2 ಡೋಸ್ ಕೋವಿಡ್ ಲಸಿಕೆ ಪಡೆದಿರುವವರು ಬೂಸ್ಟರ್ ಡೋಸ್ ಹಾಕಿಸಿಕೊಳ್ಳಿ: ಜಿಲ್ಲಾಧಿಕಾರಿ ಕೂರ್ಮಾರಾವ್ 

ಉಡುಪಿ: ಜನಸಾಮಾನ್ಯರು ಕೋವಿಡ್ ಸಾಂಕ್ರಾಮಿಕ ರೋಗದ ಬಗ್ಗೆ ಆತಂಕ ಪಡದೇ ಸರಳ ಮುನ್ನೆಚ್ಚರಿಕಾ ಕ್ರಮಗಳಾದ ಸಾಮಾಜಿಕ ಅಂತರ ಕಾಪಾಡುವುದು, ಸ್ವಚ್ಛತೆಗೆ ಆದ್ಯತೆ ನೀಡುವುದು, ಮಾಸ್ಕ್ ಗಳನ್ನು ಧರಿಸುವುದು ಸೇರಿದಂತೆ ಮತ್ತಿತರ ಕ್ರಮಗಳನ್ನು ತಪ್ಪದೇ ಪಾಲಿಸಬೇಕು. ಈಗಾಗಲೇ 2 ಡೋಸ್ ಕೋವಿಡ್ ಲಸಿಕೆ ಪಡೆದಿರುವವರು ಬೂಸ್ಟರ್ ಡೋಸ್ ಅನ್ನು ಪಡೆಯಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್ ತಿಳಿಸಿದರು. ಅವರು ಬುಧವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಜಿಲ್ಲಾ ಕೋವಿಡ್ ಮುನ್ನೆಚ್ಚರಿಕೆ ಮತ್ತು ತಾಂತ್ರಿಕ ಸಲಹಾ ಸಮಿತಿ ಸಭೆಯ […]