ತಿ ಹತ್ಯೆ; ಸೆಕ್ಷನ್ 144 ಜಾರಿ

ಸುರತ್ಕಲ್: ಇಲ್ಲಿನ ಕೃಷ್ಣಾಪುರ ಪ್ರದೇಶದಲ್ಲಿ ಇಬ್ಬರು ಅಪರಿಚಿತ ದುಷ್ಕರ್ಮಿಗಳು ವ್ಯಕ್ತಿಯೊಬ್ಬನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ಹಲ್ಲೆಗೊಳಗಾದ ವ್ಯಕ್ತಿಯನ್ನು ಜಲೀಲ್ ಎಂದು ಗುರುತಿಸಲಾಗಿದೆ. ಕೃಷ್ಣಾಪುರ ಪ್ರದೇಶದಲ್ಲಿ ಪ್ರಾವಿಷನ್ ಸ್ಟೋರ್ ನಡೆಸುತ್ತಿದ್ದರು. ಘಟನೆ ವೇಳೆ ಜಲೀಲ್ ತನ್ನ ಅಂಗಡಿಯಲ್ಲಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ. ಹತ್ಯೆಯ ನಂತರ ಆ ಪ್ರದೇಶದಲ್ಲಿ ಆತಂಕ ಮನೆಮಾಡಿದ್ದು, ಆಸ್ಪತ್ರೆಯ ಹೊರಗೆಅಪಾರ ಜನಸ್ತೋಮ ನೆರೆದಿತ್ತು. ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಸುರತ್ಕಲ್, ಬಜ್ಪೆ, ಕಾವೂರು […]

ಭಾರತವನ್ನು ಕ್ರೀಡಾ ಸಾಫ್ಟ್ ಪವರ್ ಆಗಿಸುವುದು ಕೇಂದ್ರದ ಉದ್ದೇಶ: ಅನುರಾಗ್ ಸಿಂಗ್ ಠಾಕೂರ್

ಉಡುಪಿ: ಶನಿವಾರದಂದು ಅಜ್ಜರಕಾಡಿನಲ್ಲಿ ನೂತನವಾಗಿ ನಿರ್ಮಾಣವಾಗಿರುವ ಕ್ರೀಡಾ ವಿಜ್ಞಾನ ಕೇಂದ್ರವನ್ನು ಕೇಂದ್ರ ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಭಾರತವನ್ನು ಕ್ರೀಡಾ ಸಾಫ್ಟ್ ಪವರ್ ಆಗಿ ಪರಿವರ್ತಿಸಲು ಸರ್ಕಾರ ಪ್ರಯತ್ನ ನಡೆಸುತ್ತಿದೆ ಎಂದರು. ಕ್ರೀಡೆಯಾಗಿ ಕಬಡ್ಡಿಯು ಫುಟ್ಬಾಲ್ ಮತ್ತು ಕ್ರಿಕೆಟ್‌ನಂತೆ ವೃತ್ತಿಪರ ಪ್ರಾಮುಖ್ಯತೆಯನ್ನು ಪಡೆಯುತ್ತಿದೆ. ಅಟಲ್ ಜೀ ಸ್ಮರಣಾರ್ಥ ಉಡುಪಿಯ ಎಂಜಿಎಂ ಮೈದಾನದಲ್ಲಿ ಇಂದು ಆರಂಭವಾದ ಅಟಲ್ ಟ್ರೋಫಿಯು ಕ್ರೀಡೆಯನ್ನು ಮತ್ತಷ್ಟು ಉತ್ತೇಜಿಸಲು ಮತ್ತು ಭಾರತದಾದ್ಯಂತ […]