ಅಟಲ್ ಉತ್ಸವ: ಮುಂದಿನ ವಿಧಾನಸಭಾ ಚುನಾವಣೆಗೆ ಮುನ್ನುಡಿಯಾದ ಐತಿಹಾಸಿಕ ‘ಬೂತ್ ಸಂಗಮ’ ಕಾರ್ಯಕ್ರಮ
ಉಡುಪಿ: ಬಿಜೆಪಿಯ ವಿಧಾನಸಭಾ ಚುನಾವಣೆಯ ಮುನ್ನುಡಿಯಾಗಿ ನಗರದ ಎಂಜಿಎಂ ಕಾಲೇಜು ಮೈದಾನದಲ್ಲಿ ಭಾರತರತ್ನ ಅಟಲ್ ಬಿಹಾರಿ ವಾಜಪೇಯಿ ಅವರ 98 ನೇ ಜನ್ಮದಿನದ ಅಂಗವಾಗಿ ಅಟಲ್ ಉತ್ಸವ ಆಯೋಜಿಸಲಾಗಿದ್ದು ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಐತಿಹಾಸಿಕ ‘ಬೂತ್ ಸಂಗಮ’ ಕಾರ್ಯಕ್ರಮ ಭಾನುವಾರ ನಡೆಯಿತು. ಉಡುಪಿ ವಿಧಾನಸಭಾ ಕ್ಷೇತ್ರದ ‘ಬೂತ್ ಸಂಗಮ’ದಲ್ಲಿ ನಗರ ಮತ್ತು ಗ್ರಾಮಾಂತರ ಭಾಗದ 226 ಮತಗಟ್ಟೆಗಳಿಂದಲೂ ಕಾರ್ಯಕರ್ತರು ಭಾಗವಹಿಸಿ ಇತಿಹಾಸ ನಿರ್ಮಿಸಿದರು. ಮುಂಬರುವ ವಿಧಾನಸಭೆಯಲ್ಲಿ ಪಕ್ಷ ಸಂಘಟನೆಯ ಬಗ್ಗೆ ಮಂಥನ ನಡೆಸಲಾಯಿತು. […]
20ನೇ ವರ್ಷದ ಮೂಡಬಿದ್ರೆ “ಕೋಟಿ – ಚೆನ್ನಯ” ಜೋಡುಕರೆ ಕಂಬಳ ಕೂಟದ ಫಲಿತಾಂಶ
ಡಿ. 24 ರಂದು ಮೂಡಬಿದ್ರೆಅಯಲ್ಲಿ ನಡೆದ ಕೋಟಿ – ಚೆನ್ನಯ” ಜೋಡುಕರೆ ಕಂಬಳ ಕೂಟದ ಫಲಿತಾಂಶ ಇಂತಿದೆ ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ: ಕನೆಹಲಗೆ: 05 ಜೊತೆ ಅಡ್ಡಹಲಗೆ: 08 ಜೊತೆ ಹಗ್ಗ ಹಿರಿಯ: 27 ಜೊತೆ ನೇಗಿಲು ಹಿರಿಯ: 39 ಜೊತೆ ಹಗ್ಗ ಕಿರಿಯ: 29 ಜೊತೆ ನೇಗಿಲು ಕಿರಿಯ: 150 ಜೊತೆ ಒಟ್ಟು ಕೋಣಗಳ ಸಂಖ್ಯೆ: 258 ಜೊತೆ ಕನೆಹಲಗೆ: (ನೀರು ನೋಡಿ ಬಹುಮಾನ) ಪ್ರಥಮ: ಬೇಲಾಡಿ ಬಾವ ಅಶೋಕ್ ಶೆಟ್ಟಿ ಹಲಗೆ ಮುಟ್ಟಿದವರು: […]
ಕದ್ರಿ ಲಯನ್ಸ್ ಕನ್ನಡ ರತ್ನ ಪ್ರಶಸ್ತಿಗೆ ಕಾದಂಬರಿಕಾರ ವಿವೇಕಾನಂದ ಕಾಮತ್ ಆಯ್ಕೆ
ಮಂಗಳೂರು: ದಕ್ಷಿಣ ಕನ್ನಡ, ಕೊಡಗು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳನೊಳಗೊಂಡ ಲಯನ್ಸ್ ಜಿಲ್ಲೆ 317ಡಿಯ ಲಯನ್ಸ್ ಕ್ಲಬ್ ಕದ್ರಿ ಹಿಲ್ಸ್ ಪ್ರತಿ ವರ್ಷ ಕನ್ನಡದ ಯುವ ಸಾಹಿತಿಗಳು, ಸಾಂಸ್ಕೃತಿಕ ಸಾಧಕರು, ಸಂಘಟಕರಿಗೆ ನೀಡುವ ಕದ್ರಿ ಲಯನ್ಸ್ ಕನ್ನಡ ರತ್ನ (ಕಲಕ) ಪ್ರಶಸ್ತಿಯ 2022ನೇ ಸಾಲಿಗೆ ಸಾಹಿತಿ, ಕಾದಂಬರಿಕಾರ ವಿವೇಕಾನಂದ ಕಾಮತ್ ಇವರು ಆಯ್ಕೆಯಾಗಿದ್ದಾರೆ. ಸಿವಿಲ್ ಇಂಜಿನಿಯರಿಂಗ್ನಲ್ಲಿ ಡಿಪ್ಲೊಮಾ ಪದವೀಧರರಾಗಿರುವ ಇವರು, 1998ರಿಂದ ಬರವಣಿಗೆಯಲ್ಲಿ ತೊಡಗಿಸಿಕೊಂಡು 150ಕ್ಕೂ ಹೆಚ್ಚು ಕಥೆಗಳನ್ನು ಬರೆದಿದ್ದಾರೆ. ಮುಖ್ಯವಾಗಿ ಕನ್ನಡದ ಬಹುತೇಕ ಪತ್ರಿಕೆಗಳಲ್ಲಿ ಇವರ […]