ಉಡುಪಿ: ಡಿ. 29 ರಂದು ವಿದ್ಯುತ್ ವ್ಯತ್ಯಯ

ಉಡುಪಿ: ಉದ್ಯಾವರ ಎಂ.ಯು.ಎಸ್.ಎಸ್ ನಿಂದ ಹೊರಡುವ ಸಂಪಿಗೆನಗರ ಮತ್ತು ಕಡೆಕಾರ್ ಫೀಡರ್‌ನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಸಾಲ್ಮರ, ಕಲಾಯಿಬೈಲು, ಸಂಪಿಗೆನಗರ, ಕುತ್ಪಾಡಿ, ಅನಂತಕೃಷ್ಣನಗರ, ಕಡೆಕಾರು, ಕಿದಿಯೂರು, ಪಡುಕೆರೆ, ಕನ್ನರ್ಪಾಡಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಾಗೂ 110/11ಕೆವಿ ಮಧುವನ ಉಪವಿದ್ಯುತ್ ಕೇಂದ್ರದಿಂದ ಹೊರಡುವ 11 ಕೆವಿ ಬಾರ್ಕೂರು ಎಕ್ಸ್ಪ್ರೆಸ್ ಫೀಡರಿನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಹೊಸಾಳ, ಕಚ್ಚೂರು, ರಂಗನಕೆರೆ, ಹೇರಾಡಿ, ಹನೆಹಳ್ಳಿ, ಕೂರಾಡಿ, ನಡೂರು, ಪಡುನೀಲಾವರ, ಬೆಣ್ಣೆಕುದ್ರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಡಿಸೆಂಬರ್ 29 ರಂದು […]

ಸುರತ್ಕಲ್ ಹತ್ಯೆ ಪ್ರಕರಣದಲ್ಲಿ ಮೂವರ ಬಂಧನ: ಎನ್. ಶಶಿಕುಮಾರ್

ಸುರತ್ಕಲ್: ಡಿಸೆಂಬರ್ 24 ರಂದು ಕಾಟಿಪಳ್ಳದಲ್ಲಿ ನಡೆದ ಜಲೀಲ್ ಹತ್ಯೆಗೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಸೋಮವಾರದಂದು ತಿಳಿಸಿದ್ದಾರೆ. ಬಂಧಿತರನ್ನು ಕೃಷ್ಣಾಪುರದ ಶೈಲೇಶ್ ಪೂಜಾರಿ (21), ಹೆಜಮಾಡಿಯ ಸವಿನ್ ಕಾಂಚನ್ (24) ಮತ್ತು ಕಾಟಿಪಳ್ಳದ ಪವನ್ ಅಲಿಯಾಸ್ ಪಚ್ಚು (23) ಎಂದು ಗುರುತಿಸಲಾಗಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಜಲೀಲ್ ಅವರ ಫ್ಯಾನ್ಸಿ ಸ್ಟೋರ್ ಬಳಿ ಇಬ್ಬರು ವ್ಯಕ್ತಿಗಳು ಚಾಕುವಿನಿಂದ ಅವರನ್ನು ಇರಿದಿದ್ದಾರೆ. ಇಬ್ಬರು ಹತ್ಯೆಕೋರರನ್ನೂ ಮತ್ತು ಚೂರಿ ಇರಿತದ ನಂತರ ವರಿಗೆ ಪರಾರಿಯಾಗಲು […]

ಕೆ.ಪಿ.ಎಸ್ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳಿ: ಡಾ. ವಿಶಾಲ್

ಉಡುಪಿ: ಶಾಲಾ ಕಟ್ಟಡ ನಿರ್ಮಾಣ ಸಂದರ್ಭದಲ್ಲಿ ಮಕ್ಕಳ ದಾಖಲಾತಿಗೆ ಅನುಗುಣವಾಗಿ ಕೊಠಡಿಗಳನ್ನು ನಿರ್ಮಿಸುವಂತೆ ಇಂಜಿನಿಯರಿಂಗ್ ಅಧಿಕಾರಿಗಳಿಗೆ ಸೂಚನೆ ನೀಡಿದ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಡಾ. ವಿಶಾಲ್ ಆರ್, ಕೆ.ಪಿ.ಎಸ್ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ತಿಳಿಸಿದರು. ಕೆ.ಪಿ.ಎಸ್ ಶಾಲೆಗಳಿಗೆ ಹೆಚ್ಚುವರಿ ಕೊಠಡಿ ನಿರ್ಮಾಣ ಮಾಡಲು ಅನುದಾನ ಮಂಜೂರು ಮಾಡಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಅವರು ಸೋಮವಾರ ಜಿಲ್ಲಾ ಪಂಚಾಯತ್‌ನ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಶಿಕ್ಷಣ ಇಲಾಖೆಯ ವಿವಿಧ […]

ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯ ಪರಿಶೀಲಿಸಿದ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್

ಉಡುಪಿ: ಜಿಲ್ಲೆಯ ಮತದಾರರ ಪಟ್ಟಿಯ ಪರಿಷ್ಕರಣಾ ಕಾರ್ಯದ ಅಂಗವಾಗಿ ಜಿಲ್ಲೆಗೆ ಭೇಟಿ ನೀಡಿದ ಜಿಲ್ಲಾ ಮತದಾರರ ಪಟ್ಟಿಯ ವೀಕ್ಷಕ ಹಾಗೂ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್ ಸೋಮವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದರು. ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಅವಧಿಯಲ್ಲಿ 8122 ಮಂದಿ ಯುವ ಮತದಾರರನ್ನು ಹೊಸದಾಗಿ ಮತದಾರರ ಪಟ್ಟಿಗೆ ಸೇರ್ಪಡೆ ಮಾಡಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಯುವ ಮತದಾರರ ಸೇರ್ಪಡೆ ಕಾರ್ಯವನ್ನು ಚುನಾವಣಾ ಆಯೋಗವು ವರ್ಷದಲ್ಲಿ ನಿಗದಿಪಡಿಸಿರುವ […]

ಗುಣಮಟ್ಟ ಖಾತರಿ ಪಡಿಸಿಕೊಂಡು ಸರಕು ಯಾ ಸೇವೆಗಳನ್ನು ಖರೀದಿಸಿ: ನ್ಯಾ. ಶರ್ಮಿಳಾ ಎಸ್

ಉಡುಪಿ: ಮಾರುಕಟ್ಟೆಯಲ್ಲಿ ಗ್ರಾಹಕನೇ ಸಾರ್ವಭೌಮನಾಗಿದ್ದು, ಸರಕು ಮತ್ತು ಸೇವೆಗಳನ್ನು ಖರೀದಿಸುವಾಗ ಗ್ರಾಹಕರು ತಮ್ಮ ಹಕ್ಕುಗಳು ಮತ್ತು ಜವಾಬ್ದಾರಿಗಳ ಬಗ್ಗೆ ತಿಳಿದಿರಬೇಕು. ಸರಕಾರಿ ಮತ್ತು ಖಾಸಗಿ ವಲಯದಲ್ಲಿ ಯಾವುದೇ ಸರಕು ಮತ್ತು ಸೇವೆಗಳನ್ನು ಪಡೆಯುವ ಮುನ್ನ ಗ್ರಾಹಕರು ಆ ವಸ್ತುಗಳು ಮತ್ತು ಸೇವೆಯ ಬಗ್ಗೆ ಸಂಪೂರ್ಣವಾಗಿ ಪರಿಶೀಲಿಸಿ, ಗುಣಮಟ್ಟವನ್ನು ಖಾತರಿಪಡಿಸಿಕೊಂಡು ಅವುಗಳನ್ನು ಖರೀದಿಸಬೇಕು. ಮಾರಾಟಗಾರರು ಕಳಪೆ ವಸ್ತುಗಳನ್ನು ಮೋಸದಿಂದ ಗ್ರಾಹಕರಿಗೆ ಮಾರಿದ್ದಲ್ಲಿ ಅಂತಹ ಮಾರಾಟಗಾರರಿಂದ ಸೂಕ್ತ ಪರಿಹಾರ ಪಡೆಯುವ ಹಕ್ಕುಗಳನ್ನು ಗ್ರಾಹಕರು ಹೊಂದಿದ್ದು, ಉಡುಪಿ ಜಿಲ್ಲೆಯಲ್ಲಿ ಗ್ರಾಹಕರ ವ್ಯಾಜ್ಯಗಳ […]