ಮಗದೊಮ್ಮೆ ಗೆಲುವಿನ ನಗೆ ಬೀರಿದ ಕರಾವಳಿಯ ಕುವರ: ರೂಪೇಶ್ ಶೆಟ್ಟಿಗೆ ಒಲಿದ ಬಿಗ್ ಬಾಸ್ ಟ್ರೋಫಿ

ಬಿಗ್‌ ಬಾಸ್‌ ಕನ್ನಡ ಸೀಸನ್‌ 9 ಫಿನಾಲೆ ಫಲಿತಾಂಶ ಹೊರಬಿದ್ದಿದೆ. ಮಗದೊಮ್ಮೆ ಕರಾವಳಿಯ ಕುವರ ರೂಪೇಶ್ ಶೆಟ್ಟಿ ವಿಜೇತರಾಗಿ ಹೊರಹೊಮ್ಮಿದ್ದಾರೆ. ಬಿಗ್ ಬಾಸ್ ಕನ್ನಡ ಸೀಸನ್ 9 ರಲ್ಲಿ ರೂಪೇಶ್ ಶೆಟ್ಟಿ, ರಾಕೇಶ್ ಅಡಿಗ, ದೀಪಿಕಾ ದಾಸ್, ರೂಪೇಶ್ ರಾಜಣ್ಣ ಮತ್ತು ದಿವ್ಯಾ ಉರುಡುಗ ಐದು ಫೈನಲಿಸ್ಟ್‌ಗಳಾಗಿದ್ದರು. ಎಲ್ಲರನ್ನೂ ಹಿಂದಿಕ್ಕಿ ರೂಪೇಶ್ ವಿಜೇತರಾಗಿ ಗೆಲುವಿನ ನಗೆ ಬೀರಿದ್ದಾರೆ. ಇವರಿಗೆ ಬಿಗ್ ಬಾಸ್ ಟ್ರೋಫಿ ಜೊತೆ 50 ಲಕ್ಷ ರೂ ಬಹುಮಾನವಾಗಿ ದೊರೆಯಲಿದೆ. ರೂಪೇಶ್ ಶೆಟ್ಟಿ ಬಿಗ್ ಬಾಸ್ […]

ಕೋವಿಡ್ ಹಿನ್ನೆಲೆ: ಜಿಲ್ಲಾಡಳಿತದಿಂದ ಹೊಸವರ್ಷಾಚರಣೆಗೆ ಮಾರ್ಗಸೂಚಿ ಬಿಡುಗಡೆ

ಉಡುಪಿ: ಪ್ರಸ್ತುತ ಜಿಲ್ಲೆಯಲ್ಲಿ ಹೊಸ ವರ್ಷದ ಆಚರಣೆ ಹಾಗೂ ಇತರೆ ಸಮಾರಂಭಗಳಲ್ಲಿ ಸಾರ್ವಜನಿಕರು ಗುಂಪಾಗಿ ಸೇರುವುದರಿಂದ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ಸಾಧ್ಯವಾಗದೇ ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಹರಡುವ ಸಾಧ್ಯತೆಗಳು ಹೆಚ್ಚಾಗಿರುವ ಹಿನ್ನೆಲೆ, ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಹಾಗೂ ಕೋವಿಡ್ -19 ಸೋಂಕು ಹರಡುವುದನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಮುಂದಿನ ಆದೇಶದವರೆಗೆ ಈ ಕೆಳಕಂಡ ನಿಬಂಧನೆಗಳನ್ನು ವಿಧಿಸಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿರುತ್ತಾರೆ. ಹೊಸ ವರ್ಷಕ್ಕೆ ಸಂಬಂಧಿಸಿದಂತೆ ಡಿಸೆಂಬರ್ 31 ರಿಂದ ಜನವರಿ 2 ರ ವರೆಗೆ […]

