ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಿರುಷಷ್ಠಿ ಪ್ರಯುಕ್ತ ಸಹಸ್ರ ಕದಳಿ ಯಾಗ
ಉಡುಪಿ: ಮುಚಲಗೂಡು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿಇಂದು ಕಿರುಷಷ್ಠಿ ಪ್ರಯುಕ್ತ ಶ್ರೀ ದೇವರ ಸನ್ನಿಧಿಯಲ್ಲಿ ಸಹಸ್ರ ಕದಳಿ ಯಾಗ ನಡೆಯಿತು. ಭಕ್ತರು ದೇವರಿಗೆ ಕದಳಿ ಫಲ ಅರ್ಪಿಸಿ ಮಹಾ ಪೂಜೆಯಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.
ರಾಷ್ಟ್ರೀಯ ಹೆದ್ದಾರಿಗಾಗಿ ಮರಗಳ ತೆರವು: ಸಾರ್ವಜನಿಕ ಅಹವಾಲು ಸಭೆ
ಉಡುಪಿ: ಹೆಬ್ರಿ-ಪರ್ಕಳ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ಸಂಬಂಧಿಸಿದಂತೆ, ಹಿರಿಯಡಕ ಘಟಕ ವ್ಯಾಪ್ತಿಯ ಬೊಮ್ಮರಬೆಟ್ಟು ಗ್ರಾಮದ ಆತ್ರಾಡಿ ವರೆಗೆ ರಸ್ತೆ ಕಾಮಗಾರಿಗೆ ಅಡಚಣೆಯಾಗುವ 997 ವಿವಿಧ ಜಾತಿಯ ಮರಗಳನ್ನು ತೆರವುಗೊಳಿಸುವ ಹಿನ್ನೆಲೆ, 2023 ಜನವರಿ 7 ರಂದು ಮಧ್ಯಾಹ್ನ 3 ಗಂಟೆಗೆ ಉಡುಪಿ ವಲಯ ಕಚೇರಿಯ ಸಭಾಂಗಣದಲ್ಲಿ ಸಾರ್ವಜನಿಕ ಅಹವಾಲು ಸಭೆ ನಡೆಯಲಿದೆ. ಈ ಕುರಿತು ಆಕ್ಷೇಪಣೆಗಳಿದ್ದಲ್ಲಿ ಸಾರ್ವಜನಿಕರು ಸಭೆಯಲ್ಲಿ ಹಾಜರಾಗಿ ಅಥವಾ ಸದ್ರಿ ದಿನಾಂಕದ ಒಳಗೆ ವೃಕ್ಷ ಅಧಿಕಾರಿ ಹಾಗೂಉಪ ಅರಣ್ಯ ಸಂರಕ್ಷಣಾಧಿಕಾರಿ, ಕುಂದಾಪುರ ವಿಭಾಗ […]
ಸಾಲ ಮತ್ತು ಠೇವಣಿ ಪ್ರಮಾಣ ಸರಿದೂಗಿಸಲು ಬ್ಯಾಂಕ್ ಗಳಿಗೆ ಜಿಲ್ಲಾ ಪಂಚಾಯತ್ ಸಿ.ಇ.ಓ ಸೂಚನೆ
ಉಡುಪಿ: ವಿವಿಧ ಸರಕಾರಿ ಯೋಜನೆಗಳ ಸಾಲ ಪಡೆಯಲು ಫಲಾನುಭವಿಗಳು ಬ್ಯಾಂಕ್‌ಗಳಿಗೆ ಸಲ್ಲಿಸುವ ಸಾಲದ ಅರ್ಜಿಗಳನ್ನು ಆದ್ಯತೆಯ ಮೇಲೆ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಮಂಜೂರು ಮಾಡುವಂತೆ ಜಿಲ್ಲೆಯ ಎಲ್ಲಾ ಬ್ಯಾಂಕ್‌ಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ಸೂಚನೆ ನೀಡಿದರು. ಅವರು ಸೋಮವಾರ ರಜತಾದ್ರಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಸಾಲ ಮತ್ತು ಠೇವಣಿ ಪ್ರಮಾಣ ರಾಜ್ಯಕ್ಕೆ ಹೋಲಿಸಿದ್ದಲ್ಲಿ ಕಡಿಮೆ ಇದ್ದು, ಇದನ್ನು ಸರಿದೂಗಿಸಲು […]
ಚಾರ ನವೋದಯ ವಿದ್ಯಾಲಯಕ್ಕೆ ಪಿಟಿಸಿಯಿಂದ ವತಿಯಿಂದ 1.6 ಲಕ್ಷ ಮೊತ್ತದ ಗೀಸರ್ ಹಸ್ತಾಂತರ
ಹೆಬ್ರಿ: ಉಡುಪಿ ಜಿಲ್ಲೆಯ ಚಾರ ಜವಾಹರ ನವೋದಯ ವಿದ್ಯಾಲಯದ ಹುಡುಗರ ಹಾಗೂ ಹುಡುಗಿಯರ ಹಾಸ್ಟೆಲ್ ಗೆ ಸುಮಾರು 1.6 ಲಕ್ಷ ಮೊತ್ತದ ಎಲೆಕ್ಟ್ರಲ್ ಗೀಸರ್ ಚಾರ ಜೆ.ಎನ್.ವಿಯ ಪಿಟಿಸಿ ವತಿಯಿಂದ ಕೊಡಮಾಡಿದ್ದು ಅದರ ಉದ್ಘಾಟನೆಯನ್ನು ಡಿ.27ರಂದು ಚಾರ ಜವಾಹರ ನವೋದಯ ವಿದ್ಯಾಲಯದ ಪ್ರಾಂಶುಪಾಲೆ ವಿಜಯಕುಮಾರಿ ನೆರವೇರಿಸಿದರು. ಈ ಸಂದರ್ಭದಲ್ಲಿ ವಿದ್ಯಾಲಯದ ಉಪ ಪ್ರಾಂಶುಪಾಲೆ ಗೀತಾಲಕ್ಷ್ಮಿ, ಚಾರ ಜವಾಹರ ನವೋದಯ ವಿದ್ಯಾಲಯದ ಪೋಷಕ ಶಿಕ್ಷಕ ಸಮಿತಿಯ ಅಧ್ಯಕ್ಷ ಹೆಬ್ರಿ ಉದಯಕುಮಾರ್ ಶೆಟ್ಟಿ, ಉಪಾಧ್ಯಕ್ಷೆ ಶ್ಯಾಮಲಾ,ಕಾಯ೯ದಶಿ೯ ಡಾ. ಪರಶುರಾಮ್, ಪಿಟಿಸಿ […]