ಉಡುಪಿ: ವ್ಯಕ್ತಿ ನಾಪತ್ತೆ

ಉಡುಪಿ: ಬ್ರಹ್ಮಾವರ ತಾಲೂಕು ಚೇರ್ಕಾಡಿ ಗ್ರಾಮದ ಬಾಯರ್‌ಬೆಟ್ಟು ನಿವಾಸಿ ನಾಗೇಶ ನಾಯ್ಕ (41) ಎಂಬ ವ್ಯಕ್ತಿಯು ಡಿಸೆಂಬರ್ 27 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 4 ಇಂಚು ಎತ್ತರ, ಗೋಧಿ ಮೈಬಣ್ಣ, ಕೋಲು ಮುಖ, ಸಪೂರ ಶರೀರ ಹೊಂದಿದ್ದು, ಕನ್ನಡ, ತುಳು ಹಾಗೂ ಮರಾಠಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ಪೊಲೀಸ್ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444, ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕರು ದೂ.ಸಂಖ್ಯೆ: 0820-2561966 […]

ಜ.2 ರಂದು ಎಸ್.ಡಿ.ಎಂ ಆಸ್ಪತ್ರೆಯಲ್ಲಿ ಕಣ್ಣಿನ ಪೊರೆ ಉಚಿತ ತಪಾಸಣೆ

ಉಡುಪಿ: ಕುತ್ಪಾಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಆಸ್ಪತ್ರೆಯ ಶಾಲಾಕ್ಯತಂತ್ರ ವಿಬಾಗದ ವತಿಯಿಂದ ಕಣ್ಣಿನ ಪೊರೆಯ ಉಚಿತ ತಪಾಸಣಾ ಶಿಬಿರವನ್ನು ಜನವರಿ 2 ರಂದು ಬೆಳಿಗ್ಗೆ 9 ರಿಂದ 5 ರ ವರೆಗೆ ಶಾಲಾಕ್ಯತಂತ್ರ ಹೊರರೋಗಿ ವಿಭಾಗ ಸಂಖ್ಯೆ ೧೦ ರಲ್ಲಿ ನಡೆಸಲಾಗುವುದು. ಪ್ರತಿ ತಿಂಗಳ ಮೊದಲನೆ ಸೋಮವಾರ ಉಚಿತವಾಗಿ ಕಣ್ಣಿನ ಪೊರೆಯ ತಪಾಸಣಾ ಶಿಬಿರವನ್ನು ನಡೆಸಲಾಗುತ್ತದೆ. ರಿಯಾಯತಿ ದರದಲ್ಲಿ ತಜ್ಞ ವೈದ್ಯರಿಂದ ಶಸ್ತ್ರ ಚಿಕಿತ್ಸಾ ಸೌಲಭ್ಯವೂ ಇದೆ. ಹೆಚ್ಚಿನ ಮಾಹಿತಿಗಾಗಿ 0820 2520623 ಅಥವಾ ಇ-ಮೇಲ್ […]

ಮಾಜಿ ಪೋಪ್ ಎಮೆರಿಟಸ್ ಬೆನೆಡಿಕ್ಟ್ XVI ನಿಧನ

ವ್ಯಾಟಿಕನ್ ಸಿಟಿ: 2013 ರಲ್ಲಿ ಮಧ್ಯಯುಗದ ನಂತರ ಕ್ಯಾಥೋಲಿಕ್ ಚರ್ಚ್‌ನ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ ನೀಡಿದ ಮೊದಲ ಪೋಪ್, ಮಾಜಿ ಪೋಪ್ ಬೆನೆಡಿಕ್ಟ್ XVI ಅವರು ಶನಿವಾರ 95 ನೇ ವಯಸ್ಸಿನಲ್ಲಿ ನಿಧನರಾದರು ಎಂದು ವ್ಯಾಟಿಕನ್ ಘೋಷಿಸಿದೆ. “ದುಃಖದಿಂದ, ಪೋಪ್ ಎಮೆರಿಟಸ್, ಬೆನೆಡಿಕ್ಟ್ XVI, ಇಂದು ವ್ಯಾಟಿಕನ್‌ನ ಮೇಟರ್ ಎಕ್ಲೇಸಿಯಾ ಮಠದಲ್ಲಿ 9:34 ಕ್ಕೆ ನಿಧನರಾದರು ಎಂದು ನಾನು ನಿಮಗೆ ತಿಳಿಸುತ್ತೇನೆ, ”ಎಂದು ವ್ಯಾಟಿಕನ್ ವಕ್ತಾರ ಮ್ಯಾಟಿಯೊ ಬ್ರೂನಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಜೋಸೆಫ್ ರಾಟ್ಜಿಂಗರ್ ಎನ್ನುವ ಮೂಲ […]